Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ...

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಹಮ್ಮಿಕೊಂಡ ಉಚಿತ ಕೃತಕ ಕೈ - ಕಾಲು ಜೋಡಣಾ ಶಿಬಿರ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮ: ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ10 Dec 2023 9:28 PM IST
share
ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಹಮ್ಮಿಕೊಂಡ ಉಚಿತ ಕೃತಕ ಕೈ - ಕಾಲು ಜೋಡಣಾ ಶಿಬಿರ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮ: ಯು.ಟಿ. ಖಾದರ್

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಹಮ್ಮಿಕೊಂಡ ಉಚಿತ ಕೃತಕ ಕೈ - ಕಾಲು ಜೋಡಣಾ ಶಿಬಿರ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ಬೆಂಗಳೂರಿನ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ನಡೆದ ಎರಡನೇ ದಿನದ ಕೈ ಕಾಲುಗಳಿಲ್ಲದ ಬಡ ಅಶಕ್ತರಿಗೆ ಉಚಿತ ಕೃತಕ ಕೈ- ಕಾಲುಗಳ ಜೋಡಣಾ ಶಿಬಿರದಲ್ಲಿ ಕೃತಕ ಕಾಲು ವಿತರಿಸಿ ಮಾತನಾಡಿದರು.

ಸಮಾಜದ ಆಸಕ್ತರ ನೋವುಗಳಿಗೆ ಸ್ಪಂದಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ದೇಶದ ಪ್ರಗತಿಯ ಜೊತೆಗೆ ಸಾಮಾಜಿಕ ಸಮತೋಲನ ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಜಮೀಯ್ಯತುಲ್ ಫಲಾಹ್ ಸಂಸ್ಥೆಯು ಹಲವಾರು ವರ್ಷಗಳಿಂದ ಯಾವುದೇ ರೀತಿಯ ಸ್ವಯಂ ಪ್ರತಿಫಲಾಪೇಕ್ಷೆ ಇಲ್ಲದೆ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ, ಸಾಮಾಜಿಕ ಸೇವೆಯು ಪ್ರಶಂಸನೀಯ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಜಾತಿ ಮತ ಭೇದವಿಲ್ಲದೆ ಪರಸ್ಪರ ಮಾನವೀಯತೆಯನ್ನು ಬೆಸೆದು ಅಂತಃಕರಣದ ಪರಿವರ್ತನೆಗೆ ಈ ಶಿಬಿರ ಪೂರಕ ಕಾರ್ಯಕ್ರಮ ಎಂದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಅಧ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಕೋಸ್ಟಲ್ ಫ್ರೆಂಡ್ಸ್ ಸ್ಥಾಪಕ ಸಿರಾಜ್ ಪರ್ಲಡ್ಕ, ಮಂಗಳೂರು ಭಾರತ್ ಕನ್ ಸ್ಟ್ರಕ್ಷನ್ ಮಾಲಕ ಮುಸ್ತಫಾ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇದೇ ವೇಳೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ಹಾಗೂ ಬೆಂಗಳೂರಿನ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಇದರ ಲಿಂಬ್ ಸೆಂಟರ್ ನ ಚೀಫ್ ಟೆಕ್ನಿಷಿಯನ್ ಮುರಳಿ ಅವರನ್ನು ಸನ್ಮಾನಿಸಲಾಯಿತು. ಸಿಬ್ಬಂದಿಗಳಾದ ವೆಂಕಟ್ರಾಮಯ್ಯ, ಗಣೇಶ್, ನಾರಾಯಣ ರಾವ್, ಡ್ಯಾನಿಯಲ್ ಪಿಂಟೋ ಅವರನ್ನು ಗೌರವಿಸಲಾಯಿತು.

ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾದ್ಯಕ್ಷ ಕೆ.ಕೆ.ಸಾಹುಲ್ ಹಮೀದ್, ಪೂರ್ವಾದ್ಯಕ್ಷ ಹಾಗೂ ಹಿದಾಯ ಫೌಂಡೇಶನ್ ಅದ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಜಮೀಯ್ಯತುಲ್ ಫಲಾಹ್ ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಉಪಾಧ್ಯಕ್ಷ ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಅಜೀವ ಸದಸ್ಯರುಗಳಾದ ಹಂಝ ಆನಿಯಾ ದರ್ಬಾರ್, ಅಬೂಬಕ್ಕರ್ ಪುತ್ತು ಉಪ್ಪಿನಂಗಡಿ , ಡಿ.ಪಿ.ಸಿದ್ದೀಕ್ ಹಾಜಿ, ಮುಹಮ್ಮದ್ ಸಾಗರ್, ಕಾರ್ಯಕ್ರಮ ಸಂಯೋಜಕ ಹಕೀಂ ಕಲಾಯಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಮೀಯ್ಯತುಲ್ ಫಲಾಹ್ ನ ಪ್ರಮುಖರಾದ ಬಿ.ಎಂ.ಅಬ್ಬಾಸ್ ಅಲಿ, ಎಫ್.ಎಂ. ಬಶೀರ್ ಫರಂಗಿಪೇಟೆ, ಪಿ. ಮುಹಮ್ಮದ್ ಪಾಣೆಮಂಗಳೂರು, ಬಿ.ಎಂ.ತುಂಬೆ, ಮುಹಮ್ಮದ್ ನಾರಂಕೋಡಿ, ಸುಲೈಮಾನ್ ಸೂರಿಕುಮೇರು, ಆಶಿಕ್ ಕುಕ್ಕಾಜೆ, ಉಬೈದುಲ್ಲಾ ವಿಟ್ಲ ಬಝಾರ್, ಎಸ್.ಎಂ.ಮಹಮ್ಮದ್ ಅಲಿ ಶಾಂತಿಅಂಗಡಿ, ಬಿ.ಎ. ಮುಹಮ್ಮದ್ ಬಂಟ್ವಾಳ, ತೌಫೀಕ್ ರಫೀಕ್ ಹಾಜಿ ಆಲಡ್ಕ, ಶಾಕಿರ್ ಅಳಕೆಮಜಲು ಮೊದಲಾದವರು ಭಾಗವಹಿಸಿದ್ದರು.

ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸ್ವಾಗತಿಸಿ, ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಆಶಿಫ್ ಇಕ್ಬಾಲ್ ಕುಂಪನಮಜಲು ವಂದಿಸಿದರು. ಉಪಾಧ್ಯಕ್ಷ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X