ಉಚ್ಚಿಲ: ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ

ಉಳ್ಳಾಲ: ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಭಾರೀ ದಾಸ್ತಾನು ಇರಿಸಲಾಗಿದ್ದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿದ ಘಟನೆ ರಾ.ಹೆ. 66 ರ ತಲಪಾಡಿ ಸಮೀಪದ ಉಚ್ಚಿಲ ಹೆದ್ದಾರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ.
ಮೊದಲು ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ.
ಘಟನೆಯಿಂದ ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕದಳ ವಾಹನವು ಸ್ಥಳಕ್ಕೆ ವಿಳಂಬವಾಗಿ ಆಗಮಿಸಿದೆ ಎಂದು ಆರೋಪಿಸಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story







