Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಕ್ಷೇತ್ರಕ್ಕೆ ಕುಡಿಯುವ ನೀರಿಗೆ...

ಮಂಗಳೂರು ಕ್ಷೇತ್ರಕ್ಕೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸ್ಪೀಕರ್ ಯು.ಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ20 Dec 2023 6:03 PM IST
share
ಮಂಗಳೂರು ಕ್ಷೇತ್ರಕ್ಕೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸ್ಪೀಕರ್ ಯು.ಟಿ ಖಾದರ್

ಕೊಣಾಜೆ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್‌ ಮಾನಿಟರಿಂಗ್‌ ಆಪ್‌ ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್‌ ಹೇಳಿದರು.

ದೇರಳಕಟ್ಟೆಯ ದ ಕಂಫರ್ಟ್‌ ಇನ್‌ ಸಭಾಂಗಣದಲ್ಲಿ ಮಂಗಳವಾರ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧಿಕಾರಿಗಳು , ಅಧ್ಯಕ್ಷರು, ಉಪಾಧ್ಯಕ್ಷರು , ಉಳ್ಳಾಲ ತಾಲೂಕು ತಹಶೀಲ್ದಾರ್‌ ಸಮ್ಮುಖದಲ್ಲಿ ಹಮ್ಮಿಕೊಂಡ ಕುಡಿಯುವ ನೀರು ಕುರಿತ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾರ್ಚ್‌, ಎಪ್ರಿಲ್‌, ಮೇ ತಿಂಗಳಲ್ಲಿ ಮಂಗಳೂರು ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಯೋಜನೆಗೆ ತೊಂದರೆಯಾಗ ದಂತೆ ಅಧಿಕಾರಿಗಳು, ಪಿಡಿಓ, ಸೆಕ್ರೆಟರಿಗಳು ಪಂಚಾಯಿತಿ ಅಧ್ಯಕ್ಷರು , ಗ್ರಾಮದ ಹಿರಿಯರನ್ನು ಕ್ರೂಢೀಕರಿಸಿಕೊಂಡು ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ. ಕಳೆದ ವರ್ಷ ಯಾವ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಅನ್ನುವ ಕುರಿತು ವರದಿಯನ್ನು ಅಧಿಕಾರಿಗಳಿಂದ ಪಡೆಯಲಾಗಿದೆ. ಆ ಭಾಗಗಳಲ್ಲಿ ಪ್ರಸಕ್ತ ವರ್ಷ ತೊಂದರೆಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆ ಹಾಗೂ ಅಧಿಕಾರಿಗಳು ಪೂರ್ವಭಾವಿಯಾಗಿ ತಯಾರಿರಬೇಕು ಅನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಮೊದಲ ಪ್ರಯತ್ನವಾಗಿ ಕುಡಿಯುವ ನೀರಿನ ಟ್ಯಾಂಕರುಗಳಿಗೆ ಮಾನಿಟರಿಂಗ್‌ ಆಪ್‌ ಯೋಜನೆಯನ್ನು ರೂಪಿಸಲಾಗಿದೆ. ಅದರ ಸಾಧಕ ಬಾಧಕ ಹಾಗೂ ತಾಂತ್ರಿಕ ವಿಚಾರಗಳ ಕುರಿತು ಅಧಿಕಾರಿ ವರ್ಗದವರಿಗೆ ಅರಿಯಲು ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲು ಸೂಚಿಸಲಾಗಿದೆ. ಕ್ಷೇತ್ರದಲ್ಲಿ ಸಮಗ್ರವಾಗಿ ಜಾರಿಯಾದಲ್ಲಿ ರಾಜ್ಯದಲ್ಲಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ರಾಜ್ಯದಾದ್ಯಂತ ನೀರಿನ ಅಭಾವ ತಪ್ಪಿಸಲು ಪ್ರಾಮಾಣಿಕ ಪ್ರಯತ್ನವನ್ನು ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 200 ಕೋಟಿ ರೂ. ಅನುದಾನ ಬಿಡುಗಡೆಯಾಗುವ ಕೊನೆಯ ಹಂತದಲ್ಲಿದೆ. ಉಳ್ಳಾಲ ನಗರ ವ್ಯಾಪ್ತಿಯ ಕೆಲಸ ಪೂರ್ಣಗೊಂಡರೂ, ಗ್ರಾಮೀಣ ಮಟ್ಟಕ್ಕೆ ಎರಡು ವರ್ಷಗಳಲ್ಲಿ ಅನುದಾನ ಬಿಡುಗಡೆಯಾಗಲಿದೆ. ಟೆಂಡರ್‌ ಪ್ರಕ್ರಿಯೆ ನಡೆದು ಎರಡು ವರ್ಷ ಬೇಕಾಗುತ್ತದೆ. ಆನಂತರ ನೀರಿನ ವ್ಯವಸ್ಥೆ ಆಗಲಿದೆ. ಗ್ರಾ.ಪಂ.ನವರು ವರ್ಷಕ್ಕೆ 12 ಲಕ್ಷ ನೀರಿಗಾಗಿ ಗ್ರಾ.ಪಂ.ನಿಂದ ಕೊಡುವ ಬದಲು ಟ್ಯಾಂಕರ್‌ ಖರೀದಿಗೆ ಕೇಳಿಕೊಂಡಿದ್ದಾರೆ. ಆದರೆ ಸರಕಾರದಿಂದ ಟ್ಯಾಂಕರ್‌ ಬಾಡಿಗೆ ಪಡೆಯಲು ಮಾತ್ರ ಅವಕಾಶವಿದೆ. ಕರಾರುಪತ್ರದಂತೆ ಟ್ಯಾಂಕರ್‌ ಅನ್ನು ಸದ್ಯಕ್ಕೆ ನೀಡಬಹುದು. ಮುಂದೆಯೂ ಸಮಸ್ಯೆ ಮುಂದುವರಿದಲ್ಲಿ ರಾಜ್ಯದ ಸಚಿವರುಗಳ ಚರ್ಚಿಸಲಾಗುವುದು ಎಂದರು.

ಜಲಯೋಜನೆ, ಕಂದಾಯ , ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ ಫೋರ್ಸ್‌ ಕುಡಿಯುವ ನೀರಿನ ಯೋಜನೆಯಲ್ಲಿ ಕಾರ್ಯಾಚರಿಸಲಿದೆ. ಇಲಾಖೆಗಳ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ತಹಶೀಲ್ದಾರ್‌ ಪುಟ್ಟರಾಜು ಡಿ., ಉಪತಹಶೀಲ್ದಾರ್‌ ನವನೀತ್‌ ಮಾಳವ, ಕಂದಾಯ ನಿರೀಕ್ಷಕ ಪ್ರಮೋದ್‌ ಕುಮಾರ್‌, ಕೃಷಿ ಇಲಾಖೆ ಅಧಿಕಾರಿ ವೀಣಾ ರೈ, ಮಂಗಳೂರು ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ ಅಧ್ಯಕ್ಷರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X