Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ | ಬಸ್ ಡಿಜಿಟಲ್ ವೇಳಾಪಟ್ಟಿ...

ಮೂಡುಬಿದಿರೆ | ಬಸ್ ಡಿಜಿಟಲ್ ವೇಳಾಪಟ್ಟಿ ಸಾವ೯ಜನಿಕರಿಗೆ ಹೆಚ್ಚು ಪ್ರಯೋಜನಕಾರಿ : ಮಾಜಿ ಸಚಿವ ಅಭಯಚಂದ್ರ

ವಾರ್ತಾಭಾರತಿವಾರ್ತಾಭಾರತಿ5 Dec 2025 7:32 PM IST
share
ಮೂಡುಬಿದಿರೆ | ಬಸ್ ಡಿಜಿಟಲ್ ವೇಳಾಪಟ್ಟಿ ಸಾವ೯ಜನಿಕರಿಗೆ ಹೆಚ್ಚು ಪ್ರಯೋಜನಕಾರಿ : ಮಾಜಿ ಸಚಿವ ಅಭಯಚಂದ್ರ

ಮೂಡುಬಿದಿರೆ : ಅವಿಭಜಿತ ದ.ಕ., ಉಡುಪಿ ಜಿಲ್ಲೆಯಲ್ಲಿ ಮೊದಲಿಗೆ ಖಾಸಗಿ ಬಸ್ಸುಗಳೇ ಸೇವೆಯನ್ನು ಆರಂಭಿಸಿದ್ದು, ಸರ್ಕಾರಿ ಬಸ್ಸುಗಳಿಗೆ ಸರಿಸಮಾನವಾಗಿ ಖಾಸಗಿ ಬಸ್ ಗಳು ಸೇವೆ ನೀಡುತ್ತಿದೆ. ಇದೀಗ ಆಧುನಿಕ ತಂತ್ರಜ್ಞಾನದ ಮೂಲಕ ಅಳವಡಿಸಿರುವ ಡಿಜಿಟಲ್ ಬಸ್ ವೇಳಾಪಟ್ಟಿ ಸಾರ್ವಜನಿಕರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.

ಅವರು ಎಸ್.ಎನ್ ಮೂಡುಬಿದಿರೆ ಪಾಲಿಟೆಕ್ನಿಕ್ ಮತ್ತು ಲಯನ್ಸ್ ಕ್ಲಬ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಮತ್ತು ಖಾಸಗಿ ಬಸ್ಸು ನಿಲ್ದಾಣದಲ್ಲಿ ಆಳವಡಿಸಲಾಗಿರುವ ಡಿಜಿಟಲ್ ವೇಳಾಪಟ್ಟಿಯನ್ನು ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಶಾಸಕನಾಗಿರುವ ವೇಳೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇನೆ. ಮೂಡುಬಿದಿರೆಯಲ್ಲಿ ಸುಸಜ್ಜಿತ ಸರ್ಕಾರಿ ಬಸ್ ನಿಲ್ದಾಣ ಹಾಗೂ ಡಿಪೋ ನಿರ್ಮಾಣಕ್ಕೆ ಪ್ರಯತ್ನಗಳಾಗುತ್ತಿವೆ ಎಂದರು.

ಮಾಲಕರ ಸಂಘದ ವಲಯಾಧ್ಯಕ್ಷ ನಾರಾಯಣ ಪಿ.ಎಂ. ಅವರು ಮಾತನಾಡಿ, ಖಾಸಗಿ ಬಸ್‌ಗಳು ನಿರಂತರವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅಧುನಿಕ ತಂತ್ರಜ್ಞಾನಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದೇವೆ. ಈ ಡಿಜಿಟಲ್ ವೇಳಾಪಟ್ಟಿ ಬಸ್ ಸಿಬ್ಬಂದಿಗಳಿಗೂ ಪ್ರಯೋಜನವಾಗಲಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಯೋಜನೆಗೆ ಶುಭ ಹಾರೈಸಿದರು.

ಎಸ್.ಎನ್ ಮೂಡುಬಿದಿರೆ ಪಾಲಿಟೆಕ್ನಿಕ್‌ನ ಪ್ರಾಂಶುಪಾಲೆ ನೊರೊನ್ಹ ತರೀನಾ ರೀಟಾ, ಪುರಸಭೆ ಸದಸ್ಯ, ಲಯನ್ಸ್ ವಲಯಾಧ್ಯಕ್ಷ ಜೊಸ್ಸಿ ಮಿನೇಜಸ್, ಪರಿಸರ ಅಭಿಯಂತರೆ ಶಿಲ್ಪಾ ಎಸ್., ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಉಪನ್ಯಾಸಕರಾದ ಪ್ರದೀಪ್ ಸಿ.ಎಸ್., ಶ್ರೀ ಹರ್ಷ, ಗೋಪಾಲಕೃಷ್ಣ ಕೆ.ಎಸ್., ಹಿರಿಯ ಲಯನ್ಸ್ ಸದಸ್ಯ ಕೆ.ಶ್ರೀಪತಿ ಭಟ್, ತಿಮ್ಮಯ್ಯ ಶೆಟ್ಟಿ, ಲಯನ್ಸ್ ಕಾರ್ಯದರ್ಶಿ ಓಸ್ವಾಲ್ಡ್ ಡಿಕೋಸ್ತ, ಸದಸ್ಯರಾದ ಆಲ್ವಿನ್ ಮಿನೇಜಸ್, ಮುನ್ನಾರಾವ್, ಎಂ.ಕೆ. ದಿನೇಶ್, ವಿನೋದ್ ಡೇಸಾ, ಸಿರಿಲ್, ಬಸ್ ಏಜೆಂಟರಾದ ಸಂತೋಷ್ ಶೆಟ್ಟಿ, ಶಶಿಧರ ಮತ್ತಿತರರು ಉಪಸ್ಥಿತರಿದ್ದರು.

ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X