ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರ: ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.
ಮಾಜಿ ಸಂಸದ ಬಿ ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಜಿ ಎ ಭಾವ, ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಮಮತಾ ಗಟ್ಟಿ, ಜಿ ಕೃಷ್ಣಪ್ಪ, ಕನಚುರ್ ಮೋನು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಸರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು,, ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Next Story







