ಮಂಗಳೂರು | ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ

ಸಾಂದರ್ಭಿಕ ಚಿತ್ರ
ಮಂಗಳೂರು,ನ.28 : ದ.ಕ.ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಸುತ್ತಿರುವ ಸ್ವಯಂ ಸಂಸ್ಥೆಗಳು/ಸಂಘಗಳು/ವೇದಿಕೆಗಳು/ಒಕ್ಕೂಟಗಳು ಹಾಗೂ ಲಯನ್ಸ್ ಕ್ಲಬ್ ಗಾಂಧಿನಗರ ಇವುಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯು ಡಿ.3ರಂದು ಬೆಳಗ್ಗೆ 9ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ಮುಂಚಿತವಾಗಿ ಬೆಳಗ್ಗೆ 9:15ಕ್ಕೆ ವಿಶೇಷ ಚೇತನ ಮಕ್ಕಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಂದ ಮಂಗಳೂರು ವಿವಿ ಕಾಲೇಜು ಆವರಣದಿಂದ ಪುರಭವನ ಸಭಾಂಗಣದವರೆಗೆ ಸಾಮಾಜಿಕ ಅರಿವಿಗಾಗಿ ಪಥಸಂಚಲನ ನಡೆಯಲಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





