Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹಕಾರ ಕಾಯ್ದೆ- ಆರ್‌ಬಿಐ ನಿಯಮಾವಳಿಗೂ...

ಸಹಕಾರ ಕಾಯ್ದೆ- ಆರ್‌ಬಿಐ ನಿಯಮಾವಳಿಗೂ ವ್ಯತ್ಯಾಸ; ಕಾನೂನು ತಜ್ಞರ ಜತೆ ಸಮಾಲೋಚನೆ ಅಗತ್ಯ : ಎಂ.ಎನ್.ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Jan 2026 3:28 PM IST
share
ಸಹಕಾರ ಕಾಯ್ದೆ- ಆರ್‌ಬಿಐ ನಿಯಮಾವಳಿಗೂ ವ್ಯತ್ಯಾಸ; ಕಾನೂನು ತಜ್ಞರ ಜತೆ ಸಮಾಲೋಚನೆ ಅಗತ್ಯ : ಎಂ.ಎನ್.ರಾಜೇಂದ್ರ ಕುಮಾರ್
ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ

ಮಂಗಳೂರು : ಸಹಕಾರಿ ಸಂಘಗಳು ಸಹಕಾರ ಕಾಯ್ದೆಯಡಿ ನೋಂದಣಿಯಾದರೂ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿಯಮಗಳನ್ನು ಕೂಡ ಪಾಲಿಸಬೇಕಾಗಿದೆ. ಸಹಕಾರ ಕಾಯ್ದೆಗೂ ಆರ್‌ಬಿಐ ನಿಯಮಾವಳಿಗೂ ಬಹಳ ವ್ಯತ್ಯಾಸ ಇದೆ. ಈ ಬಗ್ಗೆ ಮುಂದೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರೂ ಆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಮೈಸೂರು ವಿಭಾಗದ ಪಟ್ಟಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಮತ್ತು ಹಿರಿಯ ಅಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿ ಸಂಘಗಳು ಸಹಕಾರ ಕಾಯ್ದೆಯಡಿ ನೋಂದಣಿಯಾಗಿದ್ದರೂ ಸಾಲ ನೀಡಿಕೆಯಲ್ಲಿ ಆರ್‌ಬಿಐ ಮಾರ್ಗದರ್ಶನವನ್ನು ಪಾಲಿಸಬೇಕಾಗಿದೆ. ಈ ಸಂದರ್ಭ ಎರಡನ್ನೂ ಅಳವಡಿಸಿಕೊಂಡು ಮುನ್ನಡೆಯಬೇಕಾದ ಅನಿವಾರ್ಯತೆ ಬಂದೊದಗಿದೆ. ಆರ್‌ಬಿಐನ ಕೆಲವು ನಿಯಮಗಳನ್ನು ಅಳವಡಿಸಿಕೊಳ್ಳಲು ಕಷ್ಟವಾಗುತ್ತದೆ. ಸಹಕಾರಿ ಸಂಘಗಳು ಕಟ್ಟಡ ನಿರ್ಮಿಸಿದರೆ ಅದರಲ್ಲಿ ಹೆಚ್ಚುವರಿ ಜಾಗವನ್ನು ಬಾಡಿಗೆಗೆ ನೀಡಲು ಅಥವಾ ತಮ್ಮಲ್ಲೇ ಇರಿಸಿಕೊಳ್ಳಲು ನಿಯಮದಲ್ಲಿ ಅವಕಾಶ ಇರುವುದಿಲ್ಲ. ಸಾಲದ ವಿಚಾರದಲ್ಲಿ ಸುಸ್ತಿದಾರರ ಏಲಂ ಜಾಗವನ್ನು ಯಾರೂ ಪಡೆಯದಿದ್ದರೆ, ಅದಕ್ಕೆ ದಂಡ ವಿಧಿಸುತ್ತಾರೆ. ಹೀಗೆ ಸಹಕಾರಿ ಕಾಯ್ದೆ ಮತ್ತು ಆರ್‌ಬಿಐ ನಿಯಮದ ನಡುವೆ ತುಂಬಾ ವ್ಯತ್ಯಾಸ ಇದ್ದು ಇವುಗಳನ್ನು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ಸರಿಪಡಿಸಬೇಕಾಗಿದೆ ಎಂದರು.

