Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ | ಹಿರಿಯ ಯಕ್ಷಗಾನ ಭಾಗವತ...

ಮೂಡುಬಿದಿರೆ | ಹಿರಿಯ ಯಕ್ಷಗಾನ ಭಾಗವತ ಕಣಿಯೂರು ಸೂರ್ಯಕಾಂತ್ ಭಟ್ ಗೆ ಸಂಸ್ಮರಣಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ3 Nov 2025 7:41 PM IST
share
ಮೂಡುಬಿದಿರೆ | ಹಿರಿಯ ಯಕ್ಷಗಾನ ಭಾಗವತ ಕಣಿಯೂರು ಸೂರ್ಯಕಾಂತ್ ಭಟ್ ಗೆ ಸಂಸ್ಮರಣಾ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಶ್ರೀಮಂತ ಕಲೆಯಾದ ಯಕ್ಷಗಾನದ ಹಿಂದಿನ ಪರಂಪರೆಯನ್ನು ಜೈನ ಪರಂಪರೆಯ ಮೂಲಕ ನೆನಪಿಸುವಂತಹ ಪ್ರಯತ್ನವನ್ನು ಶ್ರೀಧರ ಪಾಂಡಿಯವರ ನೆನಪಿನೊಂದಿಗೆ ಮಾಡುತ್ತಿದ್ದೇವೆ. ಇದು ನಮ್ಮ ಬಹು ವರ್ಷಗಳ ಕನಸು. ಮುಂಬರುವ ದಿನಗಳಲ್ಲಿ ಯಕ್ಷಗಾನವನ್ನು ದೊಂದಿ ಬೆಳಕಿನೊಂದಿಗೆ ಯಕ್ಷಗಾನ ಪರಂಪರೆಯ ಮೂಲ ಸ್ವರೂಪದಲ್ಲಿ ಯಾವುದೇ ಆಧುನಿಕ ಉಪಕರಣಗಳು ಇಲ್ಲದೇ, ಪ್ರಕೃತಿಯೊಂದಿಗೆ ಬೆರೆತು ಪ್ರಸ್ತುತಪಡಿಸುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.

ಅವರು ಸಾವಿರ ಕಂಬದ ಬಸದಿಯ ಆವರಣದ ಮರೋಡಿ ಗುಡ್ಡನ್‌ಬೆಟ್ಟು ಗುತ್ತು ದಿ.ಶಾಂತಿರಾಜ ಪಾಂಡಿ ಮತ್ತು ನಲ್ಲೂರು ಮರ್ದ್ರಬೆಟ್ಟು ದಿ.ಭುಜಬಲಿ ಅಧಿಕಾರಿ ಸ್ಮರಣೀಯ ವೇದಿಕೆಯಲ್ಲಿ ರವಿವಾರ ನಡೆದ ಯಕ್ಷಗಾನ ಅರ್ಥಧಾರಿ, ಪ್ರಸಂಗಕತೃ ಎಂ. ಶ್ರೀಧರ ಪಾಂಡಿ ಸಾಣೂರು ಅವರ 14ನೇ ವರ್ಷದ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಪ್ರಶಸ್ತಿ ಪ್ರದಾನ :

ಹಿರಿಯ ಯಕ್ಷಗಾನ ವಿದ್ವಾಂಸ ಡಾ.ಕೆ.ಎಂ.ರಾಘವ ನಂಬಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಭಾಗವತ ಕಣಿಯೂರು ಸೂರ್ಯನಾರಾಯಣ ಭಟ್ ಅವರಿಗೆ ಶ್ರೀಧರ ಪಾಂಡಿಯವರ ಸಂಸ್ಕರಣಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಜಿತ್ ಜೈನ್ ನಾರಾವಿ ಧಾರ್ಮಿಕ ಉಪನ್ಯಾಸ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ, ವಾಗ್ಮಿ ಮುನಿರಾಜ ರೆಂಜಾಳ ಸಂಸ್ಮರಣಾ ಮಾತುಗಳನ್ನಾಡಿದರು.

ಶ್ರೀ ಆದಿನಾಥ ಸ್ವಾಮಿ ಬಸದಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೊ.ಕೆ.ಗುಣಪಾಲ ಕಡಂಬ, ನಿವೃತ್ತ ಪ್ರಾಂಶುಪಾಲರಾದ ಡಾ.ಉದಯ ಕುಮಾರ್ ಇರ್ವತ್ತೂರು, ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ,ಶ್ರೀಧರ್ ಪಾಂಡಿ ಅವರ ಪುತ್ರ ಶ್ರೀಕಾಂತ್ ಪಾಂಡಿ ಉಪಸ್ಥಿತರಿದ್ದರು.

ಶ್ರೀಶಾ ಅತಿಕಾರಿ ಸ್ವಾಗತಿಸಿದರು. ಜಯಶ್ರೀ ಅತಿಕಾರಿ ಕಾರ್ಯಕ್ರಮ ನಿರೂಪಿಸಿದರು. ನಾಗವರ್ಮ ಜೈನ್ ಸನ್ಮಾನಪತ್ರ ವಾಚಿಸಿದರು. ವರ್ಷಾ ಅಧಿಕಾರಿ ವಂದಿಸಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಎಂ.ಶ್ರೀಧರ ಪಾಂಡಿ ಸಾಣೂರು ಅವರು ರಚಿಸಿದ ಪ್ರಸಂಗವಾದ ಜಿನಕಥೆಯ ದೊಂದಿ ಬೆಳಕಿನ ಯಕ್ಷಗಾನ ಶ್ರೀ ಪಾರ್ಶ್ವನಾಥ ಚರಿತೆಯನ್ನು ಪ್ರಥಮ ಬಾರಿಗೆ ಪ್ರದರ್ಶಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X