Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕದ ಕೊಡಗಿನಂತಿದೆ ಮೇಘಾಲಯ:...

ಕರ್ನಾಟಕದ ಕೊಡಗಿನಂತಿದೆ ಮೇಘಾಲಯ: ರಾಜ್ಯಪಾಲ ಸಿ.ಎಚ್. ವಿಜಯಶಂಕರ್

ವಾರ್ತಾಭಾರತಿವಾರ್ತಾಭಾರತಿ3 Feb 2026 7:47 PM IST
share
ಕರ್ನಾಟಕದ ಕೊಡಗಿನಂತಿದೆ ಮೇಘಾಲಯ: ರಾಜ್ಯಪಾಲ ಸಿ.ಎಚ್. ವಿಜಯಶಂಕರ್
► ರಾಜ್ಯಪಾಲರೊಂದಿಗೆ ಕರ್ನಾಟಕದ ಮಾಧ್ಯಮ ಪ್ರತಿನಿಧಿಗಳ ಸಂವಾದ ► ಮೇಘಾಲಯದ ಸಾಂಸ್ಕೃತಿಕ, ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ

ಶಿಲ್ಲಾಂಗ್: ಭಾರತ ಸರ್ಕಾರದ ಬೆಂಗಳೂರಿನ ವಾರ್ತಾ ಶಾಖೆಯಿಂದ ಮೇಘಾಲಯಕ್ಕೆ ಮಾಧ್ಯಮ ಪ್ರವಾಸ ಆಯೋಜನೆಗೊಂಡಿದ್ದು, ಪ್ರವಾಸದ ಭಾಗವಾಗಿ ಇಂದು ಕರ್ನಾಟಕದ ಮಾಧ್ಯಮ ಪ್ರತಿನಿಧಿಗಳು ಮೇಘಾಲಯದ ಲೋಕಭವನದಲ್ಲಿ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರನ್ನು ಭೇಟಿಯಾಗಿ, ಅವರೊಂದಿಗೆ ಸಂವಾದ ನಡೆಸಿದರು.

ಮೇಘಾಲಯ, ಕರ್ನಾಟಕದ ಕೊಡಗಿನಂತಿದೆ ಎಂದು ಅಭಿಪ್ರಾಯ ಹಂಚಿಕೊಂಡ ರಾಜ್ಯಪಾಲ ಸಿ.ಎಚ್. ವಿಜಯ ಶಂಕರ್, ರಾಜ್ಯದಲ್ಲಿ 2 ವೈದ್ಯಕೀಯ ಕಾಲೇಜು, 2 ವಿಶ್ವವಿದ್ಯಾಲಯಗಳನ್ನು ಇತ್ತೀಚೆಗೆ ಆರಂಭಿಸಲಾಯಿತು ಎಂದರು. ಲೋಕಭವನವನ್ನು ಜನಸ್ನೇಹಿಯನ್ನಾಗಿ ಮಾಡಿದ್ದು, ಇಲ್ಲಿಗೆ ನೈಜ ಸಮಸ್ಯೆ ಹೇಳಿಕೊಂಡು ಬರುವ ಜನರಿಗೆ ಯಾವುದೇ ಮುಲಾಜಿಲ್ಲದೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಮೇಘಾಲಯದ ಸಾಂಸ್ಕೃತಿಕ, ಸಾಮಾಜಿಕ ಸ್ಥಿತಿಗತಿ, ಹಿನ್ನೆಲೆಗಳ ಕುರಿತು ಮಾಹಿತಿ ಹಂಚಿಕೊಂಡ ವಿಜಯಶಂಕರ್ ಅವರು, ಮೇಘಾಲಯದ ಆಡಳಿತ, ಕೃಷಿ ಕುರಿತು ಮಾಹಿತಿ ನೀಡಿದರು. ರಾಜ್ಯವು 450 ಕಿ.ಮೀ. ಗಡಿ ಪ್ರದೇಶವನ್ನು ಬಾಂಗ್ಲಾದೇಶದೊಂದಿಗೆ ಹಂಚಿಕೊಳ್ಳುತ್ತದೆ. ಇಲ್ಲಿನ ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ ಎಂದರು.

ಮೂಲ ನಿವಾಸಿಗಳಾದ ಬುಡಕಟ್ಟು ಸಮುದಾಯಗಳಲ್ಲಿ ಮೂಲಕ ಗ್ರಾಮಸಭೆಗಳ ಆಡಳಿತ ನಡೆಯುತ್ತಿದ್ದು, ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಇಲ್ಲಿನ ಜನರು ಶೇ. 100 ನೈಸರ್ಗಿಕ ಕೃಷಿ ಅನುಸರಿಸುತ್ತಿದ್ದಾರೆ. ಇಲ್ಲಿನ ಪ್ರಮುಖ ಬೆಳೆಗಳಾದ ಅರಿಶಿಣ, ಬಿಳಿ ಮೆಣಸುಗಳು ಜಾಗತಿಕ ಮನ್ನಣೆ ಪಡೆದಿದ್ದು, ವಿದೇಶಗಳಿಗೂ ರಫ್ತಾಗುತ್ತವೆ. ಇಲ್ಲಿ ಔಷಧೀಯ ಸಸ್ಯಗಳು ಹೆಚ್ಚಾಗಿದ್ದು, ಮೇಘಾಲಯವನ್ನು ಔಷಧೀಯ ಸಸ್ಯಕಾಶಿ ಎಂದು ಕರೆಯಲಾಗುತ್ತದೆ ಎಂದು ವಿವರಿಸಿದರು.

ರಾಜ್ಯದ ಜನಜೀವನ ಕುರಿತು ಮಾತನಾಡಿದ ಅವರು, ಮೇಘಾಲಯದ ಜನರು ಬಹಳ ಆತ್ಮ ಗೌರವ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಭಿಕ್ಷುಕರನ್ನು ಕಾಣಲು ಸಾಧ್ಯವಿಲ್ಲ. ರಾಜ್ಯದ ಜನಸಂಖ್ಯೆಯಲ್ಲಿ 30 ವರ್ಷದೊಳಗಿನ ಯುವಜನರು ಶೇ. 51 ರಷ್ಟಿದ್ದು, ಇದಕ್ಕಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಕೃತಿ ಆರಾಧನೆ, ನಂಬಿಕೆಗಳು ಇಲ್ಲಿ ಗಾಢವಾಗಿದ್ದು, ಜನರು ಪರಿಸರವನ್ನು ಪೂಜಿಸುತ್ತಾರೆ. ಕೃಷಿ, ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿನ ಜನರು ಫುಟ್ಬಾಲ್ ಕ್ರೀಡೆ ಹಾಗೂ ಸಂಗೀತದಲ್ಲಿ ಹೆಚ್ಚಿನ ಅಭಿರುಚಿ ಹೊಂದಿದ್ದಾರೆ ಎಂದರು.

ಸಂವಾದದಲ್ಲಿ ಕರ್ನಾಟಕದ 10 ಮಾಧ್ಯತಮ ಪ್ರತಿನಿಧಿಗಳು, ಪಿಐಬಿ ಶಿಲ್ಲಾಂಗ್ ನ ಸಹಾಯಕ ನಿರ್ದೇಶಕರಾದ ಗೋಪಾಜಿತ್ ದಾಸ್, ಪಿಐಬಿ ಬೆಂಗಳೂರಿನ ಸಹಾಯಕ ನಿರ್ದೇಶಕರಾದ ಎಂ. ಮಧು ಅವರು ಭಾಗವಹಿಸಿದ್ದರು.

Tags

MeghalayaKodaguKarnatakaGovernor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X