Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ...

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Dec 2023 8:31 PM IST
share
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ

ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.

ಅವರು ಸೋಮವಾರ ಕೋಟೆಕಾರು ಪಟ್ಟಣ ಪಂಚಾಯತ್‌ಗೆ ಭೇಟಿ ನೀಡಿ, ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು. ಜನರು ಕುಡಿಯುವ ನೀರಿಗೆ ಪರದಾಡುವಂತಹ ಸನ್ನಿವೇಶ ಯಾವುದೇ ಕಾರಣಕ್ಕೂ ಉದ್ಭವವಾಗದಂತೆ ನೋಡಿಕೊಳ್ಳಬೇಕು. ಕೊನೆಯ ಕ್ಷಣದಲ್ಲಿ ಕಾರ್ಯಪ್ರವೃತ್ತರಾಗುವ ಬದಲು ಮುಂದಾಲೋಚನೆಯಿಂದ ಯೋಜನೆಗಳನ್ನು ರೂಪಿಸಿದರೆ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗದು ಎಂದು ಸಚಿವರು ತಿಳಿಸಿದರು.

ಅಭಿವೃದ್ಧಿ ಕಾಮಗಾರಿ, ಫಲಾನುಭವಿ ಆಧಾರಿತ ಯೋಜನೆಗಳು, ಸಮುದಾಯ ಕಾರ್ಯಕ್ರಮಗಳನ್ನು ಆಯಾ ವರ್ಷಾಂತ್ಯ ದೊಳಗೆ ಪೂರ್ಣಗೊಳಿಸಬೇಕು. ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಗಳನ್ನು ಅನುಷ್ಠಾನಗೊಳಿಸಬೇಕು. ಬಾಕಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿ, ಆರ್ಥಿಕ ಸಂಪನ್ಮೂಲಗಳನ್ನು ವೃದ್ಧಿಸಿಕೊಳ್ಳ ಬೇಕು ಎಂದು ರಹೀಂ ಖಾನ್ ಹೇಳಿದರು.

ಕ್ಲಸ್ಟರ್ ತ್ಯಾಜ್ಯ ನಿರ್ವಹಣೆ ಘಟಕ:ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು ನಗರ ಪಂಚಾ ಯತ್ ವ್ಯಾಪ್ತಿ ಪ್ರದೇಶಗಳು ಪರಸ್ಪರ ಹತ್ತಿರದಲ್ಲಿವೆೆ. ಪ್ರಸ್ತುತ ಈ ಎಲ್ಲ ಪಟ್ಟಣ ಪ್ರದೇಶಗಳಲ್ಲೂ ತ್ಯಾಜ್ಯ ನಿರ್ವಹಣಾ ಘಟಕಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಮೂರು ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯಗಳನ್ನು ನಿರ್ವಹಿಸಲು ಒಂದೇ ಕಡೆ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದೊಂದು ಉತ್ತಮ ಯೋಚನೆಯಾಗಿದೆ. ಇದರಿಂದ ಈ ಎಲ್ಲ ಪ್ರದೇಶಗಳ ತ್ಯಾಜ್ಯಗಳನ್ನು ವೈಜ್ಞಾನಿಕ ವಾಗಿ ದೊಡ್ಡ ಮಟ್ಟದ ಘಟಕ ಸ್ಥಾಪಿಸುವ ಮೂಲಕ ನಿರ್ವಹಿಸಬಹುದಾಗಿದೆ. ಈ ಯೋಜನೆ ಕಾರ್ಯಗತಗೊಳಿಸಲು ರಾಜ್ಯ ಸರಕಾರ ಅಗತ್ಯ ಅನುದಾನ ನೀಡಲಿದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು.

ಸಚಿವರು ಕೋಟೆಕಾರು ಪಟ್ಟಣ ಪಂಚಾಯತ್ ಅಭಿವೃದ್ಧಿ ಕಾಮಗಾರಿಗಳ ವಿವರ ಪಡೆದು, ಸಿಬ್ಬಂದಿಗಳ ಕಾರ್ಯವೈಖರಿಯ ಬಗ್ಗೆ ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಾದ ಪುರಂದರ ಕೋಟ್ಯಾನ್, ತೇಜಮೂರ್ತಿ. ಕೋಟೆಕಾರು ಪ.ಪಂ. ಮುಖ್ಯಾಧಿಕಾರಿ ಮಾಲಿನಿ, ಪ.ಪಂ. ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X