Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ...

ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ ಒತ್ತು: ಡಾ. ಮೀನಾ ಕುಮಾರಿ

ವಾರ್ತಾಭಾರತಿವಾರ್ತಾಭಾರತಿ24 May 2024 10:29 PM IST
share
ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ ಒತ್ತು: ಡಾ. ಮೀನಾ ಕುಮಾರಿ

ಮಂಗಳೂರು: ಸಮುದ್ರ ಮಟ್ಟದಿಂದ 200ರಿಂದ 1000 ಮೀಟರ್ ಕೆಳ ಭಾಗದ ಮೆಸೊಪೆಲಾಜಿಕ್ ವಲಯದಲ್ಲಿರುವ ಆಹಾರವಾಗಿ ಉಪಯೋಗಿಸಲಾಗದ ಮೀನುಗಳ ಕೊಯ್ಲು ಔಷಧೀಯ ಅಥವಾ ಸೌಂದರ್ಯ ವರ್ಧಕಳಲ್ಲಿ ಬಳಕೆ ಮಾಡುವ ಮೂಲಕ ಆರ್ಥಿಕತೆಗೆ ಒತ್ತು ನೀಡಬಹುದಾಗಿದೆ. ಸಮುದ್ರದಲ್ಲಿ ಸುಸ್ಥಿರ ಮೀನುಗಾರಿಕೆಯನ್ನು ಕಾಯ್ದುಕೊಳ್ಳುವುದರೊಂದಿಗೆ ಈ ಮೀನುಗಳ ಸಂಗ್ರಹಕ್ಕೆ ಸೂಕ್ತ ತಂತ್ರಜ್ಞಾನದ ಅವಿಷ್ಕಾರದೊಂದಿಗೆ ಸಮಗ್ರ ಸಂಶೋಧನೆಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ ಎಂದು

