Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಾರ್ಮಾಡಿಯಲ್ಲಿ ವೃದ್ಧ ದಂಪತಿಯ ಕೊಲೆ...

ಚಾರ್ಮಾಡಿಯಲ್ಲಿ ವೃದ್ಧ ದಂಪತಿಯ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಸಜೆ

ವಾರ್ತಾಭಾರತಿವಾರ್ತಾಭಾರತಿ25 Jan 2025 10:00 PM IST
share
ಚಾರ್ಮಾಡಿಯಲ್ಲಿ ವೃದ್ಧ ದಂಪತಿಯ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಸಜೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್ ಎಂಬಲ್ಲಿ ವೃದ್ಧ ದಂಪತಿಯ ಕೊಲೆಗೈದ ಪ್ರಕರಣದಲ್ಲಿ ಗದಗದ ರಾಜು ಕಲ್ಲವಡ್ಡರ್ ಯಾನೆ ರಾಜೇಶ್ ಯಾನೆ ರಾಜು ಕಲ್ಲವಡ್ಡರ್ ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು ಜೀವಾವಧಿ ಸಜೆ ವಿಧಿಸಿದೆ.

2016ರ ನವೆಂಬರ್ 10-11ರ ರಾತ್ರಿ ವೃದ್ಧ ದಂಪತಿ ವರ್ಕಿ ಕೆ.ವಿ (85) ಮತ್ತು ಎಲಿಕುಟ್ಟಿ(80) ಎಂಬವರನ್ನು ರಾಜು ಕಲ್ಲವಡ್ಡರ್ ಕೊಲೆಗೈದು ಅವರ ಮನೆಯಲ್ಲಿದ್ದ ನಗ ನಗದು ಸೇರಿದಂತೆ 4.50 ರೂ. ಮೌಲ್ಯದ ಸೊತ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದನು.

ನೆರಿಯಾ ಗ್ರಾಮದ ಬಾಂಜಾರುಮಲೆಗೆ ಡ್ಯಾಂನ ಕೂಲಿ ಕೆಲಸಕ್ಕೆ ಬಂದಿದ್ದ‌ ಆರೋಪಿ ರಾಜು ಕಲ್ಲವಡ್ಡರ್ ವರ್ಕಿ ಕೆ.ವಿ. ಮನೆಯ ಬಳಿ ಬಂದು ಮೂಗನಂತೆ ನಟಿಸಿ, ದಾರಿ ಕೇಳುವ ನೆಪದಲ್ಲಿ ಅವರನ್ನು ಸ್ವಲ್ಪ ದೂರಕ್ಕೆ ಕರೆದುಕೊಂಡು ಬಂದು ಮರದ ದೊಣ್ಣೆಯಿಂದ ಹಲ್ಲೆ ನಡೆಸಿ, ಬಳಿಕ ಬಟ್ಟೆಯಿಂದ ಕುತ್ತಿಗೆಯನ್ನು ಬಿಗಿದು ಉಸಿರು ಕಟ್ಟಿಸಿ ಕೊಲೆಗೈದಿದ್ದನು. ಬಳಿಕ ಮನೆಯೊಳಗೆ ಪ್ರವೇಶಿಸಿ ಸೊತ್ತುಗಳನ್ನು ಜಾಲಾಡುತ್ತಿರುವಾಗ, ಎಚ್ಚರಗೊಂಡ ಎಲಿಕುಟ್ಟಿ ಅವರಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಬಟ್ಟೆಯಿಂದ ಕುತ್ತಿಗೆಯನ್ನು ಬಿಗಿದು ಕೊಲೆಗೈದು, ಮನೆಯೊಳಗಿದ್ದ 25 ಪವನ್ ಚಿನ್ನ ಮತ್ತು ನಗದನ್ನು ದೋಚಿಸಿ ಪರಾರಿಯಾಗಿರುವುದಾಗಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಆತ ದೋಚಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಅಂದಿನ ಪೊಲೀಸ್ ಉಪಾಧೀಕ್ಷರಾಗಿದ್ದ ರಾಹುಲ್ ಕುಮಾರ್ ಪ್ರಕರಣದ ಭಾಗಶ: ತನಿಖೆ ಪೂರೈಸಿದ್ದರು. ಬಳಿಕ ಪ್ರಕರಣದ ಮುಂದುವರಿದ ತನಿಖೆಯನ್ನು ಉಪಾಧೀಕ್ಷಕ ಭಾಸ್ಕರ ರೈ ಎನ್.ಜಿ. ಅವರು ಒಟ್ಟು 51 ಸಾಕ್ಷಿದಾರರನ್ನು ವಿಚಾರಣೆ ಮಾಡಿ ದೋಷಾರೋಪನಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ನ್ಯಾಯಧೀಶರಾದ ಪ್ರೀತಿ ಕೆ.ಪಿ. ಅವರು ಆರೋಪಿ ರಾಜು ಕಲ್ಲವಡ್ಡರ್ ತಪ್ಪಿತಸ್ಥನೆಂದು ಜ.18 ರಂದು ತೀರ್ಪು ನೀಡಿದ್ದು, ಜ.25ರಂದು ಆರೋಪಿಗೆ ಭಾ.ದಂ.ಸಂ. ಕಲಂ 392 ರಂತೆ 10 ವರ್ಷಗಳ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ, ಭಾ.ದಂ.ಸಂ ಕಲಂ 302ರಂತೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ, ದಂಡ ಪಾವತಿಸಲು ವಿಫಲರಾದರೆ 3 ತಿಂಗಳ ಕಠಿಣ ಸಜೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಈ ಎರಡೂ ಸಜೆಯನ್ನು ಒಂದರ ಹಿಂದೆ ಇನ್ನೊಂದರಂತೆ ಅನುಭವಿಸಲು ಆದೇಶಿಸಲಾಗಿದೆ. 10 ವರ್ಷಗಳ ಕಠಿಣ ಸಜೆಯಿಂದ ಆರೋಪಿಯು ದಸ್ತಗಿರಿಯಾದ ದಿನದಿಂದ ಈವರೆಗೆ ನ್ಯಾಯಾಂಗ ಬಂಧನದಲ್ಲಿರುವ ಅವಧಿಯನ್ನು ಕಡಿತಗೊಳಿಸಿ ಉಳಿದ ಅವಧಿಗೆ ಕಠಿಣ ಸಜೆಯನ್ನು ಅನುಭವಿಸಲು ಆದೇಶಿಸಲಾಗಿದೆ.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶೇಖರ ಶೆಟ್ಟಿ ಮತ್ತು ಜ್ಯೋತಿ ಪ್ರಮೋದ್ ನಾಯಕ್ ವಾದಿಸಿದ್ದರು.

ಈ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪಿಯಾದ ರಾಜು ಕಲ್ಲವಡ್ಡರ್ ವಿರುದ್ಧ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗದಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣದ ವಿಚಾರಣೆ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರ ವಶದಿಂದ ತಪ್ಪಿಸಿಕೊಂಡ ಬಗ್ಗೆಯೂ ಅಂಕೋಲಾದಲ್ಲಿ ಪ್ರಕರಣ ದಾಖಲಾಗಿ ಈ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದನು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X