Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಹಾರದಲ್ಲಿ ಎನ್‌ಡಿಎಗೆ ಬಹುಮತ |...

ಬಿಹಾರದಲ್ಲಿ ಎನ್‌ಡಿಎಗೆ ಬಹುಮತ | ಗೆಲುವಿನ ಅಭಿಯಾನ ಮುಂದುವರಿಕೆ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ14 Nov 2025 6:00 PM IST
share
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ | ಗೆಲುವಿನ ಅಭಿಯಾನ ಮುಂದುವರಿಕೆ: ಶೋಭಾ ಕರಂದ್ಲಾಜೆ

ಮಂಗಳೂರು, ನ.14: ಬಿಹಾರ ಅಸೆಂಬ್ಲಿ ಚುನಾವಣೆಯಲ್ಲಿ ಜನತೆ ಎನ್‌ಡಿಎಗೆ ಬೆಂಬಲಿಸಿದ್ದು, ಈ ಗೆಲುವಿನ ಅಭಿಯಾನ ಮುಂದಿನ ಚುನಾವಣೆಗಳಲ್ಲೂ ಮುಂದುವರಿಯಲಿದೆ. ಆದ,ರೆ ಇದನ್ನು ಅರಗಿಸಿಕೊಳ್ಳಲಾಗದೆ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಅವರ ತಂಡ ಮತ್ತೆ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ದೇಶದ ಜನತೆ ಯಾವತ್ತೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ರಾಜ್ಯ ಸಚಿವೆ ಶೋಭಾ ಕಲಂದ್ಲಾಜೆ ಹೇಳಿದ್ದಾರೆ.

ಮಂಗಳೂರಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬಿಹಾರ ಬಿಜೆಪಿ ವಿಜಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವಕ್ಕೆ ಅಭೂತಪೂರ್ವ ಜಯ ಲಭಿಸಿದೆ. ಅಲ್ಲಿ ತೇಜಸ್ವಿ ಯಾದವ್ ಘಟಬಂಧನ್ ಸೋಲು ಕಂಡಿದೆ. ಮತ ಕಳವು ವಿಚಾರದಲ್ಲಿ ಜನತೆಯ ಹಾದಿ ತಪ್ಪಿಸಲು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ನಡೆಸಿದ ಅಪಪ್ರಚಾರಕ್ಕೆ ಜನತೆ ಕಿವಿಕೊಡದೇ ಇರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.

ರಾಹುಲ್ ಗಾಂಧಿ ಮತ್ತಿತರು ದೇಶಾದ್ಯಂತ ವೋಟ್ ಚೋರಿ ಅಭಿಯಾನವನ್ನೇ ನಡೆಸಿದರು. ಇದಕ್ಕಾಗಿ ಚುನಾವಣಾ ಆಯೋಗ ಮತದಾರರ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿತು. ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿ ಪರಿಶೀಲನೆಯನ್ನು ಬಿಜೆಪಿ ನಡೆಸಿದೆ. ಆದರೆ ಕಾಂಗ್ರೆಸ್ ವೋಟ್ ಚೋರಿ ಅಭಿಯಾನದತ್ತ ಗಮನ ಹರಿಸಿತ್ತೇ ವಿನಃ ಮತದಾರರ ಪಟ್ಟಿಯ ಕಡೆ ತಿರುಗಿಯೂ ನೋಡಿಲ್ಲ. ವೋಟ್ ಚೋರಿ ಬಗ್ಗೆ ರಾಹುಲ್ ಗಾಂಧಿ ಅವರು ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಆರೋಪ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವ ವಿಚಾರವಲ್ಲ ಎಂದರು.

