ಮಂಜೊಟ್ಟಿ : ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ರಕ್ತದಾನ ಶಿಬಿರ

ಅಡ್ಡೂರು, ಡಿ.15: ಹೆಲ್ಪಿಂಗ್ ಹ್ಯಾಂಡ್ಸ್ ಮಂಜೊಟ್ಟಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ರವಿವಾರ ಅಡ್ಡೂರು ಬದ್ರಿಯಾ ಮದ್ರಸ ಸಭಾಂಗಣದಲ್ಲಿ ನಡೆಯಿತು.
ಹೆಲ್ಪಿಂಗ್ ಹ್ಯಾಂಡ್ಸ್ ನ ಅಧ್ಯಕ್ಷ ಮನ್ಸೂರು ಮಣ್ಣಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಸ್ವದಖತುಲ್ಲಾ ಫೈಝಿ ದುಆಗೈದರು. ಅಡ್ಡೂರು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ, ಹೆಲ್ಪಿಂಗ್ ಹ್ಯಾಂಡ್ಸ್ ನ ಸದಸ್ಯ ರಝಾಕ್ ಮಂಜೊಟ್ಟಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಲಹೆಗಾರ ಮುಸ್ತಫಾ ದೆಮ್ಮಲೆ ಮತ್ತಿತರರು ಉಪಸ್ಥಿತರಿದ್ದರು.
ಎಸ್.ಬಿ. ಮುಸ್ತಫಾ ಕಾರ್ಯಕ್ರಮ ನಿರೂಪಿಸಿದರು. ಶಾಹಿಕ್ ಪಾಂಡೆಲ್ ವಂದಿಸಿದರು.
Next Story





