Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಮರಳುಗಾರಿಕೆ: ನಿರ್ದಾಕ್ಷಿಣ್ಯ...

ಅಕ್ರಮ ಮರಳುಗಾರಿಕೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Dec 2023 8:25 PM IST
share
ಅಕ್ರಮ ಮರಳುಗಾರಿಕೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ ತೀರದಲ್ಲಿ ಮರಳುಗಾರಿಕೆ ನಿಷೇಧ ಇರುವುದರಿಂದ ಅಕ್ರಮ ಮರಳುಗಾರಿಕೆ ಆಗದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಎಚ್ಚರ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ಆಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಅಕ್ರಮ ಮರಳುಗಾರಿಕೆ ಕಂಡು ಬಂದ ತಕ್ಷಣ ಸಂಬಂಧಿಸಿದ ವಾಹನ ಸಂಖ್ಯೆಯ ಆಧಾರದ ಮೇಲೆ ಪೋಲಿಸ್ ಇಲಾಖೆ ಯಲ್ಲಿ ದೂರು ದಾಖಲಿಸಬೇಕು. ಇದರಿಂದ ಯಾವ ಸ್ಥಳದಿಂದ ಅಕ್ರಮ ಮರಳು ಸಾಗಾಣಿಕೆಯಾಗುತ್ತಿದೆ ಎಂದು ಕಂಡು ಹಿಡಿಯಬಹುದು. ಈ ರೀತಿಯ ಪ್ರಕರಣಗಳನ್ನು ನಿರ್ಲಕ್ಷಿಸದೆ, ಅದರ ಆಳದವರೆಗೆ ಹೋಗಿ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ಹೇಳಿದರು.

ತಾಲೂಕು ಮಟ್ಟದಲ್ಲಿ ಇರುವ ಕಂಟ್ರೋಲ್ ರೂಂ ಮೂಲಕ ಮತ್ತು ಸಿಸಿ ಕ್ಯಾಮೆರಾಗಳ ಮೂಲಕ ಈ ಕಾರ್ಯವನ್ನು ಚುರುಕುಗೊಳಿಸಬೇಕು. ಲೈಸೆನ್ಸ್ ಇಲ್ಲದೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮವಹಿಸಿ ಅಂತಹ ಪ್ರಕರಣಗಳ ಮೇಲೆ ಕಾನೂನು ರೀತಿ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣು ಇಡಬೇಕು. ಅಕ್ರಮ ಮರಳುಗಾರಿಕೆಯಲ್ಲಿ ದಾಖಲಾಗಿ ರುವ ಪ್ರಕರಣವನ್ನು ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರಿ ವಹಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ ಮರಳು ಕಳ್ಳತನ ಮಾಡುವ ವಾಹನ ಅಥವಾ ದೋಣಿಯನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಬೇಕು. ನಾನ್ ಸಿ.ಆರ್.ಝಡ್ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಅಥವಾ ಮರಳು ದಾಸ್ತಾನು ತಡೆಗಟ್ಟಲು ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯೆಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಥನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X