ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟ: ಉಳ್ಳಾಲದ ಅಬ್ದುಲ್ ರಹ್ಮಾನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಳ್ಳಾಲ: ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ 44ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉಳ್ಳಾಲದ ಅಬ್ದುಲ್ ರಹ್ಮಾನ್ 100 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಕೂಟವು ಕೇರಳದ ತಿರುವನಂತಪುರಂನಲ್ಲಿ ಜನವರಿಯಲ್ಲಿ ನಡೆಯಲಿದೆ.
ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಪದಕ ಜಯಿಸಿರುವ ಅಬ್ದುಲ್ ರಹ್ಮಾನ್, ಪ್ರಸಕ್ತ ಕಲ್ಲಾಪು ಪೀಸ್ ಪಬ್ಲಿಕ್ ಸ್ಕೂಲ್ನಲ್ಲಿ ಮಕ್ಕಳಿಗೆ ಫಿಟ್ನೆಸ್ ಟ್ರೈನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Next Story





