Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವೋದಯ, ಕರ್ನಾಟಕ ಪಬ್ಲಿಕ್ ಸ್ಕೂಲ್...

ನವೋದಯ, ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಚ್ಚಳಕ್ಕೆ ಕ್ರಮ: ಶಿಕ್ಷಣ ಸಚಿವ ಮಧು ಬಂಗಾರಪ್ಪ

"ಸರಕಾರ ಕುಮಾರಸ್ವಾಮಿ ಕೈಯ್ಯಲ್ಲಿರುವುದಲ್ಲ"

ವಾರ್ತಾಭಾರತಿವಾರ್ತಾಭಾರತಿ22 July 2023 6:08 PM IST
share
ನವೋದಯ, ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಚ್ಚಳಕ್ಕೆ ಕ್ರಮ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಂಗಳೂರು, ಜು. 22: ಸರಕಾರಿ ಶಾಲೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ನವೋದಯ ಶಾಲೆಗಳ ಹೆಚ್ಚಳಕ್ಕೆ ಮುಂದಿನ ವರ್ಷದಿಂದ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಹಾಗೂ ನವೋದಯ ಶಾಲೆಗಳನ್ನು ಹೆಚ್ಚಿಸಲು ದೊಡ್ಡ ಮಟ್ಟದ ಅನುದಾನ ಬೇಕಾಗಿದೆ. ಹಾಗಾಗಿ ಮುಂದಿನ ವರ್ಷದಿಂದ ಸೂಕ್ತ ಗುರಿಯೊಂದಿಗೆ ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ರಾಜ್ಯಾದ್ಯಂತ ಸರಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸಲು ದಾಖಲೆ ರೀತಿಯಲ್ಲಿ 25000 ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್ ಅಲ್ಪಾವಧಿಯಲ್ಲಿಯೇ ಪ್ರಕ್ರಿಯೆ ನಡೆದಿದೆ. ಜು. 31ರೊಳಗೆ ಈ ಪ್ರಕ್ರಿಯೆಗಳು ಅಂತ್ಯಗೊಳ್ಳಲಿವೆ. ವರ್ಗಾವಣೆಯಿಂದ ಕೆಲವೊಂದು ಕಡೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ಎದುರಾಗಿದೆ. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಿರುವ ನಿಟ್ಟಿನಲ್ಲಿ ವರ್ಗಾಯಿತ ಶಿಕ್ಷಕರು ನಿಗದಿತ ಶಾಲೆಗಳಿಗೆ ತಲುಪುವವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಶಿಕ್ಷಕರ ನೇಮಕಕ್ಕೆ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಬಿಜೆಪಿಯವರಿಗೆ ಕಾಮನ್‌ಸೆನ್ಸ್ ಇಲ್ಲ

ಈ ಬಾರಿಯ ರಾಜ್ಯದ ವಿಧಾನಸಭೆಯ ಚುನಾವಣೆ ಸ್ವಷ್ಟವಾದ ಸಂದೇಶ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ ಗ್ಯಾರಂಟಿಗಳ ವಿಚಾರದಲ್ಲಿ ವಿರೋಧ ಪಕ್ಷ ಮಾತನಾಡುವುದನ್ನು ನೋಡಿದಾಗ ಅವರಿಗೆ ಕಾಮನ್‌ಸೆನ್ಸ್ ಇಲ್ಲ ಎನ್ನುವುದು ಸ್ವಷ್ಟವಾಗುತ್ತದೆ. ಪ್ರತಿಯೊಂದಕ್ಕೂ ಕಾಲ ಕೊಡಬೇಕಾಗುತ್ತದೆ. ಸರಕಾರ ಬಂದು ಬರೀ 60 ದಿನಗಳು ಆಗಿದೆ. ಅದರೊಳಗೆ ನಮ್ಮ ಬಹುತೇಕ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಹಂತಹಂತವಾಗಿ ಮಾಡಬೇಕಾಗುತ್ತದೆ ಎಂದರು.

