Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಆಳ್ವಾಸ್ ನಲ್ಲಿ ಮೊದಲ...

ಮೂಡುಬಿದಿರೆ: ಆಳ್ವಾಸ್ ನಲ್ಲಿ ಮೊದಲ 'ಹೃದಯ ಚಿಕಿತ್ಸಾ ಕೇಂದ್ರ' ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ17 Dec 2025 8:15 PM IST
share
ಮೂಡುಬಿದಿರೆ: ಆಳ್ವಾಸ್ ನಲ್ಲಿ ಮೊದಲ ಹೃದಯ ಚಿಕಿತ್ಸಾ ಕೇಂದ್ರ ಲೋಕಾರ್ಪಣೆ

ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಹೃದಯ ಚಿಕಿತ್ಸಾ ಕೇಂದ್ರ (ಆಳ್ವಾಸ್ ಕಾರ್ಡಿಯಾಕ್ ಸೆಂಟರ್)ವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಬುಧವಾರ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಮಕ್ಕಳು ಮತ್ತು ಯುವಕರಲ್ಲಿ ಹೃದಯ ಸಂಬಂಧಿ ಕಾಯಿಲೆ ಗಳು ಸಾಮಾನ್ಯವಾಗುತ್ತಿದೆ. ಸಮಯೋಚಿತ ಚಿಕಿತ್ಸೆ ದೊರೆಯದಿದ್ದರೆ ಜೀವಕ್ಕೆ ಅಪಾಯವಾಗಬಹುದು ಈ ನಿಟ್ಟಿನಲ್ಲಿ ಆಳ್ವಾಸ್ ಆರೋಗ್ಯ ಕೇಂದ್ರವು ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಮಹತ್ವದ ಹೆಜ್ಜೆಯಾಗಿ 'ಹೃದಯ ಚಿಕಿತ್ಸಾ ಕೇಂದ್ರ'ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ.

ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲೇ ಮೊದಲ ಬಾರಿಗೆ ಸ್ಥಾಪನೆಯಾದ ಈ ಹೃದಯ ಚಿಕಿತ್ಸಾ ಕೇಂದ್ರವು ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ಕೇಂದ್ರ ಸ್ಥಾಪನೆಯಾಗಿರುವುದು ಈ ಭಾಗದ ಜನರಿಗೆ ದೊರೆತ ದೊಡ್ಡ ವರದಾನವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಶಿಕ್ಷಣವು ವ್ಯಾಪಾರವಾಗದೆ ಮಾನವ ಸೇವೆಯ ಸಾಧನವಾಗಬೇಕು. ವಿಶೇಷವಾಗಿ ವೈದ್ಯಕೀಯ ಶಿಕ್ಷಣದಲ್ಲಿ ಲಾಭದ ದೃಷ್ಟಿಕೋನಕ್ಕಿಂತ ಮಾನವೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆ ಪ್ರಧಾನವಾಗಬೇಕು. ಸರ್ಕಾರಿ ಕೋಟಾದಡಿ ನೀಡುವ ಸೀಟುಗಳಿಗೆ ಶುಲ್ಕ ಕಡಿಮೆ ಇರಬಹುದು, ಆದರೆ ಕಾಲೇಜುಗಳ ನಿರ್ವಹಣೆ ಮತ್ತು ಅತ್ಯಾಧುನಿಕ ಉಪಕರಣಗಳ ವೆಚ್ಚವನ್ನು ಖಾಸಗಿ ಸಂಸ್ಥೆಗಳೇ ಭರಿಸಬೇಕಾಗುತ್ತದೆ. ಸರ್ಕಾರದ ಸೂಕ್ತ ಬೆಂಬಲವಿಲ್ಲದಿದ್ದರೆ ಇಂತಹ ಸಂಸ್ಥೆಗಳ ಕಾರ್ಯನಿರ್ವಹಣೆ ಕಷ್ಟಸಾಧ್ಯ ಎಂದು ಅವರು ತಿಳಿಸಿದರು.

ಎ.ಜೆ. ಗ್ರೂಪ್ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಮಾತನಾಡಿ, ಸಮಯವೇ ಅತ್ಯಂತ ಮುಖ್ಯವಾಗಿರುವ ಹೃದಯ ಚಿಕಿತ್ಸೆಯು ಈಗ ಸ್ಥಳೀಯವಾಗಿ ಲಭ್ಯವಿರುವುದು ಅನೇಕ ಜೀವಗಳನ್ನು ಉಳಿಸಲು ಸಹಕಾರಿಯಾಗಲಿದೆ ಎಂದರು.

ಕಣಚೂರು ಗ್ರೂಪ್ ಸಂಸ್ಥಾಪಕ ಡಾ. ಹಾಜಿ ಯು.ಕೆ. ಮೋನು ಮಾತನಾಡಿ "ಮಹಾನಗರಗಳಿಗೆ ಸೀಮಿತವಾಗಿದ್ದ ಇಂತಹ ಸೌಲಭ್ಯ ಸಣ್ಣ ಪಟ್ಟಣಕ್ಕೆ ಬಂದಿರುವುದು ಶ್ಲಾಘನೀಯ." ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ನನ್ನ ನೆಲದ ಜನರಿಗಾಗಿ ಸೇವೆ ಮಾಡುವುದೇ ನನ್ನ ಗುರಿ. ಸಂಕಷ್ಟಗಳು ನನ್ನನ್ನು ಕುಗ್ಗಿಸದೆ ಮತ್ತಷ್ಟು ದೃಢವಾಗಿ ಮುನ್ನಡೆಯಲು ಸಹಾಯ ಮಾಡಿವೆ. 1980ರ ದಶಕದಲ್ಲೇ ಆರಂಭವಾದ ಈ ಆರೋಗ್ಯ ಕೇಂದ್ರದ ಮೂಲಕ ಜನರಿಗೆ ಕನಿಷ್ಠ ಶುಲ್ಕದಲ್ಲಿ ತಜ್ಞರ ಸೇವೆ ನೀಡುತ್ತಿರುವ ನೆಮ್ಮದಿ ನನಗಿದೆ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ, ತಜ್ಞ ವೈದ್ಯರಾದ ಡಾ. ಹರೀಶ್ ನಾಯಕ್, ಡಾ. ಹನಾ ಶೆಟ್ಟಿ ಉಪಸ್ಥಿತರಿದ್ದರು. ಡಾ. ವಿನಯ ಆಳ್ವ ಸ್ವಾಗತಿಸಿದರು. ಪ್ರೊ. ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ದಿತೇಶ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X