ಮೂಡುಬಿದಿರೆ | ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿ ಪ್ರಾರಂಭ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಶುಕ್ರವಾರ ಪ್ರಾರಂಭಿಸಲಾಯಿತು.
ಪುರಸಭೆ ಸದಸ್ಯೆ ದಿವ್ಯಾ ಜಗದೀಶ್ ತರಗತಿಯನ್ನು ಉದ್ಘಾಟಿಸಿ, ಸಮಾಜಕ್ಕೆ ಉತ್ತಮ ವ್ಯಕ್ತಿ, ಸುಂದರ ವ್ಯಕ್ತಿತ್ವವನ್ನು ನೀಡಲು ಅಡಿಪಾಯವು ಅಂಗನವಾಡಿಯಲ್ಲಿ ಸಿಗುವ ಶಿಕ್ಷಣದಿಂದ ದೊರೆಯುತ್ತದೆ. ಗಾಂಧಿನಗರ ಅಂಗನವಾಡಿ ಕೇಂದ್ರವು ಪುರಸಭೆ ವ್ಯಾಪ್ತಿಯಲ್ಲಿ ಮಾದರಿ ಅಂಗನವಾಡಿಯಾಗಿದ್ದು, ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ ಎಂದರು.
ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‌ಟೌನ್ ಅಧ್ಯಕ್ಷ ಹರೀಶ್ ಎಂ.ಕೆ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸೌಮ್ಯಲತಾ ನಾಯ್ಕ್, ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭವ್ಯಾ, ಹಿರಿಯರಾದ ಸುಧಾ ಶೆಟ್ಟಿ, ಸ್ತ್ರಿ ಶಕ್ತಿ ಸದಸ್ಯೆ ರವಿಕಲಾ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಹಾಯಕಿ ಅಕ್ಷತಾ, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
Next Story





