Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತೀಯ ಮಹಿಳಾ ಒಕ್ಕೂಟ (ಎನ್‌ ಎಫ್‌ ಐ...

ಭಾರತೀಯ ಮಹಿಳಾ ಒಕ್ಕೂಟ (ಎನ್‌ ಎಫ್‌ ಐ ಡಬ್ಲ್ಯೂ) ಜಿಲ್ಲಾ ಸಮಾವೇಶ

ಸ್ತ್ರೀಯನ್ನು ಪೂಜ್ಯನೀಯ ಎಂದು ಬಿಂಬಿಸಿ ಸಮಾನತೆಯಿಂದ ವಂಚಿಸಿಲಾಗುತ್ತಿದೆ- ಡಾ.ವೀಣಾ ತೋಳ್ಪಾಡಿ

ವಾರ್ತಾಭಾರತಿವಾರ್ತಾಭಾರತಿ21 Nov 2023 3:49 PM IST
share
ಭಾರತೀಯ ಮಹಿಳಾ ಒಕ್ಕೂಟ (ಎನ್‌ ಎಫ್‌ ಐ ಡಬ್ಲ್ಯೂ) ಜಿಲ್ಲಾ ಸಮಾವೇಶ

ಬಂಟ್ವಾಳ : ಇತ್ತೀಚಿಗಿನ ಎರಡು ದಶಕಗಳಿಂದೀಚೆಗೆ ಸ್ತ್ರೀಯರು ಉತ್ತಮ ಶಿಕ್ಷಣ ಪಡೆದು ಎಷ್ಟೇಷ್ಟೋ ದೊಡ್ಡ ಹುದ್ದೆಗಳನ್ನು ಪಡೆದಿದ್ದರೂ ಅವರಿಗೆ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರಲು ಬಿಡದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚಿಂತಕಿ ಡಾ. ವೀಣಾ ತೋಳ್ಪಾಡಿ ಅಭಿಪ್ರಾಯ ಪಟ್ಟರು.

ಅವರು ಬಿಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್‌ ನಲ್ಲಿ ನಡೆದ ಭಾರತೀಯ ಮಹಿಳಾ ಒಕ್ಕೂಟ(ಎನ್‌ ಎಫ್‌ ಐ ಡಬ್ಲ್ಯೂ) ಇದರ ಜಿಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಮ್ಮ ಸಮಾಜ ಮಹಿಳೆಯರನ್ನು ಅಬಲೆ ಎಂದು ಪರಿಗಣಿಸಿ ಅವಳನ್ನು ಮುಂದೆ ಬಾರದಂತೆ ತಡೆಯುತ್ತದೆ. ಮಹಿಳೆ ಕೇವಲ ಅಡುಗೆ ಮನೆಗೆ ಸೀಮಿತ ಎಂಬಂತೆ ಪರಿಗಣಿಸಲಾಗುತ್ತಿದೆ. ಇಂತಹ ತಾರತಮ್ಯ ದೂರವಾಗದೇ ಸಮಾಜದ ಸುಧಾರಣೆ ಅಸಾಧ್ಯ. ಪುರಾಣದಲ್ಲಿ ಹೇಳಿರುವಂತೆ ಸ್ತ್ರೀ ಯನ್ನು ಬರೇ ದೇವಿ ಎಂದು ಪೂಜಿಸಿದರೆ ಸಾಲದು ಅವಳಿಗೂ ಸಮಾಜದಲ್ಲಿ ಸಮಾನತೆ ಹಕ್ಕು ನೀಡಬೇಕಾಗಿದೆ. ಆಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ. ಎಂದು ಅವರು ದೇಶದ ಸಂವಿಂಧಾನ ಸರ್ವ ಜನರಿಗೂ ಯಾವುದೇ ತಾರತಮ್ಯವಿಲ್ಲದೆ ಸ್ವಾತಂತ್ರ್ಯ , ಸಮಾನತೆ , ಸ್ವಾಭಿಮಾನ, ಘನತೆಯ ಬದುಕಿನ ಹಕ್ಕುಗಳನ್ನು ಒದಗಿಸಿಕೊಟ್ಟಿದೆ. ಆದರೆ ಇಂದು ಸಂವಿಂಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಈ ನಿಟ್ಟಿನಲ್ಲಿ ಮಹಿಳೆಯು ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೂರಕವಾಗಿ ಸಂವಿಂಧಾನದ ಆಶಯಗಳನ್ನು ಉಳಿಸಿಕೊಳ್ಳುಂಡು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ. ಭೌತಿಕ ಶಿಕ್ಷಣಕ್ಕಿಂತಲೂ ಅರಿವಿನ ಶಿಕ್ಷಣದ ಕಡೆಗೆ ತೊಡಗಿಸಿಕೊಳ್ಳಬೇಕಿದೆ ಎಂದರು.

