Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಅಪಘಾತದ ಸಂದರ್ಭ ಜೀವ ಉಳಿಸಲು ನನ್ನ...

‘ಅಪಘಾತದ ಸಂದರ್ಭ ಜೀವ ಉಳಿಸಲು ನನ್ನ ಪ್ರಥಮ ಆದ್ಯತೆ’

ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿಯಾಗಿ ಚಾರ್ಮಾಡಿ ಹಸನಬ್ಬ ಮಾತು

ವಾರ್ತಾಭಾರತಿವಾರ್ತಾಭಾರತಿ29 Nov 2023 5:45 PM IST
share
‘ಅಪಘಾತದ ಸಂದರ್ಭ ಜೀವ ಉಳಿಸಲು ನನ್ನ ಪ್ರಥಮ ಆದ್ಯತೆ’

ಮಂಗಳೂರು: ಅಪಘಾತ ಆದಾಗ ಗಾಯಾಳುವಿನ ಜೀವ ಉಳಿಸಲು ನನ್ನ ಪ್ರಥಮ ಆದ್ಯತೆ. ಅದು ನನ್ನ ಮನಸ್ಸಿಗೆ ಸಾಮಾಧಾನ ನೀಡುವ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿ ನನ್ನಿಂದ ಆದ ಕರ್ತವ್ಯ ನಿರ್ವಹಿಸಿದ್ದೇನೆ. ನನ್ನ ಈ ಕಾರ್ಯವನ್ನು ನೆನಪಿಟ್ಟು ಮತ್ತೆ ಬಂದು ನನಗೆ ಕೃತಜ್ಞತೆ ಹೇಳುವಾಗ ನನ್ನ ಕಾರ್ಯ ಸಾರ್ಥಕ ಅನ್ನಿಸಿದೆ. ಅದು ನನಗೆ ದೊರಕಿದ ಬಹುದೊಡ್ಡ ಸನ್ಮಾನ.

ಇದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಅವರ ಹೃದಯಾಂತರಾಳದ ಮಾತು.

ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಬುಧವಾರ ಆಯೋಜಿಸಲಾದ ‘ಪ್ರೆಸ್‌ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ತಮ್ಮ ಅನಿಸಿಕೆ ಹಂಚಿಕೊಂಡರು.

ಮನುಷ್ಯನಿಗೆ ಬೇಕಿರುವುದು ಮಾನವೀಯತೆ. ಎಲ್ಲೇ ಅಪಘಾತ ನಡೆಯಲಿ, ಕೂಡಲೇ ಧಾವಿಸಿ ಗಾಯಾಳುವನ್ನು ಉಪಚರಿಸಿ ಜೀವ ಉಳಿಸುವ ಮಾನವ ಧರ್ಮ ಎಲ್ಲರಲ್ಲೂ ಮೂಡಿಬರಬೇಕು. ಅಪಘಾತ ಸಂಭವಿಸಿದ ಸಂದರ್ಭ ಗಾಯಾಳುಗಳನ್ನು ಉಪಚರಿಸಿ ಪ್ರಾಣ ಉಳಿಸುವ ಕಾರ್ಯ ಮಾಡಬೇಕೇ ಹೊರತು ಫೋಟೋ ತೆಗೆಯುವುದು, ಜಗಳ ಮಾಡುತ್ತಾ ಕೂರುವುದು ಸರಿಯಲ್ಲ ಎಂದವರು ಅಭಿಪ್ರಾಯಿಸಿದರು.

ವಾಹನ ಅಪಘಾತಗಳು ನಡೆದ ಸಂದರ್ಭ ಅನಗತ್ಯ ತಕರಾರು ಮಾಡುತ್ತಾ ಕೂರಬಾರದು. ಸುಲಭದಲ್ಲಿ ಇತ್ಯರ್ಥಪಡಿಸಿ ಪರಿಹಾರ ಪಾವತಿಸಿ ನೆಮ್ಮದಿಯಾಗಿ ತೆರಳಿ. ಕೇಸು, ಪೊಲೀಸ್ ಠಾಣೆ ಮೆಟ್ಟಿಲು ಎಂದರೆ ವ್ಯರ್ಥ ಹಣ ಖರ್ಚು, ಕೇಸು ಇತ್ಯರ್ಥವಾಗುವಲ್ಲಿವರೆಗೆ ಕಾಯಬೇಕಾಗುತ್ತದೆ. ವಾಹನ ಅಪಘಾತವಾದ ಸಂದರ್ಭ ಎರಡೂ ಕಡೆಯವರಿಗೆ ನೈತಿಕ ಬೆಂಬಲ ನೀಡುವುದು ಮುಖ್ಯ. ಅದು ಬಿಟ್ಟು ದೂಷಿಸುತ್ತಾ, ಕೈಗೆ ಸಿಕ್ಕಿದ ವಸ್ತುಗಳನ್ನು ಕಬಳಿಸುವ ಕಾರ್ಯ ಯಾವತ್ತೂ ಮಾಡಬಾರದು ಎಂದು ಅವರು ತಿಳಿ ಹೇಳಿದರು.

