ವಿದ್ಯಾನಗರ: ಮಂಚಿ ವಲಯ ಮಟ್ಟದ ಪ್ರತಿಭಾ ಕಾರಂಜಿ
ಕೊಣಾಜೆ: ಮಂಚಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಕೈರಂಗಳ ವಿದ್ಯಾನಗರದ ಅಂಬರ್ ವ್ಯಾಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಚಿ ವಲಯದ ಸಿ.ಆರ್.ಪಿ. ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.
ಸಮಾರಂಭದಲ್ಲಿ ಸಿ.ಆರ್.ಪಿ. ಇಂದಿರಾ, ಹೂಹಾಕುವಕಲ್ಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ, ಅಂಬರ್ ವ್ಯಾಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುರ್ರಹ್ಮಾನ್, ಸಂಚಾಲಕ ಅಬ್ದುಲ್ ಅಝೀಝ್ ಮೊಂಟೆಪದವು, ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹೈದರ್ ಕೈರಂಗಳ, ಉಪಾಧ್ಯಕ್ಷ ಅಶ್ರಫ್ ಗುದುರು ಮತ್ತು ಶಿಕ್ಷಕ ಶಶಿಕಾಂತ್, ಶಶಿ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ಪ್ರಿಯಾಂಕಾ ವಂದಿಸಿದರು. ಶಿಕ್ಷಕಿ ರಮ್ಲತ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚಿನ ಪ್ರೌಢಶಾಲೆಗಳ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.