ರಾಷ್ಟ್ರೀಯ ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷೆ ಮತ್ತು ಐಸಿಎಆರ್‌ನ ಮಾಜಿ ಉಪನಿರ್ದೇಶಕಿ ಞಾ. ಬಿ. ಮೀನ ಕುಮಾರಿ ಅಭಿಪ್ರಾಯಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ‘ಭಾರತದ ಕಡಲಾಳದ ಮೆಸೊಪೆಲಾಜಿಕ್ ಮೀನುಗಳ ಸುಸ್ಥಿರ ಕೊಯ್ಲು ಮತ್ತು ಬಳಕೆಯ ಸಾಧ್ಯತೆಗಳ ಅನ್ವೇಷಣೆ’ ಕುರಿತ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವರದಿಯ ಪ್ರಕಾರ ಭಾರತದ ಸಮುದ್ರ ವ್ಯಾಪ್ತಿಯಲ್ಲಿ 172 ಮಿಲಿಯನ್ ಟನ್ ಇಂತಹ ಆಹಾರವಾಗಿ ಉಪಯೋಗಿಸಲಾದ ಮೀನುಗಳಿವೆ. ಮೇಣ ರೂಪದಲ್ಲಿ ಅಥವಾ ಜೆಲ್ಲಿ ರೂಪದಲ್ಲಿರುವ ಈ ಮೀನುಗಳು ಸಾಮಾನ್ಯವಾಗಿ ಮೀನುಗಳನ್ನು ಆಹಾರವಾಗಿ ಬಳಸಲಾಗುವುದಿಲ್ಲ. ಆದರೆ ಮೀನುಗಾರರ ಬಲೆಗೆ ಬೀಳುವ ಈ ತೆರನಾದ ಸಣ್ಣ ಮೀನುಗಳನ್ನು ಸಾಮಾನ್ಯವಾಗಿ ಎಸೆಯಲಾಗುತ್ತಿತ್ತು. ಪ್ರಸಕ್ತ ಫಿಶ್ ಮೀಲ್‌ಗಳಲ್ಲಿ ಗೊಬ್ಬರವಾಗಿ ಬಳಕೆ ಮಾಡಲಾಗುತ್ತದೆ. ಈ ಮೀನುಗಳ ಸಂಗ್ರಹ ಹಾಗೂ ಬಳಕೆಯ ಬಗ್ಗೆ 1986ರಿಂದಲೂ ಭಾರತದಲ್ಲಿ ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಯ ಕೆಲವೊಂದು ಅಂಶಗಳನ್ನೇ ತಮ್ಮದಾಗಿಸಿಕೊಂಡು ಯೂರೋಪ್, ಅಮೆರಿಕ, ಜಪಾನ್‌ನಂತಹ ದೇಶಗಳಲ್ಲಿ ಈ ಮೀನುಗಳಿಂದ ಔಷಧಗಳನ್ನು ತಯಾರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಹಾಗಾಗಿ ಆಹಾರವಾಗಿ ಬಳಕೆಯಾಗದ ಮೀನುಗಳ ಜೀವಕಣಗಳ ಇನ್ನಷ್ಟು ಸಂಶೋಧನೆಯ ಮೂಲಕ ಭಾರತದಲ್ಲಿ ಈ ಮೀನುಗಳ ಸುಸ್ಥಿರ ಸಂಗ್ರಹ ಮತ್ತು ಉತ್ಪನ್ನಗಳಿಗೆ ಒತ್ತು ನೀಡಬೇಕಾಗಿದೆ ಎಂದವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಐಸಿಎಆರ್-ಸಿಎಂಎಫ್‌ಆರ್‌ಐನ ನಿರ್ದೇಶಕ ಡಾ. ಎ. ಗೋಪಾಲಕೃಷ್ಣನ್, ವಿಶ್ವದಾದ್ಯಂತ ಸಮುದ್ರದಾಳದಲ್ಲಿ ಆಹಾರವಾಗಿ ಬಳಕೆಯಾಗದ ಮತ್ಸ್ಯ ಸಂಪತ್ತು ಸುಮಾರು 12000 ಮಿಲಿಯನ್ ಮೆಟ್ರಿಕ್ ಟನ್ ಇರುವುದಾಗಿ ಅಂದಾಜಿಸಲಾಗಿದೆ. ಭಾರತೀಯ ಸಮುದ್ರದಲ್ಲಿಯೂ 160 ತಳಿಗಳೊಂದಿಗೆ 365 ಮಿಲಿಯನ್ ಮೆಟ್ರಿಕ್ ಟನ್ ಇಂತಹ ಮೀನು ಇರುವುದಾಗಿ ಅಂದಾಜಿಸಲಾಗಿದೆ ಎಂದರು.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಆಗಬಹುದಾಗ ಪರಿಣಾಮಗಳನ್ನು ಅನ್ವೇಷಿಸಿಕೊಂಡು ಈ ಮೀನುಗಳ ಬಳಕೆಯ ಕುರಿತಂತೆ ಸಿಎಂಎಫ್‌ಐಆರ್ ಮೂಲಕ ಪೈಲಟ್ ಯೋಜನೆ ಜಾರಿಯಲ್ಲಿದೆ. ಕರಾವಳಿಯ ಸಮುದ್ರವು ಈಗಾಗಲೇ ಅತಿಯಾದ ಮೀನುಗಾರಿಕೆಗೆ ಒಳಗಾಗಿದೆ ಎಂದು ಅಪವಾದ ಇರುವ ಸಮಯದಲ್ಲಿ ಸಮುದ್ರ ಮಟ್ಟದಿಂದ ಸುಮಾರು 200 ಮೀಟರ್ ತಳಭಾಗದಲ್ಲಿರುವ ಇಂತಹ ಆಹಾರವಾಗಿ ಉಪಯೋಗಿಸಲಾದ ಮೀನುಗಳ ಉಪ ಉತ್ಪನ್ನಗಳತ್ತ ಗಮನ ಹರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಐಸಿಎಆರ್‌ನ ಸಹಾಯಕ ಮಹಾ ನಿರ್ದೇಶಕ ಡಾ. ಸುಭದೀಪ್ ಘೋಷ್, ರಾಜ್ಯ ಸರಕಾರದ ಮೀನುಗಾರಿಕಾ ಇಲಾಖೆಯ ನಿರ್ದೇಶಕ ದಿನೇಶ್ ಕಲ್ಲಾರ್, ಡಾ. ಶೋಭಾ ಜೆ., ಡಾ. ಪ್ರವೀಣ್ ಪುತ್ರನ್, ಸಾಧು ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಡಾ. ಸುಜಾತ ಥಾಮಸ್ ಸ್ವಾಗತಿಸಿದರು. ಡಾ. ರಾಜೇಶ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X