Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಕ್ರೀಡಾ...

ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ29 Aug 2023 10:44 PM IST
share
ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಮೂಡುಬಿದಿರೆ: ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತಾಗುತ್ತದೆ. ಹಿರಿಯ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದೇ ಇರುವುದರಿಂದ ಅನೇಕ ಗೊಂದಲಗಳು ಸೃಷ್ಟಿಯಾಗುತ್ತಿದ್ದು, ಸಮಸ್ಯೆಗಳು ಬಗೆಹರಿಯದೆ ಉಳಿಯುತ್ತದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು.

ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ದ.ಕ ಜಿಲ್ಲಾ ಶಾಖೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳವಾರ ಸ್ಕೌಟ್-ಗೈಡ್ಸ್ ಕನ್ನಡ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ, ರಾಜ್ಯಮಟ್ಟದ ಶೈಕ್ಷಣಿ ಸಮಾ ವೇಶದಲ್ಲಿ ದೈಹಿಕ ಶಿಕ್ಷಣ ಬೀಷ್ಮ ಮತ್ತು ಕರುನಾಡ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

ಮುಂದಿನ ದಿನಗಳಲ್ಲಿ ಶಿಕ್ಷಕರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಣ ಸಚಿವರಿಗೆ ಸೂಚಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಕರ ಹಲವು ಬೇಡಿಕೆಗಳು ಸರ್ಕಾರದ ಮುಂದಿದೆ. ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಹಂತ ಹಂತವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಶಿಕ್ಷಕರ ಹಲವು ಬೇಡಿಕೆಗಳು ಸರ್ಕಾರದ ಮುಂದಿದೆ. ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಹಂತ ಹಂತವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆಯಿತ್ತರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಡಹಂತದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕಡಿಮೆ ಮಕ್ಕಳಿರುವ ಶಾಲೆಯಿಂದ ಕ್ರೀಡಾ ಶಿಕ್ಷಕರನ್ನು ವರ್ಗಾಯಿಸುವ ಕ್ರಮ ಸರಿಯಲ್ಲ ಎಂದರು.

ಬಸವರಾಜ ಹೊರಟ್ಟಿ ಅವರಿಗೆ ಕರುನಾಡ ದೈಹಿಕ ಶಿಕ್ಷಣ ಭೀಷ್ಮ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರಿಗೆ ಕರುನಾಡ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿದ್ದು, ಮೋಹನ ಆಳ್ವರ ಪರವಾಗಿ ಪ್ರಾಂಶುಪಾಲ ಡಾ.ಕುರಿಯನ್ ಪ್ರಶಸ್ತಿ ಸ್ವೀಕರಿಸಿದರು.

ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜ ಗೌಡ, ಮಾಜಿ ಶಾಸಕರಾದ ಪುಟ್ಟಣ್ಣ, ಅರುಣ್ ಚಹಾಪುರ, ಕೆಎಂಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯಕ್, ರಾಷ್ಟ್ರೀಯ ಕ್ರೀಡಾಪಟು ಬಾಲಂದರ್ ಸಿಂಗ್, ಸಿಇಟಿ ಮಂಗಳೂರು ವಿಭಾಗದ ಪ್ರಾಂಶುಪಾಲ ಸಿಪ್ರಿಯನ್ ಮೊಂತೆರೊ, ಡಯಾಟ್ ಪ್ರಾಂಶುಪಾಲೆ ರಾಜಲಕ್ಷ್ಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸಿ.ಕೆ ರಘು ಮತ್ತಿತರರು ಉಪಸ್ಥಿತರಿದ್ದರು.

ಸಂಘಟನೆಯ ರಾಜ್ಯ ಅಧ್ಯಕ್ಷ ಚೌಡಪ್ಪ ದೈಹಿಕ ಶಿಕ್ಷಕರ ಬೇಡಿಕೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು. ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದ 5 ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ ದೈಹಿಕ ಶಿಕ್ಷಣದ ಮಹತ್ವ ಮತ್ತು ದೈಹಿಕ ಶಿಕ್ಷಕರ ಜವಬ್ದಾರಿ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣದಲ್ಲಿ ಸಾಧನೆ ಮಾಡಿದ ಶಿಕ್ಷಕರು ಹಾಗೂ ನಿವೃತ್ತ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿಪಾಯಸ್ ಸ್ವಾಗತಿಸಿದರು. ತ್ಯಾಗಂ ಹರೇಕಳ ವಂದಿಸಿದರು ನವೀನ್ ಅಂಬೂರಿ ಮತ್ತು ಅಜಿತ್ ಕೊಕ್ರಾಡಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X