Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸಲು...

ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ13 Oct 2025 5:10 PM IST
share
ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ)ಸಿಡಬ್ಲ್ಯುಎಫ್‌ಐ -ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು.

ಬಳಿಕ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿದ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಅವರು ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ನಾಟಕ ಮಾಡುತ್ತಿರುವುದು ಖಂಡನೀಯ ಎಂದರು.

ಕಳೆದ ಮೂರುವರೆ ತಿಂಗಳಿನಿಂದ ಈ ಸಮಸ್ಯೆಯನ್ನು ಪರಿಹರಿಸದೆ ಇರುವುದು ಆಕ್ಷೇಪಾರ್ಹವಾಗಿದೆ. ಕೆಲಸ ಕಳೆದುಕೊಂಡು ತೊಂದರೆಗೊಳಗಾದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಒಂದು ಕಡೆಯಾದರೆ, ಮನೆ ಕಟ್ಟಲು ಸಾಧ್ಯವಾಗದೆ ಕಚ್ಛಾ ವಸ್ತುಗಳಿಗೆ ವಿಪರೀತ ಬೆಲೆ ತೆರಬೇಕಾದ ಜನಸಾಮಾನ್ಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಳುವ ಪಕ್ಷದವರು ಸಮಸ್ಯೆ ಇತ್ಯರ್ಥವಾಗಿದೆ ಎಂದು ಡಂಗುರ ಸಾರುತ್ತಿದ್ದಾರೆ. ಇದರ ಲಾಭವನ್ನು ಅನಧಿಕೃತ ವ್ಯಕ್ತಿ ಸಂಸ್ಥೆಗಳು ಪಡೆಯುವಂತಾಗಿದೆ ಎಂದರು .

ಏರಿಕೆಯಾದ ಕೆಂಪು ಕಲ್ಲಿನ ದರ ಮತ್ತು ಮರಳಿನ ದರವನ್ನು ಜನಪರವಾಗಿ ನಿರ್ಧರಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಹತ್ತು ದಿನಗಳಾದರೂ ದಿವ್ಯ ಮೌನವೇ ಉತ್ತರವಾಗಿದೆ. ಸಾಮಾನ್ಯ ಜನರ ತಾಳ್ಮೆಗೂ ಮಿತಿ ಇರಲಿ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ತನಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ ಮಾಸಿಕವಾಗಿ ಹತ್ತು ಸಾವಿರ ರೂ.ನಂತೆ ಪರಿಹಾರ ಮೊತ್ತ ನೀಡಬೇಕೆಂದು ಒತ್ತಾಯಿಸಿದರು.

ಫೆಡರೇಶನ್ ಜಿಲ್ಲಾ ಕಾರ್ಯದರ್ಶಿ ಚಂದ್ರಹಾಸ ಪಿಲಾರ್‌ರವರು ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನಗತ್ಯ ಕಿರುಕುಳ ನೀಡುವುದರ ಬದಲು ಎಲ್ಲಾ ನೋಂದಾಯಿತ ಕಾರ್ಮಿಕರಿಗೆ ನೀಡಬೇಕಾದ ಸವಲತ್ತನ್ನು ಸರಳವಾಗಿ ಮತ್ತು ನಿರಂತರವಾಗಿ ನೀಡುತ್ತಿರಬೇಕು. ಜಿಲ್ಲಾಡಳಿತದ ಕಾನೂನು ಕ್ರಮ ಕಟ್ಟುನಿಟ್ಟಿನ ನಿಯಮಗಳು ಅಭಿನಂದನಾರ್ಹವಾಗಿದ್ದರೂ ಕೆಂಪು ಕಲ್ಲು ಮತ್ತು ಮರಳು ಲಭ್ಯವೇ ಇಲ್ಲದ ಸ್ಥಿತಿ ನಿರ್ಮಾಣವಾದರೆ ಏನು ಪ್ರಯೋಜನ ಎಂದು ಅವರು ಪ್ರಶ್ನಿಸಿದರು.

ಈ ರೀತಿಯ ಕಾನೂನು ಕ್ರಮಗಳಿಂದ ಜನಸಾಮಾನ್ಯರು ತೊಂದರೆಗೊಳಾದರೆ, ಅದರ ಲಾಭವನ್ನು ದುಷ್ಕರ್ಮಿಗಳೇ ಪಡೆಯುತ್ತಾರೆ. ಆದುದರಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ ಮುಂದುವರಿಯಬೇಕೆಂದು ಆಗ್ರಹಿಸಿದರು.

