Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ...

ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ, ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 July 2025 2:21 PM IST
share
ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ, ಉದ್ಘಾಟನೆ

ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಬಿ.ಆರ್, ಮಂಗಳೂರು ಎಂ.ಆರ್.ಪಿ.ಎಲ್ ನ ಎಚ್.ಆರ್ ಕೇಶವ ಪಿ, ಶಾಲಾ ನಾಯಕಿ ಕು| ಸಾದಿಯಾ ಅವರು ನೂತನ ಕೊಠಡಿಗಳನ್ನು ಉದ್ಘಾಟಿಸಿದರು.

ಪ್ರಸಕ್ತ ಸಾಲಿನಲ್ಲಿ ನೂತನವಾಗಿ ಆರಂಭಗೊಂಡ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಮಾತನಾಡಿ, ಎಲ್ಲಾ ಧರ್ಮೀಯರ ಜ್ಞಾನಕೇಂದ್ರವಾದ ವಿದ್ಯಾ ದೇಗುಲದ ಅಭಿವೃದ್ಧಿಯಲ್ಲಿ ನಾವೆಲ್ಲರೂ ಕೈಜೋಡಿಸಿದಾಗ ಆ ಶಾಲೆ ನಮ್ಮದು ಅನ್ನುವ ಮನೋಭಾವ ಮೂಡಿಬರಲು ಸಾದ್ಯ, ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್ ಶಾಸಕ ಕಿಶೋರ್ ಬಿ.ಆರ್, ಮಾತನಾಡಿ ಧರ್ಮ, ಜಾತಿ, ಪಂಗಡ, ರಾಜಕೀಯ ಯಾವುದೇ ರೀತಿಯ ಭೇದವಿಲ್ಲದೆ ಎಲ್ಲರೂ ಒಂದಾಗಿ ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಿದಾಗ ಆ ಶಾಲೆಯು ಸರ್ವ ಜನಾಂಗದ ಶಾಂತಿಯ ತೋಟವಾಗಿ ಮುಂದುವರಿಯಲು ಸಾದ್ಯ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಎಂ.ಆರ್.ಪಿ.ಎಲ್ ನ ಕೇಶವ ಪಿ., ಎನ್.ಎಂ.ಪಿ.ಎ ಯ ರಮೇಶ್ ಭಂಡಾರಿ ಬೊಟ್ಯಾಡಿ ಮಾತನಾಡಿ ಶುಭ ಹಾರೈಸಿದರು.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ. ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ, ಸದಸ್ಯರಾದ ಕೆ.ಶ್ರೀಧರ ರೈ, ಅಶೋಕ ರೈ, ಧನುಂಜಯ ಗೌಡ, ಶಕೀಲಾ ಕೆ ಪೂಜಾರಿ, ಪ್ರೇಮ, ಲಕ್ಷ್ಮೀ, ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷೆ ಲಕ್ಷ್ಮೀ ಕೆ. ಹೆಗ್ಡೆ ಉರ್ದಿಲಗುತ್ತು ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ವೇಳೆ ಎಂ.ಆರ್.ಪಿ.ಎಲ್ ನ ಕೇಶವ ಪಿ., ಎನ್.ಎಂ.ಪಿ.ಎ ಯ ರಮೇಶ್ ಭಂಡಾರಿ ಬೊಟ್ಯಾಡಿ, ಕಟ್ಟಡದ ಗುತ್ತಿಗೆದಾರ ಸಂದೀಪ್ ಶೆಟ್ಟಿ ಅರೆಬೆಟ್ಟು ಹಾಗೂ ನೇರಳಕಟ್ಟೆ ಶಾಲೆಯಲ್ಲಿ 12 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸೇಸಪ್ಪ ನಾಯ್ಕ ಅವರನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಕೆ. ರಶೀದ್ ಪರ್ಲೊಟ್ಟು, ಉಪಾಧ್ಯಕ್ಷೆ ಶಶಿಕಲಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಠಲ ನಾಯ್ಕ್, ಶಾಲಾ ನಾಯಕಿ ಕು| ಸಾದಿಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿ, ಶಾಲಾ ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೆ.ನಿರಂಜನ್ ರೈ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಗೀತಾ ಕುಮಾರಿ ಕೆ.ಎಸ್. ಸನ್ಮಾನಿತರನ್ನು ಪರಿಚಯಿಸಿದರು. ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X