Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಗುವಿಗೆ ಥೈರಾಯ್ಡ್ ಸಮಸ್ಯೆ ಎಂದು ತಪ್ಪು...

ಮಗುವಿಗೆ ಥೈರಾಯ್ಡ್ ಸಮಸ್ಯೆ ಎಂದು ತಪ್ಪು ವರದಿ ನೀಡಿದ ಮುಕ್ಕ ಶ್ರೀನಿವಾಸ ಆಸ್ಪತ್ರೆ: ಆರೋಪ

► ಸೂಕ್ತ ಕಾನೂನು ಕ್ರಮಕ್ಕೆ ಸಂತ್ರಸ್ತ ಪೋಷಕರಿಂದ ದೂರು ► ತನಿಖೆಗೆ ಡಿಎಚ್‌ಒ ನೇತೃತ್ವದಲ್ಲಿ ತಂಡ ರಚನೆ

ವಾರ್ತಾಭಾರತಿವಾರ್ತಾಭಾರತಿ17 Sept 2024 11:10 PM IST
share
ಮಗುವಿಗೆ ಥೈರಾಯ್ಡ್ ಸಮಸ್ಯೆ ಎಂದು ತಪ್ಪು ವರದಿ ನೀಡಿದ ಮುಕ್ಕ ಶ್ರೀನಿವಾಸ ಆಸ್ಪತ್ರೆ: ಆರೋಪ

ಸುರತ್ಕಲ್: ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ 4 ತಿಂಗಳ ಮಗುವಿಗೆ ಥೈರಾಯಿಡ್ ಇರುವುದಾಗಿ ತಪ್ಪು ವರದಿ ನೀಡುವ ಜೊತೆಗೆ 3 ತಿಂಗಳಿಗಾಗುವಷ್ಟು ಔಷಧಿಗಳನ್ನು ಬರೆದು ಕೊಟ್ಟು ಮಗುವಿನ ಜೀವನವನ್ನೇ ನಾಶಮಾಡಲು ಮುಂದಾಗಿದ್ದರು ಎಂದು ಮಗುವಿನ ತಂದೆ ಗಂಭೀರ ಆರೋಪ ಮಾಡಿದ್ದು, ಅವರು ಸುರತ್ಕಲ್ ಪೊಲೀಸರು ಮತ್ತು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.

ಘಟನಗೆ ಸಂಬಂಧಿಸಿ ʼವಾರ್ತಾಭಾರತಿʼಯೊಂದಿಗೆ ಮಾತನಾಡಿದ ಮಗುವಿನ ತಂದೆ ಸಂತ್ರಸ್ತ ಸುರತ್ಕಲ್ ಸಸಿಹಿತ್ಲು ನಿವಾಸಿ ರಾಮ ಸಾಲ್ಯಾನ್, ತಿಂಗಳ ಚುಚ್ಚುಮದ್ದು ಪಡೆದುಕೊಳ್ಳಲೆಂದು ನನ್ನ ಪತ್ನಿ 4 ತಿಂಗಳ ಮಗಳೊಂದಿಗೆ ಶ್ರೀನಿವಾಸ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಅಲ್ಲಿನ ವೈದ್ಯರು ಮಗುವಿನ ಥೈರಾಯಿಡ್ ಲಕ್ಷಣಗಳ ಪರಿಶೀಲನೆಗೆ ಆಸ್ಪತ್ರೆಯ ಲ್ಯಾಬ್‌ಗೆ ಚೀಟಿ ಬರೆದುಕೊಟ್ಟಿದ್ದರು. ಅದರಂತೆ ಅಲ್ಲಿ ರಕ್ತ ಪರೀಕ್ಷೆ ನಡೆಸಿದ ಸಿಬ್ಬಂದಿ ಮಗುವಿನಲ್ಲಿ 12.05 ಥೈರಾಯಿಡ್ ಇರುವುದುದಾಗಿ ವರದಿ ನೀಡಿದ್ದರು. ಅದನ್ನು ವೈದ್ಯರಿಗೆ ತೋರಿಸಿದಾಗ ಮಗುವಿನಲ್ಲಿ ಥೈರಾಯಿಡ್ ಪ್ರಮಾಣ ಅಧಿಕವಾಗಿದ್ದು, ತಕ್ಷಣ ಚಿಕಿತ್ಸೆ ನೀಡಬೇಕೆಂದು ಹೇಳಿ, 3 ತಿಂಗಳ ಕಾಲ ನಿರಂತರ ಔಷಧಿ ನೀಡುವಂತೆ ಹೇಳಿ ಔಷಧಿ ಬರೆದುಕೊಟ್ಟಿದ್ದರು ಎಂದು ಹೇಳಿದ್ದಾರೆ.