ವಿ ಫೋರ್ ನ್ಯೂಸ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಕುಂದರ್ ಗೌರವ ಅತಿಥಿ ಕಾರ್ಯಕ್ರಮ ಉದ್ಘಾಟಿಸಿ, ಹಸನಬ್ಬರಂತಹ ಸಾಧಕರನ್ನು ಗುರುತಿಸಿ ಸಂವಾದ ನಡೆಸುವುದು ಶ್ಲಾಘನೀಯ. ಇದು ಹಸನಬ್ಬರಿಗೆ ಮಾತ್ರವಲ್ಲ ಪ್ರೆಸ್‌ಕ್ಲಬ್‌ಗೂ ಗೌರವ ತರುತ್ತದೆ ಎಂದರು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿ, ಹಸನಬ್ಬರು ಮಾನವೀಯ ಸೇವೆಯ ಬಗ್ಗೆ ಪ್ರಸ್ತಾಪಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.

ಪತ್ರಕರ್ತ ಬಿ.ಎನ್.ಪುಷ್ಪರಾಜ್ ಸ್ವಾಗತಿಸಿ ನಿರೂಪಿಸಿದರು. ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಛಾಯಾಗ್ರಾಹಕ ಸತೀಶ್ ಇರಾ ಕಾರ್ಯಕ್ರಮ ಸಂಯೋಜಿಸಿದರು.

ಚಾರ್ಮಾಡಿಯಲ್ಲಿ ಶೀಘ್ರವೇ ಆ್ಯಂಬುಲೆನ್ಸ್ ಸೇವೆ

"ಚಾರ್ಮಾಡಿ ಘಾಟ್‌ನಲ್ಲಿ ಈಗ ರಸ್ತೆ ಅಗಲೀಕರಣ, ಅಭಿವೃದ್ಧಿಯಿಂದಾಗಿ ಅಪಘಾತಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೂ ತುರ್ತು ಸಂದರ್ಭಗಳಲ್ಲಿ ಮುಂಜಾಗ್ರತೆಗಾಗಿ ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದ್ದೇನೆ. ಇದು ಚಾರ್ಮಾಡಿಯ ಸುತ್ತಲಿನ 50 ಕಿ.ಮೀ. ವ್ಯಾಪ್ತಿಯೊಳಗೆ ಉಚಿತ ಸೇವೆ ನೀಡಲಿದೆ. ರಾಜ್ಯೋತ್ಸವ ಪುರಸ್ಕಾರದಲ್ಲಿ ಸರಕಾರ 5 ಲಕ್ಷ ರೂ. ಗೌರವ ಮೊತ್ತ ನೀಡಿದೆ. ಆ್ಯಂಬುಲೆನ್ಸ್‌ಗೆ 8 ಲಕ್ಷ ರೂ. ಬೇಕು. ಉಳಿದ ಹಣವನ್ನು ನಾವೇ ಕುಟುಂಬಸ್ಥರು ಟ್ರಸ್ಟ್ ಮಾಡಿಕೊಂಡು ಸಾಲದ ಮೂಲಕ ಭರಿಸುತ್ತೇವೆ. ನನ್ನ ಮೂವರು ಪುತ್ರರು ಇದರ ಜವಾಬ್ದಾರಿ ನಿರ್ವಹಿಸುತ್ತಾರೆ. ಬಳಿಕ ಕಂತು ಪಾವತಿಸಿ ಸಾಲ ತೀರಿಸುತ್ತೇವೆ. ಆ್ಯಂಬುಲೆನ್ಸ್ ಕೆಲವೇ ದಿನಗಳಲ್ಲಿ ಬರಲಿದೆ. ಪ್ರಸ್ತುತ ಟ್ರಸ್ಟ್‌ನ್ನು ನೋಂದಣಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ".

- ಹಸನಬ್ಬ ಚಾರ್ಮಾಡಿ, ಸಮಾಜ ಸೇವಕ






share
ವಾರ್ತಾಭಾರತಿ
ವಾರ್ತಾಭಾರತಿ
Next Story
X