ಸಹಕಾರ ಸಂಘಗಳ ಕ್ರೀಡಾಕೂಟ : ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಥಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್,ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಮಂಗಳೂರು 'ಎ' ತಂಡ ಪ್ರಥಮ ಸ್ಥಾನ ಪಡೆದಿದೆ.
ಪುತ್ತೂರು ತಾಲೂಕಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಸಿಬ್ಬಂದಿ ವರ್ಗದ ಹಗ್ಗ ಜಗ್ಗಾಟದಲ್ಲಿ ಪುರುಷರ ವಿಭಾಗದಲ್ಲಿ ಮಂಗಳೂರು 'ಎ' ತಂಡ ಪ್ರಥಮ ಸ್ಥಾನವನ್ನು ಹಾಗೂ ಪುತ್ತೂರು 'ಎ' ತಂಡ ದ್ವಿತೀಯ ಸ್ಥಾನ ಪಡೆದಿದೆ. ಮಹಿಳೆಯರ ವಿಭಾಗದಲ್ಲಿ ಪುತ್ತೂರು ಪ್ರಥಮ ಸ್ಥಾನವನ್ನು ಹಾಗೂ ಸುಳ್ಯ ದ್ವಿತೀಯ ಸ್ಥಾನ ಪಡೆಯಿತು.
ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿ ಮತ್ತು ಸದಸ್ಯರ ಪುರುಷರ ವಿಭಾಗದ ಹಗ್ಗಜಗ್ಗಾಟದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಪ್ರಥಮ ಸ್ಥಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ದ್ವಿತೀಯ ಸ್ಥಾನ, ಮಹಿಳೆಯರ ವಿಭಾಗದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪ್ರಥಮ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ದ್ವಿತೀಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ಮತ್ತು ಸದಸ್ಯರ ಪುರುಷರ ವಿಭಾಗದ ಹಗ್ಗಜಗ್ಗಾಟದಲ್ಲಿ ಕುಂಬ್ರ ಪ್ರಥಮ , ಬೆಳ್ತಂಗಡಿ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಸುಳ್ಯ ಸೌಪರ್ಣಿಕಾ ತಂಡ ಪ್ರಥಮ, ಬಂಟ್ವಾಳ ದ್ವಿತೀಯ, ನವೋದಯ ಸ್ವಸಹಾಯ ಸಂಘದ ಪುರುಷರ ವಿಭಾಗದಲ್ಲಿ ಮಂಗಳೂರು'ಎ' ತಂಡ ಪ್ರಥಮ, ಸುಳ್ಯ ' ಬಿ' ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಮಂಗಳೂರು 'ಬಿ' ತಂಡ ಪ್ರಥಮ, ಸುಳ್ಯ ಐವರ್ನಾಡು ದ್ವಿತೀಯ , ಪ್ರೇರಕಿಯರ ವಿಭಾಗದಲ್ಲಿ ಸುಳ್ಯ ಪ್ರಥಮ , ಪುತ್ತೂರು ದ್ವಿತೀಯ ಸ್ಥಾನ ಪಡೆಯಿತು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಅಧ್ಯಕ್ಷತೆ ವಹಿಸಿದ್ದರು. ಬಹುಮಾನ ವಿತರಣೆಯನ್ನು ಆದರ್ಶ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸೀತಾರಾಮ ರೈ ಸವಣೂರು ನೇರವೇರಿಸಿದರು. ಸಮಾರಂಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಎಸ್.ಬಿ.ಜಯರಾಮ ರೈ , ಜೈರಾಜ್ ಬಿ. ರೈ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹರೀಶ್ ಆಚಾರ್, ರಾಮಕೃಷ್ಣ ಸರಕಾರಿ ಫ್ರೌಢ ಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ , ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಹಾಗೂ ಅಧಿಕಾರಿಗಳಾದ ಶರ್ಮಿಳಾ ಭಟ್ , ವಿದ್ಯಾ ಕಾರ್ನಾಡ್, ಸಹನಾ ಹೆಗ್ಡೆ, ಸುಜಾತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.







