ಮೂಡುಬಿದಿರೆ | ತಂಡದಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ

ಮೂಡುಬಿದಿರೆ, ಡಿ.11: ಯುವಕರ ತಂಡವೊಂದು ಪೆಟ್ರೋಲ್ ಬಂಕ್‌ನ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬ್ಬಂದಿ ಸುರೇಶ್ ಮತ್ತಿತರರಿಗೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿರುವ ಸಿಬ್ಬಂದಿ ಮತ್ತು ನಾಲ್ವರು ಯುವಕರು ಪರಿಚಿತರಾಗಿದ್ದು, ಹಳೆ ದ್ವೇಷದಿಂದ ಹಲ್ಲೆ ನಡೆಸಿರಬಹುದೆಂದು ಶಂಕಿಸಲಾಗಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
Next Story





