ವಿದ್ಯಾರ್ಥಿಗಳು ಸಂಶೋಧನೆಯತ್ತ ಒಲವು ತೋರಿಸಿ: ಡಾ. ಯು. ಮೋನು
ಕಣಚೂರು: ಕಾರ್ಯಾಗಾರ ಉದ್ಘಾಟನೆ

ಕೊಣಾಜೆ: ಆರೋಗ್ಯ ವಿಜ್ಞಾನಗಳ ವಿಚಾರದಲ್ಲಿ ತಳಮಟ್ಟದಿಂದ ಸಂಶೋಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕಣಚೂರು ಇನ್‍ಸ್ಟ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾರ್ಯಾಗಾರವನ್ನು ಆಯೋಜಿಸಿದ್ದು, ಕಾರ್ಯಾಗಾರದಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಪಡೆದ ಮಾಹಿತಿ ಮಾರ್ಗದರ್ಶನವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಸಂಶೋಧನೆಯತ್ತ ಒಲವು ತೋರಿಸಿ ತಾವು ಕಲಿತ ಶಿಕ್ಷಣ ಸಂಸ್ಥೆಗೂ ಗೌರವವನ್ನು ತರುವ ಕಾರ್ಯ ಮಾಡಬೇಕು ಎಂದು ಕಣಚೂರು ಇಸ್ಲಾಮಿಕ್ ಎಜ್ಯಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ. ಯು. ಕಣಚೂರು ಮೋನು ಅಭಿಪ್ರಾಯಪಟ್ಟರು.
ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಾಟೆಕಲ್ ಮಂಗಳೂರು ಇದರ ಫಾರ್ಮಕಾಲೋಜಿ ವಿಭಾಗದ ಆಶ್ರಯದಲ್ಲಿ ಗುರುವಾರ ಕಣಚೂರು ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ `ಆರೋಗ್ಯ ಸಂಶೋಧನೆಯಲ್ಲಿ ಉತ್ತಮ ಕ್ಲಿನಿಕಲ್ ಅಭ್ಯಾಸ ಮತ್ತು ಸುರಕ್ಷತೆ ವರದಿ' ವಿಚಾರದಲ್ಲಿ ನಡೆದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ನಿರ್ದೇಶಕ ಎಂ. ಅಬ್ದುಲ್ ರಹಿಮಾನ್ ಮಾತನಾಡಿ ಕಾರ್ಯ ಗಾರಗಳು ವಿದ್ಯಾರ್ಥಿಗಳ ಜ್ಞಾನವರ್ಧನೆಗೆ ಸಹಕಾರಿಯಾಗಿದ್ದು, ವೈದ್ಯಕೀಯ ಶಿಕ್ಷಣ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವ ರೋಗಿಗೆ ಅತ್ಯುತ್ತಮ ಸೇವೆಯನ್ನು ನೀಡಲು ಬೇಕಾದ ಕೌಶಲ್ಯವನ್ನು ಇಂತಹ ಶೈಕ್ಷಣಿಕ ಕಾರ್ಯಾಗಾರಗಳಿಂದ ಕಲಿಯಲು ಸಾದ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ಡೀನ್ ಡಾ.ರತ್ನಾಕರ ಯು.ಪಿ., ಕಣಚೂರು ಆರೋಗ್ಯ ವಿಜ್ಞಾನಗಳ ಸಲಹಾ ಸಮಿತಿ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಸದಸ್ಯ ಡಾ. ಎಂ.ವಿ. ಪ್ರಭು, ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತಾ„ಕಾರಿ ಡಾ. ರೋಹನ್ ಮೋನಿಸ್, ಮುಖ್ಯ ಆರೋಗ್ಯಾ„ಕಾರಿ ಡಾ.ಶಹಾನವಾಝ್ ಎಂ. ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜನಾ ಸಮಿತಿ ಕಾರ್ಯದರ್ಶಿ ಡಾ. ವಿಶ್ವನಾಥ ಬಿ. ಸ್ವಾಗತಿಸಿದರು. ಫಾರ್ಮಕಾಲೋಜಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ಯಾಮ್‍ಜಿತ್ ಎಂ. ವಂದಿಸಿದರು. ವಿದ್ಯಾರ್ಥಿನಿ ಅಸಿಯನ್ ಕಾರ್ಯಕ್ರಮ ನಿರ್ವಹಿಸಿದರು.







