ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಪ್ರಥಮ ಮತ್ತು ದ್ವಿತೀಯ ಡಿಎಲ್‌ಇಡಿ ಪೂರಕ ಪರೀಕ್ಷೆಯು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಡಿ.11ರಿಂದ 16ರವರೆಗೆ ನಡೆಯಲಿದೆ.
ಈ ಸಂದರ್ಭ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ತಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶ ಹೊರಡಿಸಿದ್ದಾರೆ.
Next Story





