Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ | ಎಂಆರ್‌ಪಿಎಲ್ 4ನೇ ಹಂತದ...

ಸುರತ್ಕಲ್ | ಎಂಆರ್‌ಪಿಎಲ್ 4ನೇ ಹಂತದ ನಿರ್ವಸಿತರ 9 ವರ್ಷಗಳ ಹೋರಾಟಕ್ಕೆ ಜಯ; 436 ಮಂದಿಗೆ ಉದ್ಯೋಗ, ಪುನರ್ವಸತಿ ಬದಲು ನಗದು ಪರಿಹಾರ

ವಾರ್ತಾಭಾರತಿವಾರ್ತಾಭಾರತಿ13 Nov 2025 10:25 PM IST
share
ಸುರತ್ಕಲ್ | ಎಂಆರ್‌ಪಿಎಲ್ 4ನೇ ಹಂತದ ನಿರ್ವಸಿತರ 9 ವರ್ಷಗಳ ಹೋರಾಟಕ್ಕೆ ಜಯ; 436 ಮಂದಿಗೆ ಉದ್ಯೋಗ, ಪುನರ್ವಸತಿ ಬದಲು ನಗದು ಪರಿಹಾರ

ಸುರತ್ಕಲ್: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿ. (ಎಂಆರ್‌ಪಿಎಲ್) 4ನೇ ಹಂತದಿಂದ ಭೂ ನಿರ್ವಸಿತರಾಗುವ ಕುತ್ತೆತೂರು, ಪೆರ್ಮುದೆ, ಎಕ್ಕಾರು ಗ್ರಾಮದ ನಿರ್ವಸಿತರ ಕುಟುಂಬಗಳ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ಸಂಸದರು, ಶಾಸಕರು ಮತ್ತು ಎಂಆರ್‌ಪಿ ಎಲ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗುರುವಾರ ನಡೆಯಿತು.

ಸಭೆಯಲ್ಲಿ ಸ್ಥಳೀಯರ ಬೇಡಿಕೆಗಳಾದ ನಿರ್ವಸಿತ ಕುಟುಂಬಗಳ ಒಟ್ಟು 436 ಮಂದಿಗೆ ಉದ್ಯೋಗಾವಕಾಶ, ಪುನರ್ವಸತಿ ಕಲ್ಪಿಸುವ ಬದಲು ನಗದು ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಈ ಮೂಲಕ ಒಂಭತ್ತು ವರ್ಷಗಳ ನಿರ್ವಸಿತರ ಹೋರಾಟಕ್ಕೆ ಜಯ ದೊರೆತಿದೆ.

ಜಿಲ್ಲಾಧಿಕಾರಿ ನೇತೃತ್ವದ ಆರ್ ಆಂಡ್ ಆರ್ ಸಮಿತಿಯ ಸದಸ್ಯ, ನಿರ್ವಸಿತ ಸಮಿತಿಯ ಗೌರವಾಧ್ಯಕ್ಷ ಜೆ.ಐ.ಡೋನಿ ಸುವಾರಿಸ್ ಮಾತನಾಡಿ, ಸಂತ್ರಸ್ತರಿಗೆ ಉದ್ಯೋಗ ಮತ್ತು ನಿರ್ವಸಿತರಿಗೆ ನಿವೇಶನವನ್ನು ವಿಳಂಬವಿಲ್ಲದೆ ಕೂಡಲೇ ನೀಡಬೇಕೆಂದು ಒತ್ತಾಯಿಸಿದರು.

ಉದ್ಯೋಗದ ಕುರಿತಂತೆ ಈವರೆಗೆ ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಸಭೆಯಲ್ಲಿ ನಿಗದಿಪಡಿಸುವಂತೆ ಸಮಿತಿಯ ಸಹ ಸದಸ್ಯರು ಒತ್ತಾಯಿಸಿದರು.

