Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೀಟ್ ಪ್ರವೇಶ ಪರೀಕ್ಷೆ ಹಗರಣ ಆರೋಪ:...

ನೀಟ್ ಪ್ರವೇಶ ಪರೀಕ್ಷೆ ಹಗರಣ ಆರೋಪ: ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಉನ್ನತಮಟ್ಟದ ತನಿಖೆಗೆ ಮಾಜಿ ಸಚಿವ ರೈ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 Jun 2024 3:30 PM IST
share
ನೀಟ್ ಪ್ರವೇಶ ಪರೀಕ್ಷೆ ಹಗರಣ ಆರೋಪ: ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಉನ್ನತಮಟ್ಟದ ತನಿಖೆಗೆ ಮಾಜಿ ಸಚಿವ ರೈ ಆಗ್ರಹ

ಮಂಗಳೂರು, ಜೂ. 10: ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಹಗರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಫಲಿತಾಂಶ ನಾನಾ ಅನುಮಾನಗಳಿಗೆ ಕಾರಣವಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹಲವು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಎಂದರು.

ದಕ್ಷಿಣ ಕನ್ನಡದಲ್ಲಿ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಈ ಹಿಂದೆ ಸಿಇಟಿ ಇರುವಾಗ ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ ದೊರೆಯುತ್ತಿತ್ತು. ಆದರೆ ನೀಟ್ ಬಂದ ಮೇಲೆ ಸ್ಥಳೀಯರಿಗೆ ಅನ್ಯಾಯವಾಗಿದೆ ಎಂದು ಹೇಳಿದರು.

ನೀಟ್‌ನಲ್ಲಿ ಒಂದೇ ಪರೀಕ್ಷಾ ಕೇಂದ್ರಕ್ಕೆ ಹೆಚ್ಚು ರ್ಯಾಂಕ್‌ಗಳು ಬಂದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಜೂನ್ 14ಕ್ಕೆ ಘೋಷಿಸಬೇಕಾದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರಬಂದ ಜೂ.4ರಂದೇ ಪ್ರಕಟಿಸಿರುವುದು ಹಗರಣವನ್ನು ಮುಚ್ಚಿಟ್ಟು ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ನಡೆಸಿದ ಪ್ರಯತ್ನದಂತೆ ಭಾಸವಾಗುತ್ತಿದೆ ಎಂದರು.

ನೀಟ್ ವಿರುದ್ಧ ತಮಿಳುನಾಡು ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳು ಧ್ವನಿಯೆತ್ತಿದೆ. ಅದೇ ರೀತಿ ಕರ್ನಾಟಕವೂ ಕೂಡಾ ನೀಟ್‌ ಅನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ಇತರ ರಾಜ್ಯಗಳೊಂದಿಗೆ ಕೈಜೋಡಿಸಬೇಕು. ಕರ್ನಾಟಕಕ್ಕೆ ನೀಟ್ ಬೇಡ ಹಿಂದಿನಂತೆ ಸಿಇಟಿ ಕೊಟ್ಟರೆ ಹೆಚ್ಚು ಮಂದಿಗೆ ಪ್ರಯೋಜನವಾಗುತ್ತದೆ ಎಂದು ಹೇಳಿದರು.

ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದಾರೆ. ಸಂಸತ್ತಿನಲ್ಲಿ ಧ್ವನಿಯಾಗುವುದಾಗಿ ಹೇಳಿದ್ದಾರೆ. ಅವರ ಹೋರಾಟಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು.

ವಿದ್ಯಾರ್ಥಿ ಸಂಘಟನೆಗಳು ಮೌನ: ಪದ್ಮರಾಜ್

ನೀಟ್ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದೆ. ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದಿದೆ. ಪರೀಕ್ಷೆಯಲ್ಲಿನ ಅವ್ಯವಹಾರಗಳು ವಿದ್ಯಾರ್ಥಿಗಳನ್ನು ಹತಾಶಗೊಳಿಸಿವೆ. ಈ ವಿವಾದಕ್ಕೆ ಸಂಬಂಧಿಸಿ ಎನ್‌ಎಸ್‌ಯುಐ ಹೊರತುಪಡಿಸಿ ಬೇರೆ ಯಾವುದೇ ವಿದ್ಯಾರ್ಥಿ ಸಂಘಟನೆಗಳು ಧ್ವನಿಯೆತ್ತದಿರುವುದು ದುರದೃಷ್ಟಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಅಶ್ರಫ್, ಹರಿನಾಥ್, ಕಾಂಗ್ರೆಸ್ ಧುರೀಣರಾದ ಇಬ್ರಾಹೀಂ ಕೋಡಿಜಾಲ್, ಶಾಲೆಟ್ ಪಿಂಟೊ, ಶಬೀರ್ , ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X