Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ

ವಾರ್ತಾಭಾರತಿವಾರ್ತಾಭಾರತಿ12 Aug 2025 9:00 PM IST
share
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ
ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಶೀಘ್ರದಲ್ಲೇ ಹೊಸ ನಿಯಮ ಜಾರಿಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ವಿಚಾರದಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿ ಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು, ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರುತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.

ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕ ರಣ ಮಾಡಲಾಗುವುದು. ಈ ನಿಟ್ಟಿನಲ್ಲಿ ಎಸ್‌ಒಪಿ ಡ್ರಾಫ್ಟ್‌ನ್ನು ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ಒದಗಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನು ಕಡಿಮೆಗೊಳಿಸಿ, ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗಳು ದೊರಕಿಸಿಕೊ ಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X