Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾನ - ಬಾಳ ರಸ್ತೆಯಲ್ಲಿ ಶಾಸಕರ ಮುಖ...

ಕಾನ - ಬಾಳ ರಸ್ತೆಯಲ್ಲಿ ಶಾಸಕರ ಮುಖ ಕಾಣುತ್ತಿದೆ: ಕಳಪೆ ರಸ್ತೆ ಕಾಮಗಾರಿಗೆ ಬಿ.ಕೆ ಇಮ್ತಿಯಾಝ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 Oct 2023 6:17 PM IST
share
ಕಾನ - ಬಾಳ ರಸ್ತೆಯಲ್ಲಿ ಶಾಸಕರ ಮುಖ ಕಾಣುತ್ತಿದೆ: ಕಳಪೆ ರಸ್ತೆ ಕಾಮಗಾರಿಗೆ ಬಿ.ಕೆ ಇಮ್ತಿಯಾಝ್ ಆಕ್ರೋಶ

ಸುರತ್ಕಲ್, ಅ.11: ಸುರತ್ಕಲ್ ಎಂ.ಆರ್.ಪಿ.ಎಲ್ 4.5ಕಿಮೀ ಚತುಷ್ಪತ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟ ದ್ದಾಗಿದ್ದು ರಸ್ತೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಕಣ್ಣಿಗೆ ಕಾಣುತ್ತಿದ್ದರೂ ಶಾಸಕ ಭರತ್ ಶೆಟ್ಟಿ ಮೌನವಾಗಿದ್ದಾರೆ. ರಸ್ತೆ ಕಾಂಕ್ರಿಟಿಕರಣಗೊಂಡು ತಿಂಗಳು ಆಗುವ ಮೊದಲೇ ಸಿಮೆಂಟ್ ಎದ್ದು ಹೋಗಿದೆ ಜಲ್ಲಿಗಳಲ್ಲಿ ಶಾಸಕರ ಮುಖ ಕಾಣುತ್ತಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಆರೋಪಿಸಿದರು.

ಅವರು ಇಂದು ಸುರತ್ಕಲ್ ಕೊಂಕಣ ರೈಲ್ವೆ ಸೇತುವೆ ಅಕ್ಕಪಕ್ಕದ ರಸ್ತೆ ದುರವಸ್ಥೆ ಖಂಡಿಸಿ ಮತ್ತು ಕೊಂಕಣ ರೈಲ್ವೆ ರೋರೋ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಡಿವೈಎಫ್ಐ ಸುರತ್ಕಲ್ ಘಟಕ ಮತ್ತು ಸುರತ್ಕಲ್ ಗ್ರಾಮಾಂತರ ಅಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಚೊಕ್ಕಬೆಟ್ಟು ಕ್ರಾಸ್ ಬಳಿ ನಡೆದ ರಸ್ತೆ ತಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸುರತ್ಕಲ್ ಎಂ.ಆರ್.ಪಿ.ಎಲ್ ಮುಖ್ಯ ರಸ್ತೆ ಜನರ ಹೋರಾಟದ ಪ್ರತಿಫಲವಾಗಿ ನಿರ್ಮಾಣಗೊಂಡಿರುವುದು ಷಟ್ಪಥ ರಸ್ತೆ ಆಗಬೇಕಿದ್ದ ರಸ್ತೆಯನ್ನು ಚತುಷ್ಪಥಗೊಳಿಸಿರುವುದೇ ಶಾಸಕ ಭರತ್ ಶೆಟ್ಟಿ ಸಾಧನೆ. ರಸ್ತೆಗೆ ಶಿಲಾನ್ಯ ಮಾಡಿ ಹೋದ ಶಾಸಕರು ರಸ್ತೆ ಅಭಿವೃದ್ಧಿಯ ಗುಣಮಟ್ಟ ಪರಿಶೀಲನೆ ಯಾಕೆ ಮಾಡಿಲ್ಲ ಎಂದು ಟೀಕಿಸಿದರು.

ರಸ್ತೆ ಅಭಿವೃದ್ಧಿಯನ್ನು ಅಪೂರ್ಣ ಗೊಳಿಸಿ ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದರಿಂದ ನಿತ್ಯ ಇಲ್ಲಿ ಅಪಘಾತ ನಡೆಯುತ್ತಿದೆ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕೊಂಕಣ ರೈಲ್ವೆ ರೋರೋ ಘಟಕಕ್ಕೆ ಬರುವ ಬೃಹತ್ ಲಾರಿಗಳಿಂದ ಇಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ ಕೂಡಲೇ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.

ಡಿವೈಎಫ್ಐ ನಗರ ಉಪಾಧ್ಯಕ್ಷರಾದ ಶ್ರೀನಾಥ್ ಕುಲಾಲ್, ಅಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಅಬ್ದುಲ್ ಬಷೀರ್ ಮಾತನಾಡಿದರು.

ಡಿವೈಎಫ್ಐ ಮುಖಂಡರಾದ ಶೈಫರ್ ಆಲಿ, ಬಿ.ಕೆ ಮಸೂದ್, ಮುಸ್ತಫಾ ಬೈಕಂಪಾಡಿ, ಸಾದಿಕ್ ಕಿಲ್ಪಾಡಿ, ಮುನಾಝ್, ರಿಹಾಬ್, ಅಟೋ ರಿಕ್ಷಾ ಚಾಲಕರ ಸಂಘದ ಮುಖಂಡರಾದ ಲಕ್ಷ್ಮೀಶ್ ಕುಳಾಯಿ, ಸುಧೀರ್ ಕೋಡಿಕೆರೆ, ಸುನಿಲ್, ಗಣೇಶ್ ತೋಕೂರು, ಹಂಝ ಮೈಂದಗುರಿ, ಮೆಲ್ವಿನ್ ಪಿಂಟೋ, ನಾಗರಿಕ ಸಮಿತಿ ಮುಖಂಡರಾದ ಬಿ.ಎಂ. ಅಬೂಸಾಲಿ ಕೃಷ್ಣಾ ಪುರ, ಫ್ರಾನ್ಸಿಸ್, ಮೆಹಬೂಬ್ ಖಾನ್, ಜಗದೀಶ್ ಕಾನ, ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಹನೀಫ್ ಇಡ್ಯಾ, ಸಲಾಂ ಕಾಲನಿ, ಶರೀಫ್ ಕಾನ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X