ನೇರಳಕಟ್ಟೆ | ಆ.23ರಂದು ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 15 ಜೋಡಿಗಳು ಸರಳ ಸಾಮೂಹಿಕ ವಿವಾಹ

ಬಂಟ್ವಾಳ : ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಆ. 23 ಶನಿವಾರ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ.
ಸಮಾರಂಭವನ್ನು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸುವರು. ಎಸ್.ವೈ.ಎಸ್ ಜಿಲ್ಲಾ ಉಪಾಧ್ಯಕ್ಷ ಮೌಲಾನಾ ಸಿರಾಜುದ್ದೀನ್ ಸಖಾಫಿ ನಿಖಾಹ್ ನೇರವೇರಿಸಲಿದ್ದು, ಎಸ್ಕೆಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅನೀಸ್ ಕೌಸರಿ ಸಂದೇಶ ಬಾಷಣಗೈಯುವರು.
ಅಬುಧಾಬಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಉದ್ಯಮಿಗಳಾದ ರಿಯಾಝ್ ಎ.ಕೆ ಬಾವ, ವಿ.ಕೆ.ಅಬ್ದುಲ್ ಖಾದರ್ ಬದ್ರಿಯಾ, ಅಬ್ದುಲ್ ರಹಿಮಾನ್ ಕರ್ನಿರೆ, ಜನಪ್ರಿಯ ಫೌಂಡೇಶನ್ ಅದ್ಯಕ್ಷ ಡಾ.ವಿ.ಕೆ.ಅಬ್ದುಲ್ ಬಶೀರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





