Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಮರ ಬದುಕು ಇತರರಿಗೆ...

ಮುಸ್ಲಿಮರ ಬದುಕು ಇತರರಿಗೆ ಸ್ಫೂರ್ತಿಯಾಗಬೇಕು: ಮೌಲಾನ ಸೈಯದ್ ಬಿಲಾಲ್ ಅಬ್ದುಲ್ ಹೈ ಹಸನಿ ನದ್ವಿ

ಮುಸ್ಲಿಂ ಚಿಂತಕರ ಸಮ್ಮಿಲನ-2024

ವಾರ್ತಾಭಾರತಿವಾರ್ತಾಭಾರತಿ27 Sept 2024 10:53 PM IST
share
ಮುಸ್ಲಿಮರ ಬದುಕು ಇತರರಿಗೆ ಸ್ಫೂರ್ತಿಯಾಗಬೇಕು: ಮೌಲಾನ ಸೈಯದ್ ಬಿಲಾಲ್ ಅಬ್ದುಲ್ ಹೈ ಹಸನಿ ನದ್ವಿ

ಮಂಗಳೂರು, ಸೆ.27: ಪ್ರವಾದಿ ಮುಹಮ್ಮದ್ (ಸ) ಅವರ ಬೋಧನೆಯಂತೆ ಮುಸ್ಲಿಮರು ಬದುಕು ಸಾಗಿಸಿದರೆ ಯಾವ ಸಮಸ್ಯೆಯೂ ಆಗುವುದಿಲ್ಲ. ಆದರೆ ಮುಸ್ಲಿಮರ ಬದುಕಿನ ಶೈಲಿ ಪ್ರವಾದಿಯ ಬೋಧನೆಯಂತಿಲ್ಲ. ಮುಸ್ಲಿಮರು ಯಾರು, ಏನು ಎಂಬುದನ್ನು ಜಗತ್ತು ತಿಳಿಯಬೇಕಿದ್ದರೆ ಇಸ್ಲಾಮಿನ ಪರಿಧಿಯೊಳಗೆ ಮುಸ್ಲಿಮರು ಬದುಕು ಸಾಗಿಸಬೇಕು. ಮುಸ್ಲಿಮರ ಬದುಕಿನ ಶೈಲಿಯು ಇತರರಿಗೆ ಸ್ಫೂರ್ತಿಯಾಗಬೇಕು ಎಂದು ಆಲ್ ಇಂಡಿಯಾ ಪಯಾಮ್ ಇ- ಇನ್ಸಾನಿಯತ್ ಫೋರಂನ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನ ಕಾರ್ಯದರ್ಶಿ, ಲಕ್ನೋದ ನದ್ವತುಲ್ ಉಲಮಾದ ಡೈರೆಕ್ಟರ್ ಮೌಲಾನ ಸೈಯದ್ ಬಿಲಾಲ್ ಅಬ್ದುಲ್ ಹೈ ಹಸನಿ ನದ್ವಿ ಹೇಳಿದರು.


ಮಂಗಳೂರಿನ ಇಖ್ರಾ ಅರಬಿಕ್ ಸ್ಕೂಲ್ ಮತ್ತು ಆಲ್ ಇಂಡಿಯಾ ಪಯಾಮ್ ಇ- ಇನ್ಸಾನಿಯತ್ ಫೋರಂ ನಗರದ ಅತ್ತಾವರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ಜಂಟಿಯಾಗಿ ಆಯೋಜಿಸಿದ ʼಮುಸ್ಲಿಂ ಚಿಂತಕರ ಸಮ್ಮಿಲನʼದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದ್ (ಸ) ಅವರ ಬೋಧನೆಗಳನ್ನು ಜಗತ್ತಿಗೆ ಪಸರಿಸಲು ಮುಸ್ಲಿಮರು ಇನ್ನಷ್ಟು ಶ್ರಮಿಸಬೇಕಿದೆ. ಭಾರತದಲ್ಲಿ ಮಾಧ್ಯಮಗಳು ಹೆಚ್ಚಾಗಿ ಮುಸ್ಲಿಮರನ್ನೇ ಗುರಿಯಾಗಿಸಿಕೊಂಡಿವೆ. ಮುಸ್ಲಿಮರ ವಿರುದ್ಧದ ಸನ್ನಿವೇಶವನ್ನು ಸದಾ ಸೃಷ್ಟಿಸುತ್ತಿವೆ. ಅದಕ್ಕೆ ಕೆಲವೊಮ್ಮೆ ಮುಸ್ಲಿಮರೇ ಆಹಾರ ಒದಗಿಸುತ್ತಿರುವ ಘಟನೆಯೂ ನಡೆಯುತ್ತಿದೆ. ಈ ಬಗ್ಗೆ ಆಳವಾಗಿ ಚಿಂತನೆ ಮಾಡಬೇಕಿದೆ. ಮುಸ್ಲಿಮರು ತಮ್ಮ ಕರ್ತವ್ಯ, ಜವಾಬ್ದಾರಿಯನ್ನು ಪರಿಣಾಮ ಕಾರಿಯಾಗಿ ನಿಭಾಯಿಸಬೇಕು ಎಂದು ಮೌಲಾನ ಸೈಯದ್ ಬಿಲಾಲ್ ಅಬ್ದುಲ್ ಹೈ ಹಸನಿ ನದ್ವಿ ಕರೆ ನೀಡಿದರು.