ಕರ್ನಾಟಕ ಹಾಗೂ ತೆಲಂಗಾಣಗಳಲ್ಲಿ ಕಾಂಗ್ರೆಸ್ ಅಧಿಕಾರಿ ಹಿಡಿದಿದೆ. ಆಗ ಮತ ಚೋರಿ ಬಗ್ಗೆ ಮಾತೆತ್ತದ ಕಾಂಗ್ರೆಸಿಗರು, ಅವರು ಸೋಲು ಕಂಡ ಕಡೆಗಳಲ್ಲೆಲ್ಲ ಮತ ಚೋರಿ ಎಂದು ಆರೋಪಿಸಿ ಓಡಾಡಿಕೊಂಡಿದ್ದಾರೆ ಎಂದು ಶೋಭಾ ಆರೋಪಿಸಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬಹುಮತ ಸೀಟು ಪಡೆದಿದ್ದರೂ ಅವರನ್ನು ಕೆಳಗಿಳಿಸುವಲ್ಲಿ ಕಾಂಗ್ರೆಸ್ ಪಕ್ಷದೊಳಗೇ ಪ್ರಯತ್ನಗಳು ನಡೆಯುತ್ತಿವೆ. ಅವರು ಯಾರನ್ನು ಬೇಕಾದರೂ ಸಿಎಂ ಮಾಗಲಿ, ನಮಗೆ ಅವರ ಮುಂದಿನ ಸಿಎಂ ಯಾರು ಎನ್ನುವ ಅಗತ್ಯ ಇಲ್ಲ. ರಾಜ್ಯದಲ್ಲಿ ರೈತರ, ಕಬ್ಬು ಬೆಳೆಗಾರರ ಸಮಸ್ಯೆ ದರ ಏರಿಕೆ, ಕಸಕ್ಕೂ ಭಾರಿ ಶುಲ್ಕ ಇತ್ಯಾದಿ ಆಡಳಿತ ವಿರೋಧಿ ಧೋರಣೆಯನ್ನು ನಡೆಸಲಾಗುತ್ತಿದೆ. ಇದನ್ನು ಮರೆಮಾಚಲು ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಇತ್ಯಾದಿ ಸಂಗತಿಗಳನ್ನು ಪ್ರಚಾರ ಮಾಡಲಾಗುತ್ತಿದೆ. ಜನತೆಯ ಸಮಸ್ಯೆ ಅರಿಯಲು ಸಿಎಂ ಸಹಿತ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸುತ್ತಿಲ್ಲ. ಕಾಂಗ್ರೆಸ್ ಕೇವಲ ಅಪಪ್ರಚಾರ ನಡೆಸುತ್ತಿದೆ. ಇದರ ಬದಲು ಅಧಿಕಾರಕ್ಕಾಗಿ ಪೈಪೋಟಿ ನಡೆಸದೆ, ರಾಜಕೀಯ ಬೆರೆಸದೆ ಚೆನ್ನಾಗಿ ಆಡಳಿತ ನಡೆಸಲು ರಾಜ್ಯ ಸರ್ಕಾರ ಗಮನ ನೀಡಬೇಕು ಎಂದು ಶೋಭಾ ಹೇಳಿದರು.

ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕರಾದ ಕ್ಯಾ.ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ, ಪೂರ್ಣಿಮಾ ಮತ್ತಿತರರಿದ್ದರು.

ಪಟಾಕಿ ಸಿಡಿಸದೆ ವಿಜಯೋತ್ಸವ

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಮಡಿದವರ ಸ್ಮರಣಾರ್ಥ ಬಿಹಾರ ಚುನಾವಣಾ ವಿಜಯೋತ್ಸವವನ್ನು ಪಟಾಕಿ ಸಿಡಿಸದೆ ಸರಳ ರೀತಿಯಲ್ಲಿ ಆಚರಿಸಲು ಬಿಜೆಪಿ ನಿರ್ಧರಿಸಿತು. ಹೀಗಾಗಿ ಯಾವುದೇ ಪಟಾಕಿಯ ಅಬ್ಬರ ಇಲ್ಲದೆ ಕೇವಲ ಸಿಹಿ ಹಂಚುವ ಮೂಲಕ ಸಂಭ್ರಮವನ್ನು ಆಚರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X