Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ...

ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ವಾರ್ತಾಭಾರತಿವಾರ್ತಾಭಾರತಿ26 Oct 2024 3:01 PM IST
share
ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ. ಚೌಟ ಕೂಡಾ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಸೂಕ್ತ ಮಾರ್ಗದರ್ಶನ ಕೊಡಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.

Tags

MP Brijesh Chowta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X