ಇಸ್ಲಾಂ ಮತ್ತು ಪ್ರವಾದಿಯ ಚಿಂತನೆಯನ್ನು ಹರಡುವಲ್ಲಿ ಮದ್ರಸಗಳ ಪಾತ್ರ ಅಪಾರವಾಗಿದೆ. ಈ ನಿಟ್ಟಿನಲ್ಲಿ ಮುಸ್ಲಿಂ ಉಲಮಾ- ಉಮರಾಗಳು ಕಾರ್ಯಪ್ರವೃತ್ತರಾಗಬೇಕು. ಮುಸ್ಲಿಮರು ತಮ್ಮ ವ್ಯಕ್ತಿತ್ವವನ್ನು ಇಸ್ಲಾಮಿನ ತಳಹದಿಯ ಮೇಲೆ ರೂಪಿಸಬೇಕು. ಎಲ್ಲರಿಗೂ ಆದರ್ಶವಾಗುವಂತಹ ಗುಣಸ್ವಭಾವ ಮುಸ್ಲಿಮರು ಬೆಳೆಸಿಕೊಳ್ಳಬೇಕು. ಮಾನವೀಯತೆ ಮತ್ತು ಸಹಬಾಳ್ವೆಯ ಬದುಕು ಮುಸ್ಲಿಮರದ್ದಾಗಬೇಕು ಎಂದು ಮೌಲಾನ ಸೈಯದ್ ಬಿಲಾಲ್ ಅಬ್ದುಲ್ ಹೈ ಹಸನಿ ನದ್ವಿ ಹೇಳಿದರು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರಮುಖರಾದ ಮೌಲಾನ ಅಬ್ದುಲ್ ಸುಬಾನ್ ನದ್ವಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿದ್ದಾರೆ. ಇಂತಹ ಸಂದಿಗ್ಧ ಮತ್ತು ಸವಾಲಿನ ಸಂದರ್ಭ ಜನರು ಭರವಸೆಯನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.


ಹತಾಶೆಯು ಮುಸ್ಲಿಮರಿಗೆ ಭೂಷಣವಲ್ಲ. ಉತ್ತಮ ಕಾರ್ಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಸಮುದಾಯ ಮತ್ತು ಸಮಾಜದಲ್ಲಿ ಪ್ರಗತಿ ಕಾಣಲು ಸಾಧ್ಯವಿದೆ ಎಂದು ಮೌಲಾನ ಅಬ್ದುಲ್ ಸುಬಾನ್ ನದ್ವಿ ಅಭಿಪ್ರಾಯಪಟ್ಟರು.

ಮಂಗಳೂರಿನ ಇಖ್ರಾ ಅರಬಿಕ್ ಸ್ಕೂಲ್‌ನ ಪ್ರಾಂಶುಪಾಲ ಮೌಲಾನ ಸಾಲಿಮ್ ಅಲಿ ನದ್ವಿ ಅಧ್ಯಕ್ಷತೆ ವಹಿಸಿದ್ದರು. ಆಲ್ ಇಂಡಿಯಾ ಪಯಾಮ್ ಇ- ಇನ್ಸಾನಿಯತ್ ಫೋರಂನ ಮೌಲಾನ ಜುನೈದ್ ಫಾರೂಕಿ ಮಾತನಾಡಿದರು. ವೇದಿಕೆಯಲ್ಲಿ ಮಂಗಳೂರು ಯುನಿಟಿ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಪಿ. ಹಬೀಬ್ ರಹ್ಮಾನ್, ಬಬ್ಬುಕಟ್ಟೆಯ ಅಲ್-ಫುರ್ಖಾನ್‌ನ ಪ್ರಾಂಶುಪಾಲ ಮೌಲಾನಾ ಯಹ್ಯಾ ತಂಙಳ್ ಪಾಲ್ಗೊಂಡಿದ್ದರು.


ಮುಹ್ಸಿನ್ ಕೆಂಪಿ ಕಿರಾಅತ್ ಪಠಿಸಿದರು. ಅಲಿ ಅಝಾನ್ ನಾಥ್ ಹಾಡಿದರು. ಮೌಲಾನಾ ಫರ್ಹಾನ್ ನದ್ವಿ ಅವರು ಇಖ್ರಾ ಅರಬಿಕ್ ಸ್ಕೂಲ್ ಮತ್ತು ಆಲ್ ಇಂಡಿಯಾ ಪಯಾಮ್ ಇ- ಇನ್ಸಾನಿಯತ್ ಫೋರಂ ಸಂಘಟನೆಯ ಪರಿಚಯ ಮಾಡಿದರು. ಮುಆದ್ ಟಿ.ಡಿ. ಕಾರ್ಯಕ್ರಮ ನಿರೂಪಿಸಿದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X