ಸಹಕಾರಿ ಕ್ಷೇತ್ರ ಹಾಗೂ ವಾಣಿಜ್ಯ ಬ್ಯಾಂಕ್‌ಗಳಿಗೆ ಬಹಳ ವ್ಯತ್ಯಾಸ ಇದೆ. ಸಹಕಾರ ಕ್ಷೇತ್ರ ಅತ್ಯಂತ ಪವಿತ್ರವಾಗಿದ್ದು, ಗ್ರಾಹಕರಿಂದ ಶೇರು, ಠೇವಣಾತಿ ಪಡೆದು ಕಷ್ಟಪಟ್ಟು ಬೆಳೆಸಿ ಲಾಭ ಪಡೆಯಲಾಗುತ್ತದೆ. ಆದರೆ ವಾಣಿಜ್ಯ ಬ್ಯಾಂಕ್‌ಗಳು ಸರಕಾರಿ ಹಣವನ್ನು ಠೇವಣಿಯಾಗಿರಿಸಿ ನಿಬಡ್ಡಿ ಪಡೆದು ವ್ಯವಹರಿಸುತ್ತಾರೆ. ಹೀಗಾಗಿಯೇ ಮಲ್ಯ, ನೀರವ್ ಮುಂತಾದವರಿಗೆ ಸಾಲ ನೀಡಿ ಅತ್ತ ಸಾಲವೂ ವಸೂಲಿ ಇಲ್ಲದೆ, ಬಡ್ಡಿಯೂ ಕೈಗೆ ಸಿಗದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಸಾಲದ ಅಗತ್ಯತೆ ನಿಜವಾಗಿ ಇರುವವರಿಗೆ ನಾವು ನೆರವಾಗುತ್ತಿದ್ದು, ವಾಣಿಜ್ಯ ಬ್ಯಾಂಕ್‌ಗಳು ವಿಲೀನವಾಗುತ್ತಿದ್ದರೆ, ಸಹಕಾರಿ ಕ್ಷೇತ್ರ ವಿಕಸನದ ಹಾದಿಯಲ್ಲಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿವೆ. ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್‌ನ ಕಾರ್ಯವೈಖರಿಯನ್ನು ಮೆಚ್ಚಿಕೊಂಡ ಕೇಂದ್ರ, ಸಹಕಾರಿ ಕ್ಷೇತ್ರದ ಸುಧಾರಣೆಗೆ ಇಲ್ಲಿ ಕೈಗೊಂಡ ಕ್ರಮಗಳ ಮಾಹಿತಿಯನ್ನು ತರಿಸಿಕೊಂಡು ಇದೇ ಮಾದರಿಯನ್ನು ಎಲ್ಲ ಕಡೆಗಳಲ್ಲಿ ಕಾರ್ಯರೂಪಕ್ಕೆ ತರುವ ಉದ್ದೇಶ ಹೊಂದಿರುವುದು ಅಭಿಮಾನದ ಸಂಗತಿ ಎಂದರು.

ದ.ಕ. ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್ ಮಾತನಾಡಿ, ಸಾಲದ ಮೇಲಿನ ಡಿಕ್ರಿಗಳ ಸಂದರ್ಭ ಸೊತ್ತುಗಳ ಹರಾಜು ವೇಳೆ ಎದುರುದಾರರು ಪ್ರಬಲರಾಗಿರುತ್ತಾರೆ. ಅಂತಹ ಸಂದರ್ಭಗಳಲ್ಲಿ ಏಲಂ ಕೂಗಿದರೂ ಅದನ್ನು ಖರೀದಿಸುವವರು ಮುಂದೆ ಬರುವುದಿಲ್ಲ. ಇದಕ್ಕಾಗಿ ಅಂತಹ ಜಾಗಗಳ ಅಳತೆ, ನಕ್ಷೆ, ಪಾದಚಾರಿ ಮಾರ್ಗಗಳು ಸರಿಯಾಗಿ ಇವೆಯೇ ಎಂಬುದನ್ನು ಪರಿಶೀಲಿಸಬೇಕು. ದಾಖಲೆ ಪತ್ರಗಳು, ಕರಾರು ಪತ್ರಗಳು ಸರಿ ಇಲ್ಲದಿದ್ದರೆ ಸೊತ್ತುಗಳ ಹರಾಜು ಬಳಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಆಡಳಿತ ಕಾರ್ಯದಕ್ಷತೆ ಇದ್ದರೆ ಹೇಗೆ ಬೆಳವಣಿಗೆ ಹೊಂದಬಹುದು ಎಂಬುದಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಅವರೇ ಸಾಕ್ಷಿ. ಸಹಕಾರ ಸಂಘಗಳು ಲಾಭ ಗಳಿಸುವ ಜೊತೆಗೆ ಸಮಾಜ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದು ಶ್ರೇಯಸ್ಕರ ಎಂದರು.

ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವತಿಯಿಂದ ವಿಷನರಿ ಲೀಡರ್‌ಶಿಪ್ ಅವಾರ್ಡ್ ಪಡೆದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬೆಂಗಳೂರು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಬಿ.ಕೆ.ಸಲೀಂ, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ತ್ರಿವೇಣಿ ರಾವ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸಂಜೀವ ಪೂಜಾರಿ ಉಪಸ್ಥಿತರಿದ್ದರು.

ದಕ್ಷಿಣ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಹರೀಶ್ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸುಗಂಧಿ ಪ್ರಾರ್ಥಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಕಾರ್ಯಕ್ರಮ ನಿರ್ವಹಿಸಿದರು.

Tags

MN Rajendra Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X