ಮರುದಿನ ಪಕ್ಕದ ಮನೆಯವರಲ್ಲಿ ಮಗುವಿನ ವಿಚಾರ ತಿಳಿಸಿದಾಗ ಅವರು ಶ್ರೀನಿವಾಸ್ ಆಸ್ಪತ್ರೆಯ ವೈದ್ಯಕೀಯ ವರದಿಗಳು ಸರಿಯಾಗಿ ಬರುವುದಿಲ್ಲ ಎಂದು ತಮ್ಮ ಅನುಭವ ಹೇಳಿದ್ದರು. ಹಾಗಾಗಿ ಸಂಶಯಕ್ಕೊಳಗಾಗಿ ಮಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಮತ್ತೆ ಥೈರಾಯಿಡ್ ಪರೀಕ್ಷೆ ಮಾಡಿಸಿದೆ. ಮಗುವಿಗೆ ಥೈರಾಯಿಡ್ ಸಹಜ ಸ್ಥಿತಿಯಲ್ಲಿರುವುದಾಗಿ ಅಲ್ಲಿನ ವೈದ್ಯರು ವರದಿ ನೀಡಿದ್ದಾರೆ ಎಂದು ರಾಮ ಸಾಲ್ಯಾನ್ ತಿಳಿಸಿದರು.

ಎಜೆ ಆಸ್ಪತ್ರೆಯಿಂದ ನೇರ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ಹೋಗಿ ಅಲ್ಲಿ ವೈದ್ಯರನ್ನು ವಿಚಾರಿಸಿದಾಗ ಅವರು ಲ್ಯಾಬ್ ಸಿಬ್ಬಂದಿಯನ್ನು ದೂರುತ್ತಾರೆ. ಸಿಬ್ಬಂದಿ ಥೈರಾಯಿಡ್ ಪರೀಕ್ಷಿಸುವ ಮೆಶಿನ್‌ನ್ನು ದೂರಲು ಆರಂಭಿಸಿದರು. ಸೂಕ್ತ ಸ್ಪಂದನ ನೀಡದಿದ್ದರೆ ಮಾಧ್ಯಮದವರನ್ನು ಕರೆಸುವುದಾಗಿ ಹೇಳಿದ ಕಾರಣ ಹೆದರಿದ ಆಸ್ಪತ್ರೆಯವರು ತಕ್ಷಣ ನನ್ನ ಮನೆಗೆ ತೆರಳಿ ಮಗುವಿನ ರಕ್ತದ ಮಾದರಿಯನ್ನು ಸಂಗ್ರಹಿಸಿಕೊಂಡು ಮತ್ತೆ ಥೈರಾಯಿಡ್ ಪರೀಕ್ಷೆಗೆ ಒಳಪಡಿಸಿದರು. ಈ ವೇಳೆ ಥೈರಾಯಿಡ್ ಸಹಜ ಸ್ಥಿತಿಯಲ್ಲೇ ಇರುವುದಾಗಿ ವರದಿ ಬಂದಿದೆ ಎಂದವರು ತಿಳಿಸಿದರು.

