Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಿಲ್ಲಿಯಲ್ಲಿ ಪ್ರಧಾನಿ ಮೋದಿ...

ದಿಲ್ಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ: ಸಂಸದ ಕ್ಯಾ. ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ9 Feb 2025 10:25 PM IST
share
ದಿಲ್ಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ದಿಲ್ಲಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು, ರಾಷ್ಟ್ರ ರಾಜಧಾನಿಯ ಉಜ್ವಲ, ಪ್ರಗತಿಪರ ಭವಿಷ್ಯಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ‘ವಿಕಸಿತ ಭಾರತ-ವಿಕಸಿತ ದಿಲ್ಲಿ’ ದೃಷ್ಟಿಕೋನದ ಮೇಲೆ ಜನತೆಯ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಇಂದು ಬೆಳ್ತಂಗಡಿ ಬಿಜೆಪಿ ಕಚೇರಿಯ ಬಳಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ಪಾಲ್ಗೊಂಡು ಮಾತನಾಡಿದ ಸಂಸದರು, ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ಮೂಲಕ ಕಟ್ಟಿದ್ದ ‘ಶೀಶ್ ಮಹಲ್’ ಅನ್ನು ನುಚ್ಚುನೂರು ಮಾಡುವ ಮೂಲಕ ದಿಲ್ಲಿ ಜನತೆ ’ಆಪ್’ ಮುಕ್ತ ಮಾಡಿರುವುದಲ್ಲದೇ, ದಿಲ್ಲಿಯಲ್ಲಿ ಅಭಿವೃದ್ಧಿ ಮತ್ತು ವಿಶ್ವಾಸದ ಹೊಸ ಯುಗದ ಆರಂಭಕ್ಕೆ ನಾಂದಿ ಹಾಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಗೆಲುವಿನ ಪ್ರಮುಖ ಕಾರಣ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನರಿಗಿರುವ ಭರವಸೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಜನರಿಗೆ ಮಂಕುಬೂದಿ ಎರಚಿದ್ದ ಕೇಜ್ರಿವಾಲ್ ಮುಂದಾಳತ್ವದ ಪಕ್ಷವನು ದಿಲ್ಲಿಯ ಜನರೇ ಅಕ್ಷರಶಃ ಪೊರಕೆಯಿಂದ ಸ್ವಚ್ಚಗೊಳಿಸಿದ್ದಾರೆ. ಹರಿನಗರ, ಕಸ್ತೂರ್ಬಾ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವಾರ ನಾನು ಕೂಡಾ ಖುದ್ದು ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದ ವೇಳೆ ಬಿಜೆಪಿ ಪರ ಅಲೆ ಸೃಷ್ಟಿಯಾಗಿತ್ತು, ಇದು ಇಂದಿನ ಫಲಿತಾಂಶದಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.

ದೇಶದ ಸಮಗ್ರ ವಿಕಾಸದ ದೃಷ್ಟಿಯಿಂದ ದಿಲ್ಲಿಯಲ್ಲಿ ಬಿಜೆಪಿಗೆ ಜನಾದೇಶ ನೀಡಿರುವುದು ಗಮನಾರ್ಹ. ಏಕೆಂದರೆ ಮತದಾರರು ರಾಷ್ಟ್ರ ರಾಜಧಾನಿಯಲ್ಲಿಯೇ ಪ್ರಧಾನಿ ಮೋದಿಯವರ ಕೈಯನ್ನು ಬಲಪಡಿಸಿರುವುದು ಅಭಿವೃದ್ದಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ವರದಾನವಾಗಲಿದೆ. ಆ ಮೂಲಕ ಸತತ 27 ವರ್ಷಗಳಿಂದ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಿದ್ದ ರಾಷ್ಟ್ರ ರಾಜಧಾನಿಯನ್ನು ‘ಡಬಲ್ ಎಂಜಿನ್’ ಬಿಜೆಪಿ ಸರ್ಕಾರವು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆ ಕೊಂಡೊಯ್ಯುಲಿದೆ. ಸುದೀರ್ಘ ವರ್ಷಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿರುವ ಪಾರ್ಟಿಯ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಸಂಸದನಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X