Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು...

ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ22 Nov 2025 8:31 PM IST
share
ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್

ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಪತ್ರಿಕಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಆಧುನಿಕ ಕಾಲಘಟ್ಟದಲ್ಲಿ ಸುಳ್ಳು ಸುದ್ದಿ, ಊಹಾ ಪತ್ರಿಕೋದ್ಯಮ ವೇಗವಾಗಿ ಹರಡುತ್ತದೆ. ಈ ರೀತಿಯ ಪತ್ರಿಕೋದ್ಯಮ ಸಮಾಜದಲ್ಲಿ ವಿಭಜನೆ ಅಭದ್ರತೆಗೆ ಕಾರಣವಾಗುತ್ತಿದೆ. ಮಾಧ್ಯಮಗಳು ಜನರು ಮತ್ತು ಸರಕಾರದ ನಡುವೆ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಕಾಲದಲ್ಲಿ ಮುಂಚೂಣಿಯಲ್ಲಿದ್ದ ಅಭಿವೃದ್ಧಿ ಪತ್ರಿಕೋದ್ಯಮ ಕಳೆಗುಂದುತ್ತಿದೆ ಎಂದರು.

ಇಂದಿನ ಸುದ್ದಿ ಪ್ರಸಾರದ ಧಾವಂತದಲ್ಲಿ, ಡಿಜಿಟಲ್ ಮಾಧ್ಯಮಗಳ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ. ಪತ್ರಕರ್ತರಿಗೆ ಸಮಾಜವನ್ನು ತಿದ್ದುವ ಅವಕಾಶವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವಾಗದಂತೆ ಪತ್ರಕರ್ತರು ಎಚ್ಚರ ವಹಿಸಬೇಕಾಗಿದೆ. 1966 ರ ನವೆಂಬರ್ 16 ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ರಚನೆಯಾದ ಹಿನ್ನೆಲೆಯಲ್ಲಿ ಆ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಭವಿಷ್ಯದ ಮಾಧ್ಯಮಗಳು ಎಂಬ ವಿಷಯದ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಮಂಗಳೂರು ರೋಟರಿ ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ ಕರ್ನಾಟಕ ಸೆಣಬು ನಿಗಮ ಅಧ್ಯಕ್ಷ ನಟರಾಜ್, ರಾಜ್ಯ ಬಾಲಭವನ ಸಮಿತಿಯ ಅಧ್ಯಕ್ಷ ಬಿ.ಆರ್ ನಾಯ್ಡು ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಸುರೇಶ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X