ಮಾಣಿ | ಬಾಲ ವಿಕಾಸ ಶಾಲೆಯ ಕೃತಿ ಎನ್.ಪಿ. ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಟ್ಲ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕೃತಿ ಎನ್.ಪಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಪ್ರಹ್ಲಾದ್ ಶೆಟ್ಟಿ ಜೆ., ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ., ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ, ಸೌಮ್ಯ ಎಸ್., ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸುಚೇತ್ ಶೆಟ್ಟಿ ಮಿತ್ತಿಮಾರು ಉಪಸ್ಥಿತರಿದ್ದರು.
ಡಿ.3 ರಿಂದ 6 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಡಿ.13 ರಿಂದ 15 ರವರೆಗೆ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿಗಳಾದ ದಿನೇಶ್ ಬಿ ಮತ್ತು ತೇಜಾಕ್ಷಿ ದಂಪತಿಗಳ ಪುತ್ರಿಯಾಗಿರುವ ಈಕೆಗೆ ಬಾಲವಿಕಾಸ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ಪೂಜಾರಿ, ಸೌಮ್ಯ ಎಸ್ ಹಾಗೂ ಪೆರ್ಮನ್ನೂರು ಬಬ್ಬುಕಟ್ಟೆ ಪ್ರೌಢಶಾಲೆಯ ಗಣೇಶ್ ಕುಲಾಲ್ ಕೊಲ್ಯ ತರಬೇತಿ ನೀಡಿರುತ್ತಾರೆ.







