ಸದ್ಭಾವನಾ ವೇದಿಕೆಯಿಂದ ಸೌಹಾರ್ದ ಕೂಟ

ಮಂಗಳೂರು,ಡಿ.4: ಸದ್ಭಾವನಾ ವೇದಿಕೆ ಜಪ್ಪು ವರ್ತುಲ ಇದರ ವತಿಯಿಂದ 9ನೆ ವರ್ಷದ ದೀಪಾವಳಿ ಈದ್ ಹಾಗೂ ಕ್ರಿಸ್ಮಸ್ ಸೌಹಾರ್ದ ಕೂಟವು ರವಿವಾರ ನಗರದ ಕಾಸಿಯಾ ಚರ್ಚ್ ಹಾಲ್‌ನಲ್ಲಿ ಜರುಗಿತು.
ಸಂತ ಅಲೋಶಿಯಸ್ ಕಾಲೇಜಿನ ಪ್ರೊ. ಡಾ. ಮರುವಳ ನಾರಾಯಣ ಭಟ್, ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ವಿನ್ಸೆಂಟ್ ಮೆಂಡೋನ್ಸಾ, ಜಮಾಅತೆ ಇಸ್ಲಾಮೀ ಹಿಂದೆ ಕರ್ನಾಟಕ ರಾಜ್ಯ ಕಾರ್ಯ ದರ್ಶಿ ಅಕ್ಬರ್ ಅಲಿ ಉಡುಪಿ ಕ್ರಮಾಗಿ ದೀಪಾವಳಿ, ಕ್ರಿಸ್ಮಸ್, ಈದ್ ಸಂದೇಶ ನೀಡಿದರು.
ವೇದಿಕೆಯ ಅಧ್ಯಕ್ಷ ದಿವಾನ್ ಕೇಶವ ಭಟ್ ಸ್ವಾಗತಿಸಿದರು. ಉಪಾಧ್ಯಕ್ಷ ಜೇಸನ್ ಪೀಟರ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿ ತರಿದ್ದರು. ಪ್ರಧಾನ ಕಾರ್ಯದರ್ಶಿ ಸಾಲೆಹ್ ಮುಹಮ್ಮದ್ ವಂದಿಸಿದರು. ಉಪಾಧ್ಯಕ್ಷ ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.
Next Story





