Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೈಕಲ್ ಡಿಸೋಜಾ ವಿಶನ್ 2030-...

ಮೈಕಲ್ ಡಿಸೋಜಾ ವಿಶನ್ 2030- ಕಾರ್ಯಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Dec 2025 6:00 PM IST
share
ಮೈಕಲ್ ಡಿಸೋಜಾ ವಿಶನ್ 2030- ಕಾರ್ಯಯೋಜನೆಗೆ ಚಾಲನೆ

ಮಂಗಳೂರು: ಅನಿವಾಸಿ ಉದ್ಯಮಿ ಮತ್ತು ಮಹಾದಾನಿ ಮೈಕಲ್ ಡಿಸೋಜಾ ಅವರ ಕಾರವಾರ ಮತ್ತು ಗುಲ್ಬರ್ಗಾ ಜೋಡಿ ಧರ್ಮಪ್ರಾಂತ್ಯಗಳ ಸಮುದಾಯಗಳನ್ನು ಸಮರ್ಥಗೊಳಿಸುವ ಉದ್ದೇಶದ ಮಹತ್ವಾಕಾಂಕ್ಷಿ ವಿಶನ್ 2030 ಕಾರ್ಯಯೋಜನೆಗೆ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದಲ್ಲಿ ತಿಳುವಳಿಕೆ ಒಡಂಬಡಿಕೆಗೆ ಸಹಿ ಮಾಡುವುದರ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಕಾರವಾರ ಮತ್ತು ಗುಲ್ಬರ್ಗಾ ಧರ್ಮಕ್ಷೇತ್ರಗಳಿಗಾಗಿ ಮೈಕಲ್ ಡಿ ಸೊಜಾ ವಿಶನ್ 2030 ಕಾರ್ಯಯೋಜನೆ ವಸತಿ ಮತ್ತು ಶಿಕ್ಷಣ ಕಾರ್ಯಕ್ರಮಗಳ ಮೂಲಕ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಷಪ್ ವಂ.ಡಾ. ಪೀಟರ್ ಪೌಲ್ ಸಲ್ದಾನ್ಹ ಮತ್ತು ಉಡುಪಿಯ ಬಿಷಪ್ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೋ ಉಪಸ್ಥಿತರಿದ್ದರು.

ಪ್ರತಿಯೊಬ್ಬ ಮಾನವನಿಗೂ ವಸತಿ ಮತ್ತು ಶಿಕ್ಷಣವು ಮೂಲಭೂತ ಅಗತ್ಯಗಳು. ತಲೆ ಮೇಲೊಂದು ಸುರಕ್ಷಿತ ಸೂರು ಇಲ್ಲದೆ ನಿರಂತರ ಅನಿಶ್ಚಿತತೆಯಲ್ಲಿ ಬದುಕುವುದು ಮತ್ತು ಉನ್ನತ ಶಿಕ್ಷಣದ ಕೊರತೆಯಿಂದ ಘನತೆಯಿಂದ ಕೂಡಿದ ಜೀವನ ಸಾಗಿಸಲು ಕಷ್ಟಪಡುವುದು ಸಮುದಾಯ ಅಭಿವೃದ್ಧಿಯ ಪಥದಲ್ಲಿ ತೊಡಕುಗಳಾಗಿವೆ ಎಂದು ಮೈಕಲ್ ಡಿಸೋಜಾ ಈ ಸಂದರ್ಭ ಅಭಿಪ್ರಾಯ ವ್ಯಕ್ತಪಡಿಸಿದರು.


ದಾನಧರ್ಮವು ಫಲಾನುಭವಿಗಳಿಗೆ ಘನತೆಯನ್ನು ಮರಳಿ ನೀಡುವ ಗುರಿಯನ್ನು ಹೊಂದಿರಬೇಕು. ಸಮುದಾಯಗಳನ್ನು ಸಬಲೀಕರಣಗೊಳಿಸಲು ಶಿಕ್ಷಣವು ಅತ್ಯುತ್ತಮ ಮಾರ್ಗ. ಧರ್ಮಸಭೆಗಳು ಇದರಲ್ಲಿ ಪ್ರಮುಖ ಪಾತ್ರ ವಹಿಸಬಲ್ಲ ಅತ್ಯಂತ ವಿಶ್ವಾಸಾರ್ಹ ಮತ್ತು ಸಮಯ ಪರೀಕ್ಷಿತ ಮಾದರಿಗಳಾಗಿವೆ. 2013ರಿಂದ ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯಗಳು ಸಮಗ್ರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಿದ್ದು, ಗುಲ್ಬರ್ಗಾ ಮತ್ತು ಕಾರವಾರ ಬಿಷಪ್‌ರ ದೂರದೃಷ್ಟಿ ನಾಯಕತ್ವದಡಿ ಕಾರ್ಯಯೋಜನೆ ವಿಶನ್ 2030 ತಯಾರಿಸಲಾಗಿದೆ ಎಂದವರು ಹೇಳಿದರು.

