Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಂಬೆ : ಕಾಲೇಜು ವಾರ್ಷಿಕೋತ್ಸವ

ತುಂಬೆ : ಕಾಲೇಜು ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ14 Dec 2023 6:45 PM IST
share
ತುಂಬೆ : ಕಾಲೇಜು ವಾರ್ಷಿಕೋತ್ಸವ

ಬಂಟ್ವಾಳ: ತುಂಬೆಯ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ 35ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಸಂಸ್ಥೆಯ ವಠಾರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಳಚ್ಚಿಲ್‍ನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಪ್ರಾಂಶುಪಾಲ ಡಾ. ಶ್ರೀನಿವಾಸ ಮಯ್ಯ ಡಿ. ಮಾತನಾಡಿ, ಕೇಳುವ ಕೇಳಿಸಿಕೊಳ್ಳುವ ಅಭ್ಯಾಸವನ್ನು ರೂಡಿಸಿಕೊಂಡರೆ ನಾವು ನಮ್ಮ ಜೀವನದಲ್ಲಿ ಒಂದು ಹಂತವನ್ನು ದಾಟಿದಂತೆಯೇ ಆಗುತ್ತದೆ. ನಮ್ಮ ಶರೀರದಲ್ಲಿರುವ ಐದು ‘ಸೆನ್ಸ್’ ನಂತೆ ಆರನೆಯ ಸೆನ್ಸ್ ಆಗಿ ಕಾಮನ್ ಸೆನ್ಸ್‍ನ್ನು ಇರಿಸಿಕೊಳ್ಳಬೇಕಾದ ಅನಿವಾರ್ಯತೆ ಮನುಷ್ಯರಾದ ನಮಗೆ ಇದೆ. ಇಷ್ಟಪಟ್ಟು ಮಾಡುವ ಕೆಲಸ ಯಾವತ್ತೂ ಸುಲಭವಾಗುತ್ತದೆ. ಪಠ್ಯ ವಿಷಯಗಳನ್ನು ಇಷ್ಟಪಟ್ಟು ಕಲಿತಾಗ ಸುಲಭದಲ್ಲಿ ಕಲಿತುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪಿ.ಜಿ. ವಿಭಾಗದ ಪ್ರೊಫೆಸರ್ ಮತ್ತು ಕೋಆರ್ಡಿನೇಟರ್ ಡಾ. ಅಬೂಬಕರ್ ಸಿದ್ಧಿಕ್ ಮಾತನಾಡಿ ಇವತ್ತು ತಾಂತ್ರಿಕ ಯುಗವಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ಫೋನ್, ಇಂಟರ್ನೆಟ್‍ನ್ನು ಬಳಸುತ್ತಿದ್ದಾರೆ. ಇಂದು ಕಾಲೇಜುಗಳಿಗೆ ಮೊಬೈಲ್ ತರಬಾರದೆಂದರೆ ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೇ ಕಡಿಮೆಯಾಗು ತ್ತಿದೆ. ಆದುದರಿಂದ ಮೊಬೈಲ್ ಆಗಲಿ, ಇಂಟರ್ನೆಟ್ ಆಗಲಿ ಬಳಕೆ ಮಾಡುವುದು ತಪ್ಪಲ್ಲ, ಅವುಗಳನ್ನು ಎಲ್ಲಿ ಹೇಗೆ ಮತ್ತು ಯಾಕೆ ಬಳಕೆ ಮಾಡಬೇಕೆಂಬುದನ್ನು ಕಲಿಯಬೇಕಾಗಿದೆ ಎಂದರು.

ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಸಮಾರಂಭದ ಅಧ್ಯಕ್ಷತೆ ವಹಿಸಿ, ರಾಷ್ಟ್ರಮಟ್ಟದ ಕ್ರೀಡಾಪಟು ಮೊಹಮ್ಮದ್ ಮಾಶಿಬ್ ಹಾಗೂ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಕೆ. ಎನ್. ಗಂಗಾಧರ ಆಳ್ವ ಸ್ವಾಗತಿಸಿ, ವರದಿ ವಾಚಿಸಿದರು.

ಮುಖ್ಯ ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಕೆ, ಶ್ರೀಮತಿ ಮಲ್ಲಿಕಾ ಎಸ್. ಶೆಟ್ಟಿ ಬಹುಮಾನಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.

ಮೊಹಮ್ಮದ್ ಶಾನ್ ಕಿರಾತ್ ಪಠಿಸಿದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಕಾಲೇಜಿನ ವಿದ್ಯಾರ್ಥಿ ನಾಯಕರಾದ ಮೊಹಮ್ಮದ್ ರಿಫಾಜ್, ಸಫಾ ಸುಲ್ತಾನ, ಪ್ರೌಢಶಾಲೆ ಹಾಗೂ ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ನಾಯಕರಾದ ಹಿಸಾನ್ ಯೂಸುಫ್, ಹಯಾ ನಫೀಸಾ ಅಶ್ರಫ್, ಅಬ್ಬಾಸ್ ಸುಹೈಬ್, ಹವ್ವಾ ಮುಶೀನಾ, ಪಿಟಿಎ ಅಧ್ಯಕ್ಷ ನಿಸಾರ್ ಅಹಮ್ಮದ್ ವಳವೂರು, ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಸೂಪರಿಂಟೆಂಡೆಂಟ್ ಬಿ. ಅಬ್ದುಲ್ ಕಬೀರ್, ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕ ಶ್ರೀ ವೀರಪ್ಪಗೌಡ ಪಿ. ವಂದಿಸಿ, ಇತಿಹಾಸ ಉಪನ್ಯಾಸಕಿ ಶರ್ಮಿಳಾ ಎ. ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X