ಮಂಗಳೂರು: ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತ್ಯು

ಮಂಗಳೂರು : ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿರುವುದು ವರದಿಯಾಗಿದೆ
ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ಅಬ್ದುಲ್ ರೆಹಮಾನ್(47) ಮೃತಪಟ್ಟವರು. ಅವರು ಡಿ.4ರಂದು ಹೆನ್ರಿ ಡಿ’ಸೋಜ ಅವರ ಮಾಲಕತ್ವದ ಮನೆಯಲ್ಲಿ ಮೇಲ್ಛಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೈಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಷನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು ಎನ್ನಲಾಗಿದೆ.
ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸಿರು. ಚಿಕಿತ್ಸೆ ಫಲಕಾರಿಯಾಗದೆ ಅಬ್ದುಲ್ ರೆಹಮಾನ್ ಅವರು ಡಿ.5ರಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