ವಿರೋಧ ಪಕ್ಷದವರ ಹೊಲಸು ಮನಸ್ಥಿತಿ ಉಳ್ಳವರು. ನಮ್ಮವರು ಬಡವರ, ಮಹಿಳೆಯರ, ಯುವಜನತೆಯ ಮೇಲೆ ಕಾಳಜಿ ಇಟ್ಟುಕೊಂಡು ಇಂತಹ ಯೋಜನೆಗಳನ್ನು ತಂದಿದ್ದೇವೆ ಮಾತ್ರವಲ್ಲ ಅದನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.

ಬಿಜೆಪಿ ಸರಕಾರ ಜಿಎಸ್‌ಟಿ ಹಾಕುವ ಮೂಲಕ ಎಲ್ಲಕ್ಕೂ ಬೆಲೆ ಏರಿಸುವ ಕಾರ್ಯವನ್ನು ಮಾಡಿದೆ. ದೇಹದಲ್ಲಿ ಹೇಗೆ ಬ್ಲಡ್ ಅಗತ್ಯವೋ ಅದೇ ರೀತಿಯಲ್ಲಿ ಜೀವನ ನಡೆಸಲು ದುಡ್ಡು ಅಗತ್ಯವಿದೆ. ಇದೇ ಕಾರಣದಿಂದ ನಮ್ಮ ಸರಕಾರ ಬಡವರಿಗೆ ದುಡ್ಡು ಕೊಡುವ ಗೃಹಲಕ್ಷ್ಮಿಯನ್ನು ಜಾರಿಗೊಳಿಸಿದೆ. ಬಡವರಿಗೆ ದುಡ್ಡು ಸಿಕ್ಕಾಗ ಅದು ಮತ್ತೆ ಸಮಾಜಕ್ಕೆ ಸೇರುತ್ತದೆ. ಆದರೆ ಶ್ರೀಮಂತರಿಗೆ ಬಂದರೆ ಅದು ಬರೀ ಅವರಲ್ಲಿಯೇ ಉಳಿದುಬಿಡುತ್ತದೆ ಎಂದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಬಿಲ್ಲವ ನಾಯಕರೂ ಆಗಿರುವ ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿದ್ದಾರೆನ್ನಲಾದ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಆ ಬಗ್ಗೆ ಸೂಕ್ತ ಮಾಹಿತಿ ಇಲ್ಲ. ಹಾಗಿದ್ದರೂ ಅವರು ಪಕ್ಷದ ಹಿರಿಯ ನಾಯಕರು, ಅದಕ್ಕೆ ನಾನು ಪ್ರತಿಕ್ರಿಯಿಸುವುದು ಸರಿಯಲ್ಲ. ಅದು ಪಕ್ಷದ ಆಂತರಿಕ ವಿಷಯ ಕೂಡಾ ಎಂದರು.

ಸರಕಾರ ಕುಮಾರಸ್ವಾಮಿ ಕೈಯ್ಯಲ್ಲಿರುವುದಲ್ಲ

ಜೆಡಿಎಸ್ ವರಿಷ್ಟರಾದ ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ನಡೆಸುತ್ತಿರುವ ಆರೋಪಗಳ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಮಾತನಾಡಿದ ತಕ್ಷಣ ಸರಕಾರ ಏನು ಬಿದ್ದು ಹೋಗದು. ಸರಕಾರ ಅವರ ಕೈಯ್ಯಲಿಲ್ಲ. ಸರಕಾರ ಜನರ ಕೈಯಲ್ಲಿ ಇರುವುದು. ಸರಕಾರ ಈಗಾಗಲೇ ತೀರ್ಮಾನ ಮಾಡಿದೆ ಎಂದರು.

ಗೋಷ್ಟಿಯಲ್ಲಿ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಶುಭೋದಯ ಆಳ್ವ, ನೀರಜ್‌ಪಾಲ್, ಸಲೀಂ, ಸುಹಾನ್ ಆಳ್ವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X