Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಯ ಪ್ರಕರಣಗಳನ್ನು ರಾಜಿ ಮೂಲಕ...

ಹಳೆಯ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ: ನ್ಯಾಯಾಧೀಶೆ ಶರ್ಮಿಳಾ

ವಾರ್ತಾಭಾರತಿವಾರ್ತಾಭಾರತಿ25 Nov 2023 10:42 PM IST
share
ಹಳೆಯ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ: ನ್ಯಾಯಾಧೀಶೆ ಶರ್ಮಿಳಾ

ಕಾರ್ಕಳ : ಡಿಸೆಂಬರ್ 9ರಂದು ದೇಶದಾದ್ಯಂತ ನಡೆಯಲಿರುವ ರಾಷ್ಟೀಯ ಲೋಕ ಅದಾಲತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವಿಚಾರಣೆಗೆ ಬಾಕಿಯಿರುವ ಹಳೆಯ ಪ್ರಕರಣಗಳನ್ನು ಎರಡೂ ಕಕ್ಷಿದಾರರ ಒಪ್ಪಿಗೆ ಮೇರೆಗೆ ರಾಜಿ ಸಂಧಾ ನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ ಎಸ್ ಹೇಳಿದರು.

ಅವರು ಈ ಕುರಿತು ಕಾರ್ಕಳ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ದೇಶದಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ಹಳೆಯ ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಲೋಕ ಅದಾಲತ್ ಮೂಲಕ ಸಾರ್ವಜನಿಕರಿಗೆ ಹಾಗೂ ಅರ್ಜಿದಾರರ ಸಮಸ್ಯೆಗಳಿಗೆ ತ್ವರಿತ ಹಾಗೂ ಸುಲಭವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ಕೌಟುಂಬಿಕ ವ್ಯಾಜ್ಯಗಳು ಹಾಗೂ ವೈವಾಹಿಕ ಪ್ರಕರಣಗಳು,ಕಂದಾಯ ಹಾಗೂ ಭೂ ವ್ಯಾಜ್ಯಗಳು, ಗ್ರಾಹಕ ವ್ಯಾಜ್ಯಗಳು, ರಾಜಿ ಮಾಡಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು ಸೇರಿ ದಂತೆ ಹಲವಾರು ಪ್ರಕರಣಗಳಿಗೆ ಲೋಕ ಅದಾಲತ್ ಮೂಲಕ ರಾಜಿ ಮಾಡಿಕೊಳ್ಳಲು ಅವಕಾಶವಿದೆ, ಇದರಿಂದ ಪ್ರಕರಣಗಳು ಇತ್ಯರ್ಥಗೊಂಡು ನೆಮ್ಮದಿಯಿಂದ ಜೀವನ ನಡೆಸಲು ಅವಕಾಶವಿದೆ ಎಂದರು. ಆದ್ದರಿಂದ ಈ ಅದಾಲತ್ ಮೂಲಕ ಅರ್ಜಿದಾರರು ಪರಿಹಾರ ಕಂಡುಕೊಳ್ಳಲು ನ್ಯಾಯಾಲಯದ ವತಿಯಿಂದ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್ ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಕೋಮಲ ಆರ್.ಸಿ, ಸರ್ಕಾರಿ ಅಭಿಯೋಜಕಿ ಸೀತಾ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X