ವಲಸೆ ಕಾರ್ಮಿಕರಾದ ಬಿಹಾರದ ಅಲ್ತಾಫ್‌ ಮಾತನಾಡಿ, ಕೆಲಸಕ್ಕಾಗಿ ಅಲೆದಾಡುತ್ತಾ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ನಾವು ಕೆಲಸವಿಲ್ಲದೆ ಬಿಕಾರಿಗಳಾಗಿದ್ದೇವೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಅಸ್ಸಾಂನಿಂದ ನಾವು ಇಲ್ಲಿ ಬಂದು ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ. ಕೆಲಸವಿಲ್ಲದ ಸ್ಥಿತಿ ನಿರ್ಮಾಣಗೊಂಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ವಿನಂತಿಸಿದರು.

ಪ್ರತಿಭಟನೆಯ ಸಮಾರೋಪ ಭಾಷಣ ಮಾಡಿದ ಫೆಡರೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಅವರು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಹೋರಾಟವನ್ನು ಅಪಹಾಸ್ಯ ಮಾಡುವುದು ಬೇಡ. ರಾಜ್ಯ ಸರಕಾರ, ವಿರೋಧ ಪಕ್ಷದ ಶಾಸಕರು ಮೋಸ ಮಾಡುವ ಬದಲು ನೈಜ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು. ಸಿಐಟಿಯು ಸಂಘಟನೆ ಕಳೆದ ಮೂರುವರೆ ತಿಂಗಳಲ್ಲಿ ಇದು ನಾಲ್ಕನೇ ಹಂತದ ಹೋರಾಟ. ಇನ್ನೂ ಸಮಸ್ಯೆ ಬಗೆಹರಿಯದಿದ್ದರೆ ತೀವ್ರ ತರಹದ ಹೋರಾಟವನ್ನು ನಡೆಸಲಾಗುವುದು. ರಸ್ತೆ ತಡೆ, ಪಿಕೆಟಿಂಗ್ ಚಳುವಳಿಯನ್ನು ಹಮ್ಮಿಕೊಳ್ಳುವುದು ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದರು.

ಫೆಡರೇಶನ್ ಜಿಲ್ಲಾ ಪದಾಧಿಕಾರಿಗಳಾದ ರವಿಚಂದ್ರ ಕೊಂಚಾಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಫೆಡರೇಶನ್ ಪದಾಧಿಕಾರಿ ವಸಂತಿ ವಂದಿಸಿದರು. ಪ್ರತಿಭಟನಾ ಪ್ರದರ್ಶನ ನೇತೃತ್ವವನ್ನು ಫೆಡರೇಶನ್ ಮುಂದಾಳುಗಳಾದ ಜನಾದರ್ನ ಕುತ್ತಾರ್, ರಾಮಚಂದ್ರ ಪಜೀರ್,ರೋಹಿತಾಶ್ವ, ಬಶೀರ್ ಪಜೀರ್, ಬಿಜು ಅಗಸ್ತೀನ್, ವಿಶ್ವನಾಥ ನೆಲ್ಲಿ ಬಂಗಾರಡ್ಕ, ವಸಂತ ಪೇಲ್ತಡ್ಕ, ಆನಂದ ಗೌಡ, ಕೃಷ್ಣಪ್ಪಪೂಜಾರಿ, ಜಯಾನಂದ ಮಾರೂರು, ಕೃಷ್ಣಪ್ಪ ನಡಿಗುಡ್ಡೆ, ಶೀನ ಬೆಳುವಾಯಿ, ಸುಧಾಕರ ಹಂಡೇಲು, ಶಾಂತ, ದಿನೇಶ ಇರುವೈಲ್, ರವೀಂದ್ರ ಮುಚ್ಚೂರು, ನೋಣಯ್ಯ ಗೌಡ, ದಿನೇಶ್ ಶೆಟ್ಟಿ ಜಪ್ಪಿನಮೊಗರು, ಹೆರಾಲ್ಡ್, ಅಶೋಕ ಸಾಲ್ಯಾನ್, ದಯಾನಂದ ಕೊಂಚಾಡಿ, ಶಶಿಧರ ಶಕ್ತಿನಗರ, ಅಶೋಕ ಶ್ರೀಯಾನ್ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X