ಯುವ ನ್ಯಾಯವಾದಿ ಸುರೇಶ ಕುಮಾರ್‌ ನಾವೂರು ಸಮಾನ ವೇತನ ಕಾಯ್ದೆ, ಲಿಂಗ ತಾರತಮ್ಯ ಕಾಯ್ದೆ, ಮೊದಲಾದ ಹಲವು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್‌ ರವರು ಭಾರತೀಯ ಮಹಿಳಾ ಒಕ್ಕೂಟದ ಇತಿಹಾಸ ದ ಬಗ್ಗೆ ಮಾತನಾಡಿ 1954 ರಲ್ಲಿ ಜನ್ಮ ತಾಳಿದ ಭಾರತೀಯ ಮಹಿಳಾ ಒಕ್ಕೂಟ ಎಂಬ ಐತಿಹಾಸಿಕ ಸಂಘಟನೆಯು ಶಾಂತಿ, ಸೌಹಾರ್ಧತೆ, ಸಹಬಾಳ್ವೆಗಾಗಿ, ಸಂವಿಂಧಾನದ ರಕ್ಷಣೆಗಾಗಿ, ಮಹಿಳೆಯರ ಸಮಾನ , ಸ್ವಾಭಿಮಾನಿ, ಘನತೆಯ ಬದುಕಿನ ಹಕ್ಕುಗಳ ರಕ್ಷಣೆಗಾಗಿ ಪಣತೊಟ್ಟು ಕೆಲಸಮಾಡುತ್ತಿದೆ. ಸಂಸತ್ತು ಶಾಸನ ಸಭೆಗಳಲ್ಲಿ ಮಹಿಳೆಯತರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸರ್ಕಾರ ಸಂಸತ್ತಿನಲ್ಲಿ ಮಂಡಿಸಬೇಕು ಎಂದು ಎನ್‌ ಎಫ್‌ ಐ ಡಬ್ಲ್ಯೂ ಸುಪ್ರೀಂ ಕೋರ್ಟಿನಲ್ಲಿ ರಿಟ್‌ ಅರ್ಜಿ ಹಾಗಿದ ನಂತರ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಛೀಮಾರಿ ಹಾಕಿ ಬಳಿಕವಷ್ಟೇ ಈ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್‌ ಮಾಡಲಾಗಿದೆ. ಆದರೆ ಅದನ್ನು ಸದ್ಯ ಜಾರಿಗೊಳಿಸದೇ 2029 ರ ವರೆಗೆ ಕಾಯಬೇಕೆಂದು ಕೆಲವು ಷರತ್ತುಗಳನ್ನು ಕೇಂದ್ರ ಸರಕಾರ ಹಾಕಿ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ ಎಂದರು.

ಸಂಘಟನೆಯ ಜಿಲ್ಲಾನಾಯಕಿ ಸುಲೋಚನಾ ಕವತ್ತಾರು ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು

ಎಐಟಿಯುಸಿ ರಾಜ್ಯ ಮುಂದಾಳು ಬಿ.ಶೇಖರ್‌ ಮಾತನಾಡಿದರು.

ಸಂಘಟನೆಯ ಸಹ ಕಾರ್ಯದರ್ಶೀ ಶಮಿತಾ ಸ್ವಾಗತಿಸಿ, ಮಮತಾ ವಂದಿಸಿದರು. ಪ್ರಧಾನ ಕಾರ್ಯದರ್ಶೀ ಕೇಶವತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X