ಈ ಬಗ್ಗೆ ಸಭೆಯಲ್ಲಿ ಹಾಜರಿದ್ದ ಎಂಆರ್‌ಪಿಎಲ್ ಅಧಿಕಾರಿಗಳು ಸಮಾಲೋಚನೆ ನಡೆಸಿ ಆರ್ ಆಂಡ್ ಆರ್ ಸಮಿತಿಯಿಂದ ಅನುಮೋದನೆಗೊಂಡ ಉದ್ಯೋಗಾಕಾಂಕ್ಷಿಗಳ ಪಟ್ಟಿಯನ್ನು ಎಂಆರ್‌ಪಿಎಲ್‌ಗೆ ಸಲ್ಲಿಸಿದ ದಿನಾಂಕದಿಂದ ಆರು ತಿಂಗಳೊಳಗಾಗಿ ಉದ್ಯೋಗ ನೀಡಬೇಕೆಂದು ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರುಗಳಾದ ಉಮಾನಾಥ ಎ. ಕೋಟ್ಯಾನ್, ಡಾ.ಭರತ್ ಶೆಟ್ಟಿ ವೈ. ಮತ್ತು ಜಿಲ್ಲಾಧಿಕಾರಿ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಕಾರಣಕ್ಕೂ ವಂಶವೃಕ್ಷ ಮತ್ತು ನಿರಾಕ್ಷೇಪಣಾ ಪತ್ರವನ್ನು ತರಲು ಒತ್ತಾಯಿಸದೆ, ಅರ್ಜಿಯನ್ನು ಪಡೆದುಕೊಳ್ಳುವಂತೆ ಕೆಪಿಟಿ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಿದರು.

ನಗದು ಪರಿಹಾರ

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಹೊಸತಾಗಿ ಆರ್ ಆಂಡ್ ಆರ್ ಕಾಲನಿಯನ್ನು ರಚಿಸಬೇಕಾದರೆ ತುಂಬಾ ಸಮಯ ತಗಲುತ್ತದೆ. ಇದರಿಂದ ನಿರ್ವಸಿತರಿಗೆ ಉದ್ಯೋಗ ಮತ್ತಿತರ ಸವಲತ್ತುಗಳನ್ನು ನೀಡಲು ತುಂಬಾ ವಿಳಂಬವಾಗುತ್ತದೆ. ಹಾಗಾಗಿ ನಿರ್ವಸಿತರ ಮನವೊಲಿಸಿ ನಿವೇಶನಕ್ಕಾಗಿ ಬೇಡಿಕೆ ಸಲ್ಲಿಸದೆ ನಗದು ಪರಿಹಾರವನ್ನೇ ಆಯ್ದುಕೊಳ್ಳುವಂತೆ ಕೋರಿಕೊಂಡರು. ಉದ್ಯೋಗ ಮತ್ತಿತರ ಸವಲತ್ತುಗಳಿಗೆ ಸಂಬಂಧಿಸಿದಂತೆ ಎಲ್ಲ ಅರ್ಹ ನಿರ್ವಸಿತರು ಡಿಸೆಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ, ಕಾರ್ಯಪಾಲಕ ಅಭಿಯಂತರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಎಂಆರ್‌ಪಿಎಲ್ ಅಧಿಕಾರಿಗಳು, ಎಂಆರ್‌ಪಿಎಲ್ 4ನೇ ಹಂತದ ನಿರ್ವಸಿತರ ಸಮಿತಿಯ ಅಧ್ಯಕ್ಷ ಸುಧಾಕರ ಶೆಟ್ಟಿ ಕುತ್ತೆತ್ತೂರು, ಕಾರ್ಯದರ್ಶಿ ಕೇಶವ ಶೆಟ್ಟಿ ಕುತ್ತೆತ್ತೂರು, ಕೃಷ್ಣಮೂರ್ತಿ ಕುತ್ತೆತ್ತೂರು, ರೊನಾಲ್ಡ್ ಫೆರ್ನಾಂಡಿಸ್ ಪೆರ್ಮುದೆ, ಜಿ.ಕೆ.ಪೂವಪ್ಪಪೆರ್ಮುದೆ, ಮಾರ್ಕೋ ಡಿಸೋಜ ಪೆರ್ಮುದೆ, ಸಂದೇಶ್ ಪೂಜಾರಿ, ಲಲಿತಾ ಪೆರ್ಮುದೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X