ಮಾರ್ನಬೈಲ್ | ಎಸ್‌ಎಂಆರ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ : ಮಾರ್ನಬೈಲ್ ಇಲ್ಲಿನ ಎಸ್.ಎಂ.ಆರ್ ಪಬ್ಲಿಕ್ ಸ್ಕೂಲ್ ನ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಬಂಟ್ವಾಳ ನಗರ ಠಾಣೆಯ ಉಪ ನಿರೀಕ್ಷಕ ಸಂದೀಪ್ ಶೆಟ್ಟಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಎಸ್ ಎಂ ಆರ್ ಸಂಸ್ಥೆಯ ವ್ಯವಸ್ಥಾಪಕ ರಿಫಾತ್ ಅಹಮದ್, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸಂದೀಪ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಫಾತಿಮತುಲ್ ಝಹೀರ ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ಮತ್ತು ಕವಾಯತುಗಳು ನಡೆದವು. ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಾದ ಫಾರಿಷ ಶಮೀಹ ಸ್ವಾಗತಿಸಿ, ತಾಝಿಂ ವಂದಿಸಿದರು. ಮನ್ಹ ಕಾರ್ಯಕ್ರಮ ನಿರೂಪಿಸಿದರು.
Next Story







