Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.13,14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ...

ಅ.13,14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ 2023: ಫಾ.ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ12 Oct 2023 7:28 PM IST
share
ಅ.13,14 ರಂದು ಮುಲ್ಲರ್ ಮೆಡಿ ಎಕ್ಸ್ ಪೋ 2023: ಫಾ.ಮಲ್ಲರ್ ಎಂಬಿಬಿಎಸ್ ಪದವಿಯ ಬೆಳ್ಳಿ ಹಬ್ಬ ಆಚರಣೆ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ, ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರವು ಅ.13,14 ಎರಡು ದಿನಗಳ ಕಾಲ ವಸ್ತು ಪ್ರದರ್ಶನವನ್ನು ಏರ್ಪಡಿಸಿದೆ ಎಂದು ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ನಿರ್ದೇಶಕ ವಂ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸಂಜೀವ ರೈ ಮಾತನಾಡುತ್ತಾ,ಈ ವಸ್ತು ಪ್ರದರ್ಶನದಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಸಂಶೋಧನಾ ಯೋಜನೆಗಳು ಮತ್ತು ಮಾದರಿಗಳ ಪ್ರಸ್ತುತಿಯ ಸ್ಪರ್ಧೆ ಇದೆ. ಆರೋಗ್ಯದ ಬಗ್ಗೆ ಧನಾತ್ಮಕ ಪ್ರಚಾರ, ಆಹಾರ ಮತ್ತು ಪೌಷ್ಟಿಕತೆ, ಬಲ ಮತ್ತು ನೈರ್ಮಲ್ಯ, ವೈದ್ಯಕೀಯ ಉಪಕರಣಗಳು, ಪರಿಸರ ಮಾಲಿನ್ಯ ಈ ವಿಷಯಗಳಲ್ಲಿ ಅತ್ಯುತ್ತಮ ಪ್ರಸ್ತುತಿಗಳಿಗೆ ಬಹುಮಾನಗಳಿವೆ. ವಿವಿಧ ಶಾಲಾ ಕಾಲೇಜುಗಳ ನೂರ ಮೂವತ್ತೊಂದು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ, ಆರನೇ ತರಗತಿ ಯಿಂದ ಎಂಟನೇ ತರಗತಿ, ಒಂಭತ್ತರಿಂದ ಹನ್ನೆರಡು, ಡಿಪ್ಲೋಮ ಮತ್ತು ವೃತ್ತಿಪರ ಶಿಕ್ಷಣ ಹೀಗೆ ಮೂರೂ ವಿಭಾಗ ಗಳಲ್ಲಿ ಪ್ರತ್ಯೇಕವಾಗಿ ವಿಜೇತರನ್ನು ನಿರ್ಧರಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.

ಇದರ ಜೊತೆಗೆ ಫಾದರ್ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಳ ಭಾಗವಹಿಸುವಿಕೆಯಲ್ಲಿ ವಿವಿಧ ಮಾದರಿಗಳನ್ನು ಒಳಗೊಂಡ ವಸ್ತು ಪ್ರದರ್ಶನ ನಡೆಯಲಿದೆ. ಅಲ್ಲದೇ, ಸಾರ್ವಜನಿಕರಿಗಾಗಿ ಆರೋಗ್ಯ ತಪಾಸಣಾ ವ್ಯವಸ್ಥೆಯು ಇರಲಿದೆ. ಈ ವಸ್ತು ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇದೆ. ಮಕ್ಕಳು ಮತ್ತು ಎಲ್ಲಾ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದೇ ವಸ್ತುಪ್ರದರ್ಶನದ ಮುಖ್ಯ ಉದ್ದೇಶವಾಗಿದೆ.

ಅಕ್ಟೋಬರ್ 13 ರಂದು ಹತ್ತು ಘಂಟೆಗೆ ಈ ಕಾರ್ಯಕ್ರಮಗಳ ಉದ್ಘಾಟನೆ ನಡೆಯುತ್ತದೆ. ಎನ್ ಐ ಟಿ ಕೆ ಸುರತ್ಕಲ್ ಇದರ ಸಂಶೋಧನಾ ನಿರ್ದೇಶಕರಾದ ಡಾ. ಸತ್ಯಬೋದ್‌ ಕುಲಕರ್ಣಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಮಾರಂಭದಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾ. ರಿಚರ್ಡ್ ಅಲೋಸಿಯಸ್‌ ಕುವೆಲ್ಲೂ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆಗಳ ಆಡಳಿತಾಧಿಕಾರಿಗಳು, ಮಂಡಳಿಯ ಸದಸ್ಯರು, ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿ ದ್ದಾರೆ ಎಂದು ಡಾ. ಸಂಜೀವ ರೈ ತಿಳಿಸಿದ್ದಾರೆ.

ಎಂಬಿಬಿಎಸ್ ಪದವಿ ಬೆಳ್ಳಿ ಹಬ್ಬ ಕ್ಕೆ ಚಾಲನೆ: ಅ.16ರಂದು ಸಂಸ್ಥೆಯ ಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿ 24 ವರ್ಷ ಪೂರ್ಣ ಗೊಂಡು 25 ವರ್ಷ ಕ್ಕೆ ಪದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ 2023-24 ವರ್ಷ ವನ್ನು ಬೆಳ್ಳಿ ಹಬ್ಬದ ವರ್ಷ ವಾಗಿ ವಿವಿಧ ಕಾರ್ಯ ಕ್ರಮಗಳೊಂದಿಗೆ ಆಚರಿಸಲಾಗುವುದು.ಸಂಸ್ಥೆಯ ಹಳೆ ವಿದ್ಯಾರ್ಥಿಗಳು, ವಿವಿಧ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ವರ್ಷ ವಿಡೀ ಕಾರ್ಯಕ್ರಮ ನಡೆಯಲಿದೆ.ಅ.16ರಂದು ಫಾ.ಮುಲ್ಲರ್ ಕನ್ ವೆನ್ಶನ್ ಸೆಂಟರ್ ಪಂಪ್ ವೆಲ್ ಸಭಾಂಗಣದಲ್ಲಿ ಸಂಜೆ 3.30 ಗಂಟೆಗೆ ಸಂಸ್ಥೆಯ ಅಧ್ಯಕ್ಷ ಬಿಷಪ್ ಅತೀ.ವಂ.ಪೀಟರ್ ಪೌಲ್ ಸಲ್ದಾನರ ಅಧ್ಯಕ್ಷ ತೆಯಲ್ಲಿ ನಡೆಯಲಿದೆ ಎಂದು ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ನಿರ್ದೇಶಕ ವಂ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ನಿರ್ದೇಶಕ ವಂ.ರಿಚರ್ಡ್ ಅಲೋಶಿಯಸ್ ಕುವೆಲ್ಲೋ, ಮತ್ತು ವಿವಿಧ ವಿಭಾಗದ ಮುಖ್ಯಸ್ಥರಾದ ಅಜಿತ್ ಮಿನೇಜಸ್,ಜೀವನ್ ಸಿಕ್ವೇರಾ,ನೆಲ್ಸನ್ ದೀರಜ್ ಪಾಯಸ್, ಡಾ.ಉದಯ ಕುಮಾರ್, ಡಾ.ಅರ್ಚನಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X