ನನ್ನ ಮಗಳಿಗೆ ಥೈರಾಯಿಡ್ ಪರೀಕ್ಷೆ ನಡೆಸಿ ತಪ್ಪು ವರದಿ ನೀಡಿದ ಮುಕ್ಕದ ಶ್ರೀನಿವಾಸ ಆಸ್ಪತ್ರೆ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂತ್ರಸ್ತ ಮಗುವಿನ ತಂದೆ ರಾಮ ಸಲ್ಯಾನ್ ಸುರತ್ಕಲ್ ಪೊಲೀಸ್ ಠಾಣೆಗೆ ಮತ್ತು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ತಮ್ಮಯ್ಯ ಅವರಿಗೆ ದೂರು ನೀಡಿದ್ದಾರೆ.

ತನಿಖೆಗೆ ತಂಡ ರಚಿಸಲಾಗಿದೆ: ಡಿಎಚ್ ಒ

ಸಂತ್ರಸ್ತ ಮಗುವಿನ ತಂದೆ ನೇರವಾಗಿ ನಮ್ಮ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ. ಈ ಕುರಿತು ತನಿಖೆಗಾಗಿ ಈಗಾಗಲೇ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಈ ಬಗ್ಗೆ ಸುಧೀರ್ಘ ತನಿಖೆ ನಡೆಯಬೇಕಿದೆ. ತಂಡದಲ್ಲಿ ಒಬ್ಬರು ಆರೋಗ್ಯಾಧಿಕಾರಿ, ಮಕ್ಕಳ ತಜ್ಞರು, ಬಯೋಕೆಮಿಸ್ಟ್ರಿ ಇದ್ದಾರೆ. ತನಿಖೆಗೆ ಕಾಲಾವಕಾಶ ಬೇಕಿದ್ದು, ಆದಷ್ಟು ಶೀಘ್ರದಲ್ಲಿ ತನಿಖೆ ನಡೆಸಿ ವರದಿಯನ್ನು ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ತಿಮ್ಮಯ್ಯ ವಾರ್ತಾಭಾರತಿಗೆ ಸ್ಪಷ್ಟನೆ ನೀಡಿದ್ದಾರೆ.

"ತನ್ನ ಮಗುವಿನ ಥೈರಾಯಿಡ್ ಪರೀಕ್ಷೆ ನಡೆಸಿ ತಪ್ಪು ವರದಿ ನೀಡಿ ವಂಚಿಸಲು ಮುಂದಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಲ್ಳುವಂತೆ ಸಂತ್ರಸ್ತ ಮಗುವಿನ ತಂದೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಳ್ಳಲಾಗಿದೆ. ದೂರು ಬಂದ ದಿನವೇ ಅದನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿ, ಸೂಕ್ತ ತನಿಖೆ ನಡೆಸುವಂತೆ ಹೇಳಲಾಗಿದೆ. ಅವರಿಂದ ವರದಿ ಬಂದ ಬಳಿಕ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು".

- ಮಹೇಶ್ ಪ್ರಸಾದ್, ಪೊಲೀಸ್ ನಿರೀಕ್ಷಕರು, ಸುರತ್ಕಲ್ ಪೊಲೀಸ್ ಠಾಣೆ

ಮುಕ್ಕ ಸಸಿಹಿತ್ಲು ನಿವಾಸಿ ರಾಮ ಸಾಲ್ಯಾನ್ ಅವರು ತನ್ನ 4 ತಿಂಗಳ ಮಗುವಿಗೆ ಥೈರಾಯಿಡ್ ಸಂಬಂಧಿತ ತಪ್ಪು ವರದಿ ನೀಡಿರುವ ಕುರಿತ ದೂರು ಆಧರಿಸಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಸ್ಪಷ್ಟನೆ ಕೇಳುವ ಸಲುವಾಗಿ ಆಸ್ಪತ್ರೆಯ ಮೆಡಿಕಲ್ ಸೂಪ್ರಿಟೆಂಡೆಂಟ್ ಡಾ.ಡೇವಿಡ್ ರೊಸಾರಿಯೊರನ್ನು ʼವಾರ್ತಾಭಾರತಿʼ ದೂರವಾಣಿ ಮೂಲಕ ಹಲವು ಬಾರಿ ಸಂಪರ್ಕಿಸಲು ಯತ್ನಿಸಿತು. ಆದರೆ ಅವರು ಕರೆಗಳನ್ನು ಸ್ವೀಕರಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X