Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಧ್ಯಮ ಘಟಕ ಸ್ಥಾಪಿಸಲು ಎಸ್ಟಿ...

ಮಾಧ್ಯಮ ಘಟಕ ಸ್ಥಾಪಿಸಲು ಎಸ್ಟಿ ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ18 Dec 2023 8:33 PM IST
share
ಮಾಧ್ಯಮ ಘಟಕ ಸ್ಥಾಪಿಸಲು ಎಸ್ಟಿ ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಗಳ ಕ್ರಿಯಾಯೋಜನೆಯಡಿ 2023-24ನೇ ಸಾಲಿನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಇಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ,ತಾಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70ರಷ್ಟು ಅಥವಾ ರೂ.5 ಲಕ್ಷಗಳ ಸಹಾಯಧನವನ್ನು ಪಡೆಯಲು (ಉಳಿದ ಘಟಕ ವೆಚ್ಚ ಬ್ಯಾಂಕಿನಿಂದ ಪಡೆಯುವುದು) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು (ಯೂಟ್ಯೂಬ್ ಚಾನೆಲ್, ಸೋಶಿಯಲ್ ಮೀಡಿಯಾ ನ್ಯೂಸ್ ಪೇಜಸ್, ನ್ಯೂಸ್ ಓನ್ಲೈನ್ ಬ್ಲಾಗ್, ನ್ಯೂಸ್ ಕಂಟೆಂಟ್ ಕ್ರಿಯೇಶನ್, ವೆಬ್ ಪೇಜಸ್, ಆನ್‌ಲೈನ್ ಜರ್ನಲಿಸಂ, ಮೀಡಿಯಾ ರಿಲೇಟೆಡ್ ಟ್ರೈನಿಂಗ್) ಅರ್ಹ ಅಭ್ಯರ್ಥಿಗಳು ಕಚೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಸಲ್ಲಿಸಬಹುದು.

ಅರ್ಜಿದಾರರ ಕುಟುಂಬದ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 1.50ಲಕ್ಷ ಮತ್ತು ನಗರ ಪ್ರದೇಶದವರಿಗೆ ರೂ. 2 ಲಕ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ವಯೋಮಿತಿ 21 ರಿಂದ 50 ವರ್ಷದವರೆಗೆ ಇರಬೇಕು. ಅರ್ಜಿದಾರರ ಕುಟುಂಬದ ಸದಸ್ಯರು ಸರಕಾರಿ ,ಅರೆಸರಕಾರಿ ಸಂಸ್ಥೆಯ ನೌಕರರಾಗಿರಬಾರದು. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ, ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಮಕ್ಕಳಿಗೆ ಆದ್ಯತೆ ನೀಡಲಾಗುವುದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಆರ್ಥಿಕ ಸೌಲಭ್ಯ ಪಡೆದಿರಬಾರದು.

ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವು ಬ್ಯಾಂಕ್ ಸಾಲವಾಗಿರುತ್ತದೆ. ಸ್ಥಾಪಿಸಿದ ಉದ್ಯಮದಲ್ಲಿ ಒಬ್ಬ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಅರ್ಜಿದಾರರು ಒಳಪಡುವ ಉಪಜಾತಿಗೆ ಸಂಬಂಧಿಸಿದ ಅಭಿವೃದ್ಧಿ ನಿಗಮಗಳಿಗೆ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಬ್ಯಾಂಕುಗಳಿಂದ ಸಹಾಯಧನ ಬಿಡುಗಡೆ ಮಾಡಲು ಕ್ಲೇಮ್ ಬಂದ ಕೂಡಲೇ ಸಹಾಯಧನ ಮೊತ್ತವನ್ನು ಸಂಬಂಧಿಸಿದ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಜಿ.ಎಚ್.ಎಸ್ ರೋಡ್ ಮಂಗಳೂರು. ದೂರವಾಣಿ ಸಂಖ್ಯೆ: 0824-2951814 ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X