ಮುಲ್ಕಿ: ಬಪ್ಪನಾಡು ದೇವಸ್ಥಾನದ ರಥೋತ್ಸವದ ವೇಳೆ ಮುರಿದುಬಿದ್ದ ರಥ

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಇದರಿಂದ ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಬೆಳಗಿನ ಜಾವ ಸುಮಾರು 1:40ರಿಂದ 2 ಗಂಟೆ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಅರ್ಚಕರು ರಥದಲ್ಲಿ ಕುಳಿತಿದ್ದರು. ಕೆಳಗಡೆ ಸಾವಿರಾರು ಭಕ್ತರು ರಥ ಎಳೆಯುತ್ತಿದ್ದರು. ಏಕಾಏಕಿ ರಥವನ್ನು ನಿಗ್ರಹಿಸುವ ದಂಡ ತುಂಡಾಗಿದ್ದರಿಂದ ರಥದ ಮೇಲ್ಬಾಗ ಕುಸಿದಿದೆ.
ಈ ಘಟನೆ ಕೆಲಹೊತ್ತು ಭಕ್ತರಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ಮುಂದುವರಿಸಲಾಯಿತು.
Next Story