ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆಯ ಕ್ರೀಡಾಕೂಟ

ಮಂಗಳೂರು : ನಗರದ ಪಂಪ್‌ವೆಲ್-ಬಿ.ಸಿ.ರೋಡ್‌ನ ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ ವತಿಯಿಂದ ಎಕ್ಕೂರು ಮೈದಾನ ದಲ್ಲಿ ಮಂಗಳವಾರ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಚೆರಿಯಾಂಡ ಬೆಳ್ಚಪ್ಪಾಡ ಕ್ರೀಡಾಕೂಟ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೇರ್ ಸುಧೀರ್ ಶೆಟ್ಟಿ ಕಣ್ಣೂರು ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕ್ರೀಡಾಕೂಟವೂ ನಿಯ ಮಿತವಾಗಿ ನಡೆಯುತ್ತಿದ್ದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಲಿದೆ. ತಾಂತ್ರಿಕ ಶಿಕ್ಷಣಕ್ಕೆ ಇದೀಗ ಹೆಚ್ಚು ಅವಕಾಶಗಳು ಲಭ್ಯವಿದ್ದು, ಈ ನಿಟ್ಟಿನಲ್ಲಿ ಮಕ್ಕಳು ವಿಶೇಷ ಆಸ್ಥೆ ವಹಿಸಬೇಕು ಎಂದರು.
ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ರಾಕೇಶ್ ಕುಮಾರ್ ಹಾಗೂ ನಿಶ್ಮಿತಾ ರಾಕೇಶ್, ಕ್ರೀಡಾ ಸಂಯೋಜಕರಾದ ಅಶ್ರಫ್, ಪ್ರತೀಕ್ ಡಿ.ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ಸುಶ್ಮಾ ವಂದಿಸಿದರು. ಗೀತಾ ಕಾರ್ಯಕ್ರಮ ನಿರೂಪಿಸಿದರು.
Next Story