ಮೈಕಲ್ ಡಿಸೊಜಾ ಕುಟುಂಬ ಪ್ರೇರಿತ ಶಿಕ್ಷಣ, ಆರೋಗ್ಯ, ವಸತಿ ಮತ್ತು ಸ್ವಸಹಾಯ ಗುಂಪು ಮಾದರಿ ಯೋಜನೆಗಳು 2013ರಿಂದ ಮಂಗಳೂರು ಮತ್ತು ಉಡುಪಿ ಧರ್ಮಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದ್ದು ಅದರ ಯಶಸ್ಸಿನ ಆಧಾರದಲ್ಲಿ ವಿಶನ್ 2030 ನಿರ್ಮಿತವಾಗಿದ್ದು, ದೀರ್ಘಕಾಲೀನ ಸಮುದಾಯ ಉನ್ನತೀಕರಣದ ಕಡೆ ಕೇಂದ್ರೀಕೃತವಾಗಿದೆ.


ಮೈಕಲ್ ಡಿಸೋಜಾ ಸಮುದಾಯ ಯೋಜನೆಯ ಸಲಹೆಗಾರ ಓಸ್ವಾಲ್ಡ್ ರೊಡ್ರಿಗಸ್ ಸ್ವಾಗತಿಸಿ, ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.

ಪ್ರೊ. ಸಿ.ಎ. ಲಾಯ್ನಲ್ ಅರಾನ್ಹಾ ತಿಳಿವಳಿಕೆ ಒಡಂಬಡಿಕೆಯ ಸಂದರ್ಭ ಮತ್ತು ಮಹತ್ವವನ್ನು ವಿವರಿಸಿದರು. ಬಿಷಪ್ ಪೀಟರ್ ಪಾವ್ಲ್ ಸಲ್ದಾನ್ಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.


ಗುಲ್ಬರ್ಗಾ ಧರ್ಮಕ್ಷೇತ್ರದ ವಿಕಾರ್ ಜನರಲ್ ಅತೀ ವಂ. ಮೊ. ಸಂತೋಷ್ ಬಾಪು ಅವರು ತಮ್ಮ ಧರ್ಮಕ್ಷೇತ್ರದ ಪರವಾಗಿ ಮತ್ತು ಬಿಷಪ್ ಡುಮಿಂಗ್ ಡಾಯಸ್ ಅವರು ಕಾರವಾರ ಧರ್ಮಕ್ಷೇತ್ರದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಮೈಕಲ್ ಡಿ ಸೋಜಾ ಮತ್ತು ಅವರ ಪತ್ನಿ ಫ್ಲೇವಿಯಾ ಡಿ ಸೋಜಾ ಇವರನ್ನು ಕಾರವಾರ ಮತ್ತು ಗುಲ್ಬರ್ಗಾ ಧರ್ಮಕ್ಷೇತ್ರಗಳ ವತಿಯಿಂದ ಶಾಲು ಮತ್ತು ಪುಷ್ಪಗುಚ್ಛಗಳೊಂದಿಗೆ ಸನ್ಮಾನಿಸಲಾಯಿತು.


ಕರ್ನಾಟಕ ಜೆಸ್ಯೂಟ್‌ಗಳ ಪ್ರಾಂತೀಯ ಮುಖ್ಯಸ್ಥರಾದ ವಂ. ಡಯೋನಿಯಸ್ ವಾಸ್ ಎಸ್.ಜೆ., ಸಂತ ಜೋಸೆಫ್ ಸೆಮಿನರಿಯ ರೆಕ್ಟರ್ ವಂ. ಡಾ. ರಾಜೇಶ್ ರೊಸಾರಿಯೋ, ಅಪೋಸ್ತಲಿಕ್ ಕಾರ್ಮೆಲೈಟ್ ಪ್ರಾಂತೀಯ ಮುಖ್ಯಸ್ಥೆ ವಂ. ಭ. ನವೀನ್ ಎ.ಸಿ. ಮತ್ತು ಕಾರವಾರ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊ. ವಂ. ರಿಚರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X